Author: by Admin
ಗುಡಿಬಂಡೆ: ತಾಲೂಕಿನ ಉಲ್ಲೋಡು ಗ್ರಾ.ಪಂ. ವ್ಯಾಪ್ತಿಯ ಐದು ಗ್ರಾಮಗಳು ಸೇರಿ ಹಮ್ಮಿಕೊಂಡಿದ್ದ ಮೂರು ದಿನಗಳ ಜಾತ್ರಾ ಮಹೋತ್ಸವ ಹಾಗೂ ತೆಂಗಿನ ಕಾಯಿ ಕಾಯುಟ್ಲು ಪರುಷೆ ಅದ್ದೂರಿಯಾಗಿ ನೆರವೇರಿದ್ದು, ಪರುಷೆಯಲ್ಲಿ ಪಾನಕ, ಮಜ್ಜಿಗೆ, ಹೆಸರು ಬೆಳೆ ಹಂಚಿಕೆ: ಜಾತ್ರೆಯಲ್ಲಿ ದೂರದಿಂದ ಬಂದಂತಹ ಭಕ್ತಾಗಳಿಗೆ ಐದು ಗ್ರಾಮಗಳ ಜನರು ಎತ್ತಿನಗಾಡಿ, ಟ್ರಾಕ್ಟರ್‌ಗಳ ಮೂಲಕ ಮಜ್ಜಿಗೆ, ಬೆಲ್ಲದ ಪಾನಕ, ಹೆಸರು ಬೆಳೆ ಹಂಚಿದರು. ತಾಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿಯ, ಉಲ್ಲೋಡು, ಪುಲುವಮಾಕಲಹಳ್ಳಿ, ಅಲಗದರೇನಹಳ್ಳಿ, ಗೇರುಮರದಹಳ್ಳಿ, ಚೌಟತಿಮ್ಮನಹಳ್ಳಿ, ಗ್ರಾಮಗಳು ಅಭಯ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶತಮಾನಗಳಿಂದ ಗ್ರಾಮಗಳ ಹಬ್ಬವಾಗಿ ಈ ಜಾತ್ರೆಯನ್ನು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಈ ಜಾತ್ರೆಯಲ್ಲಿ ನೂರಾರು ಸಂಖ್ಯೆಯಲ್ಲಿ ಯುವಕರು ಹಿರಿಯರು ಮತ್ತು ಮಹಿಳೆಯರು ಭಾಗವಹಿಸಿ ಸಡಗರ ಸಂಭ್ರಮದಿಂದ ಜನರು ಒಂದೆಡೆ ಸೇರಿ ಊಟ್ಲು ಪರುಷೆಯನ್ನು ಆಚರಿಸಿದರು. ಎತ್ತರದ ಮರದ ಕಂಬದ ಮೇಲೆ ನಿರ್ಮಿಸಿರುವ ತಿರುಗುವ ತೊಟ್ಟಿಲಲ್ಲಿ ಇಬ್ಬರು ಕುಳಿತು ಉದ್ದವಾದ ಹಗ್ಗಕ್ಕೆ ತೆಂಗಿನ ಕಾಯಿ ಕಟ್ಟಿ ಒಡೆಯುವುದು ಇಲ್ಲಿನ ಜಾತ್ರೆಯ ವಿಶೇಷ. ಹತ್ತಾರು…
ಕರ್ನಾಟಕದ ಕಾಂಗ್ರೇಸ್ ಸರ್ಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರವರಿಗೆ ಕೆಪಿಸಿಸಿ ಘಟಕದಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಡಿಕೆಶಿ ಸರ್ಕಾರ ಒಂದು ಪೂರೈಸಿದ್ದು ಮುಖ್ಯವಲ್ಲ, ನಾಲ್ಕು ವರ್ಷಗಳಲ್ಲಿ ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿರುವುದು ಮುಖ್ಯ ಎಂದು ಹೇಳಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೇಸ್ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಬಂದು ಒಂದು ವರ್ಷವಾಗಿದೆ. ಸರ್ಕಾರ ಒಂದು ವರ್ಷ ಪೂರೈಸಿದ್ದು ಮುಖ್ಯವಲ್ಲ ಬದಲಿಗೆ ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿರುವುದು ಮುಖ್ಯ. ಸದ್ಯ ಬಿಬಿಎಂಪಿ ಎಲೆಕ್ಷನ್ ಬಗ್ಗೆ ಚರ್ಚೆ ಬೇಡ. ಅದಕ್ಕಿನ್ನು ಟೈಮ್ ಇದೆ. ದಿವಂಗತ ರಾಜೀವ್ ಗಾಂಧಿ ರವರು ತಂದತಹ ತಿದ್ದುಪಡಿಯಿಂದಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವನೆ ನಡೆಯುತ್ತಿದೆ. ಅದಕ್ಕೆಲ್ಲಾ ತಯಾರಿ ಮಾಡಿಕೊಳ್ಳಬೇಕು. ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದೇವಾ ಅಥವಾ ಸೋತಿದ್ದೇವಾ ಎಂಬುದು ಮುಖ್ಯವಲ್ಲ ಎಲ್ಲಾ ಲೀಡರ ಗಳು ಕ್ರೀಯಾಶೀಲವಾಗಿರಬೇಕು.…
