Annamalai – ತಮಿಳುನಾಡಿ ಆಡಳಿತರೂಢ ಡಿಎಂಕೆ ಪಕ್ಷದ ನಾಯಕ ಸ್ಟಾಲಿನ್ ರವರನ್ನು ಮನೆಗೆ ಕಳಿಹಿಸುವವರೆಗೂ ನಾನು ಚಪ್ಪಲಿ ಧರಿಸಲ್ಲ ಎಂದು ಭಾರತೀಯ ಜನತಾ ಪಕ್ಷದ (Bharatiya Janata Party) ಅಧ್ಯಕ್ಷ ಕೆ ಅಣ್ಣಾಮಲೈ (K Annamalai) ಗುರುವಾರ (ಡಿಸೆಂಬರ್ 26) ಸವಾಲಿನ ಪ್ರತಿಜ್ಞೆ ಮಾಡಿದ್ದಾರೆ. ತಮಿಳುನಾಡು ರಾಜ್ಯದಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೆ ಚಪ್ಪಲಿ ಧರಿಸುವುದಿಲ್ಲ ಎಂದ ಗುರುವಾರ ಶಪಥ ಮಾಡಿದ್ದಾರೆ.
ಕಳೆದೆರಡು ದಿನಗಳ ಹಿಂದೆಯಷ್ಟೆ ತಮಿಳುನಾಡಿನ ಪ್ರತಿಷ್ಠಿತ ಅಣ್ಣಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ಅಪರಿಚಿತ ವ್ಯಕ್ತಿಗಳು 2ನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಂತ ಆಘಾತಕಾರಿ ಘಟನೆ ನಡೆದಿತ್ತು. ಆಕೆ ಡಿಸೆಂಬರ್ 24 ರಂದು ಈ ಬಗ್ಗೆ ದೂರನ್ನು ದಾಖಲಿಸಿದಾಗ ವಿಷಯ ಬೆಳಕಿಗೆ ಬಂದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಸಂಘಟನೆಗಳಿಂದ ಭಾರೀ ಆಕ್ರೋಶ, ಪ್ರತಿಭಟನೆಗಳು ಕೂಡಾ ನಡೆದಿವೆ. ಸದ್ಯ ಈ ಪ್ರಕರಣ ರಾಜಕೀಯ ತಿರುವನ್ನು ಪಡೆದುಕೊಂಡಿದೆ. ಡಿಎಂಕೆ ಸರ್ಕಾರದಿಂದ ರಾಜ್ಯದ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಈ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ನಾನು ಚಪ್ಪಲಿ ಧರಿಸುವುದಿಲ್ಲ ಎಂದು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪ್ರತಿಜ್ಞೆಯನ್ನು ಮಾಡಿದ್ದಾರೆ.
ಈ ಸಂಬಂಧ ಕೊಯಮತ್ತೂರಿನನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಡಿ.ಎಂ.ಕೆ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೆ ನಾನು ಪಾದರಕ್ಷೆಯನ್ನು ಧರಿಸುವುದಿಲ್ಲ ಎಂದು ಹೇಳಿದರು. ಶುಕ್ರವಾರ ನನ್ನ ಮನೆ ಮುಂದೆ ಪ್ರತಿಭಟನೆ ಮಾಡುತ್ತೇನೆ. ಆರು ಬಾಟಿ ಚಾಟಿ ಬಿಸುತ್ತೇನೆ. ಇತರ ಕಾರ್ಯಕರ್ತರು ಈ ರೀತಿ ಮಾಡಿ ಎಂದು ನಾನು ಒತ್ತಾಯಿಸುವುದಿಲ್ಲ. ಜೊತೆಗೆ ಮುಂದಿನ 48 ದಿನಗಳವರೆಗೆ ನಾನು ಉಪವಾಸ ಮಾಡಲಿದ್ದೇನೆ ಎಂದು ಹೇಳಿದ್ದಾರೆ.
ಸಂಬಂಧಪಟ್ಟ ಪೋಸ್ಟ್ ಇಲ್ಲಿದೆ ನೋಡಿ: Click Here
ಇನ್ನೂ ಈ ಸಂಬಂಧ ಚೆನೈನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕಿ ತಮಿಳಿಸೈ ಸೌಂದರರಾಜನ್ ಹಾಗೂ ಪಕ್ಷದ ಕಾರ್ಯಕರ್ತರನ್ನೂ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಈ ಪ್ರಕರಣದ ಸಂತ್ರಸ್ತೆಯ ವೈಯುಕ್ತಿಕ ಮಾಹಿತಿಯನ್ನು ಸಹ ಸೋರಿಕೆ ಮಾಡಲಾಗಿದೆ. ಎಫ್‌ಐಆರ್ ಹೇಗೆ ಸಾರ್ವಜನಿಕರ ಕೈಗೆ ಸಿಕ್ಕಿದೆ. ಎಫ್‌ಐಆರ್ ಸೋರಿಕೆ ಮಾಡುವ ಮೂಲಕ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಲಾಗಿದೆ. ಹೀಗೆ ಮಹಿಳೆಯ ಗುರುತನ್ನು ಸೋರಿಕೆ ಮಾಡಿದ್ದಕ್ಕೆ ಪೊಲೀಸರು ಮತ್ತು ಡಿಎಂಕೆ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ ಅವರು. ಈ ಸಂಬಂಧ ನಾವು ಮತಷ್ಟು ಹೋರಾಟ ಮಾಡಲಿದ್ದೇವೆ ಎಂದು ಆಕ್ರೋಷ ಹೊರಹಾಕಿದ್ದಾರೆ.