Amit Shah -ಸದ್ಯ ಲೋಕಸಭಾ ಚುನಾವಣೆ ದೇಶದಾದ್ಯಂತ ಭರದಿಂದ ಸಾಗುತ್ತಿದೆ. ದೇಶದ ಎಲ್ಲಾ ಭಾಗಗಳಲ್ಲಿ ಚುನಾವಣೆ ಮುಗಿದ ಬಳಿಕ ಜೂನ್ 4 ರಂದು ಆಡಳಿತರೂಢ ಎನ್.ಡಿ.ಎ ಒಕ್ಕೂಟ 12.30 ವೇಳೆಗೆ 400 ಸ್ಥಾನಗಳ ಗಡಿಯನ್ನು ದಾಟುತ್ತದೆ ಎಂದು ಗೃಹ ಸಚಿವ ಅಮಿತಾ ಭವಿಷ್ಯ ನುಡಿದಿದ್ದಾರೆ.
ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಬಾರಿ 400 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಬಿಜೆಪಿಯು 2019 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಯಾವ ರೀತಿ ಸಾಧನೆ ಮಾಡಿದೆಯೋ ಅದೇ ರೀತಿಯಲ್ಲಿ ಈ ಬಾರಿ ಪುನಾರ್ವತನೆಯಾಗಲಿದೆ. ದೆಹಲಿ, ಕರ್ನಾಟಕ, ಮಹಾರಾಷ್ಟ್ರ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶದಲ್ಲಿ ಫಲಿತಾಂಶ ಪುನರಾವರ್ತನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನೂ ಪಶ್ಚಿ ಬಂಗಾಳದಲ್ಲಿ ಕನಿಷ್ಟ 30 ಸ್ಥಾನಗಳನ್ನು ಈ ಬಾರಿ ಬಿಜೆಪಿ ಗೆಲ್ಲಲಿದೆ. ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ಕೇರಳ ಹಾಗೂ ಆಂಧ್ರಪ್ರದೇಶದಲ್ಲಿ ಭಾರಿ ಸ್ಪರ್ಧೆ ಇರುತ್ತದೆ ಎಂದು ಅಮಿತ್ ಶಾ ಒಪ್ಪಿಕೊಂಡಿದ್ದಾರೆ. ಆದರೆ ಈ ಬಾರಿ ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಎನ್.ಡಿ.ಎ ಖಾತೆ ತರೆಯಲಿದೆ. ದಕ್ಷಿಣದ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೇಸ್ ಗಿಂತ ಮುಂದಿದ್ದೇವೆ ಎಂದಿದ್ದಾರೆ. ಜೊತೆಗೆ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ರವರ ಎಲೆಕ್ಟ್ರಾನಿಕ್ ಮತಯಂತ್ರ ಟ್ಯಾಂಪರಿಂಗ್ ಆರೋಪಕ್ಕೂ ಸಹ ಅಮಿತ್ ಶಾ ಕೌಂಟರ್ ಕೊಟ್ಟಿದ್ದಾರೆ. ಟ್ಯಾಂಪರಿಂಗ್ ಆರೋಪ ನಿಜವಾಗಿದ್ದರೇ ತಮಿಳುನಾಡಿನಲ್ಲಿ ಹಾಗೂ ತೆಲಂಗಾಣದಲ್ಲಿ ಬಿಜೆಪಿ ಗೆಲ್ಲಲಿಲ್ಲ ಏಕೆ ಎಂದು ಕೌಂಟರ್ ಕೊಟ್ಟಿದ್ದಾರೆ.