ಬಾಗೇಪಲ್ಲಿ: ತಾಲೂಕಿನ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಕೃಷಿ ಸಲಕರಣೆಗಳನ್ನು ಸಮರ್ಪಕವಾಗಿ ವಿತರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಹಾಗೂ ರೈತ ಮುಖಂಡರು ಕೃಷಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಮುಖಂಡರು ಕಳೆದ ವರ್ಷ ಮಳೆ ಅಭಾವದಿಂದ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತಲ್ಲದೆ ತಾಲೂಕಿನ ಯಾವುದೇ ರೈತರಿಗೂ ಬೆಳೆ ಕೈಗೆ ಸಿಕ್ಕಿಲ್ಲ, ಈ ವರ್ಷದಲ್ಲಿ ಮುಂಗಾರಿಗೂ ಮುನ್ನವೇ ಅಲ್ಪಸ್ವಲ್ಪ ಮಳೆಯಾಗುತ್ತಿದ್ದು ರೈತರು ಕೃಷಿ ಚಟುವಟಿಕೆ ಪ್ರಾರಂಭಿಸಿದ್ದಾರೆ ಈ ನಿಟ್ಟಿನಲ್ಲಿ ರಾಗಿ, ಮುಸಕಿನ ಜೋಳ, ಅಲಸಂಧಿ, ಶೇಂಗಾ ಇತ್ಯಾಧಿ ಉತ್ತಮ ಗುಣಮಟ್ಟದ ಭಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಕೃಷಿ ಸಲಕರಣೆಗಳನ್ನು ರೈತರ ಅಗತ್ಯದ ಅನುಸಾರವಾಗಿ ಪೂರೈಸುವಂತೆ ಮನವಿ ಮಾಡಿದರು. ರೈತರಿಗೆ ವಿತರಿಸುವ ಬಿತ್ತನೆ ಬೀಜ ಗುಣಮಟ್ಟವನ್ನು ಪರೀಕ್ಷೆ ಮಾಡಿ ವಿತರಿಸಿ ಒಂದು ವೇಳೆ ಕಳಪೆ ಗುಣಮಟ್ಟದ ಬಿತ್ತನೆ ಬೀಜ…
ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತಿದೆ. ಆದರೆ ಕೆಲವೊಮ್ಮೆ ಇದು ಸುಳ್ಳಾಗುತ್ತೆ. ಗಂಭೀರ ಕಾರಣಗಳಿಂದ ಕೆಲವೊಂದು ಕಡೆ ಅನಾಹುತಗಳು ಸಂಭವಿಸುತ್ತವೆ. ಕೆಲವೊಮ್ಮೆ ಕ್ಷುಲ್ಲಕ ಕಾರಣಗಳಿಂದಲೂ ಆತ್ಮಹತ್ಯೆಗಳು, ಕೊಲೆಗಳು, ಹಲ್ಲೆಗಳು ನಡೆದಿರುವ ಘಟನೆಗಳ ಬಗ್ಗೆ ಕೇಳಿರುತ್ತೇವೆ. ಅಂತಹುದೇ ಘಟನೆಯೊಂದು ನಡೆದಿದೆ. ಕೇವಲ 200 ರೂಪಾಯಿಗಾಗಿ ದಂಪತಿಯ ನಡುವೆ ಗಲಾಟೆ ನಡೆದಿದ್ದು, ಈ ಗಲಾಟೆಯ ಕಾರಣದಿಂದ ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಬಾಂದಾ ಜಿಲ್ಲೆಯ ಇಟ್ರಾ ಖುರ್ದ್ ಎಂಬಲ್ಲಿ ನಡೆದಿದೆ. ತನ್ನ ಪತ್ನಿ ಮನೆಯ ಖರ್ಚಿಗಾಗಿ 200 ರೂಪಾಯಿ ಕೇಳಿದ್ದಳಂತೆ. ಪತಿ ನೀಡಿರಲಿಲ್ಲವಂತೆ ಈ ಕಾರಣದಿಂದ ಇಬ್ಬರು ನಡುವೆ ಜಗಳ ಆಗಿ ಪತ್ನಿ ತವರು ಮನೆಗೆ ಹೋಗಿದ್ದಾಳೆ. ಇದರಿಂದ ಪತಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ದುರ್ದೈವಿಯನ್ನು 22 ವರ್ಷ ಅಜ್ಜು ಎಂದು ಗುರ್ತಿಸಲಾಗಿದೆ. ಇನ್ನೂ ಅಜ್ಜು ವಿಷ ಸೇವಿಸಿದ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಸ್ಥಳಿಯರ ಸಹಾಯದೊಂದಿಗೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು…
ಅತ್ಯಾಚಾರಗಳು, ಲೈಂಗಿಕ ದೌರ್ಜನ್ಯಗಳಿಗೆ ಕಾನೂನಿನಲ್ಲಿ ಕಠಿಣ ಶಿಕ್ಷೆಯಿದ್ದರೂ ಸಹ ಕೆಲವು ಪುಂಡರು ಅತ್ಯಾಚಾರಗಳು, ಲೈಂಗಿಕ ದೌರ್ಜನ್ಯ ಮಾಡುವಂತಹ ಕೃತ್ಯಕ್ಕೆ ಮುಂದಾಗುತ್ತಿರುತ್ತಾರೆ. ಚಿಕ್ಕಬಳ್ಳಾಪುರದ ಪೇರೆಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಯೊಬ್ಬ ಇಬ್ಬರು ವಿದ್ಯಾರ್ಥಿನಿಯರಿಗೆ ಡ್ರಾಪ್ ಕೊಡುತ್ತೇನೆ ಎಂದು ಹೇಳಿ ಅತ್ಯಾಚಾರಕ್ಕೆ ಮುಂದಾಗಿದ್ದಾನೆ. ಆದರೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರೂ ವಿದ್ಯಾರ್ಥಿನಿಯರನ್ನು ರಕ್ಷಣೆ ಮಾಡಿ, ಆರೋಪಿಯನ್ನು ಬಂಧನ ಮಾಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಪೇರೆಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿನೀಯರಿಬ್ಬರಿಗೆ ಡ್ರಾಪ್ ಕೊಡುವುದಾಗಿ ಕರೆದುಕೊಂಡು ಹೋದ ವ್ಯಕ್ತಿಯೋರ್ವ ಅತ್ಯಾಚಾರಕ್ಕೆ ಮುಂದಾಗಿದ್ದಾನೆ. ವಿದ್ಯಾರ್ಥಿನಿಯರಿಬ್ಬರು ಮದುವೆಯೊಂದರ ರಿಸೆಪ್ಷನ್ ಕೆಲಸ ಮುಗಿಸಿಕೊಂಡು ತಡರಾತ್ರಿ ತಮ್ಮ ಗ್ರಾಮಕ್ಕೆ ಹೋಗಲು ಸಿದ್ದವಾಗಿದ್ದಾರೆ. ಈ ವೇಳೆ ಪೋಲಕುಂಟಹಳ್ಳಿ ಎಂಬ ಗ್ರಾಮದ ನಿವಾಸಿ ಶ್ರೀಕಾಂತ್ ಆ ವಿದ್ಯಾರ್ಥಿನಿಯರಿಗೆ ಡ್ರಾಪ್ ಕೊಡುವ ಡ್ರಾಮಾ ಆಡಿದ್ದಾನೆ. ಇಬ್ಬರನ್ನೂ ಬೈಕ್ ಮೇಲೆ ಕೂರಿಸಿಕೊಂಡು ಸಾಗಿದ್ದಾನೆ. ಪೇರೆಸಂದ್ರದಿಂದ ಚಿಕ್ಕಬಳ್ಳಾಪುರಕ್ಕೆ ಡ್ರಾಪ್ ಕೊಡುವ ನೆಪದಲ್ಲಿ ಬೈಕ್ ಹತ್ತಿಸಿಕೊಂಡ ಶ್ರೀಕಾಂತ್ ಹೆದ್ದಾರಿಗೆ ಬರುವ ಬದಲು ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದನಂತೆ. ಅರಣ್ಯ…
ಕಳೆದೆರಡು ದಿನಗಳ ಹಿಂದೆಯಷ್ಟೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್.ಫಾರ್ಮ್ ಹೌಸ್ ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಪಾರ್ಟಿಯಲ್ಲಿ ತೆಲುಗು ಸಿನಿರಂಗದ ಕೆಲ ನಟ-ನಟಿಯರು ಸಹ ಭಾಗಿಯಾಗಿದ್ದಾಗಿ ಸುದ್ದಿಗಳು ಕೇಳಿಬಂದವು. ಈ ವೇಳೆ ತೆಲುಗು ನಟಿ ಹೇಮಾ ಸಹ ಪಾರ್ಟಿಯಲ್ಲಿ ಭಾಗಿಯಾಗಿದ್ದಾಗಿ ಬಳಿಕ ಆಕೆ ಬಂದಿಲ್ಲ ಎಂದು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದರು. ಆದರೆ ಇದೀಗ ಆಕೆ ಸುಳ್ಳು ಹೇಳಿದ್ದಾಳೆ. ಆಕೆ ಸಹ ಪಾರ್ಟಿಯಲ್ಲಿದ್ದರು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸ್ಪಷ್ಟನೆ ನೀಡಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಬಳಿಯಿದ್ದ ಜಿ.ಆರ್. ಫಾರ್ಮ್ ಹೌಸ್ ನಲ್ಲಿ ನಡೆದ ರೇವ್ ಪಾರ್ಟಿ ಭಾರಿ ಸದ್ದು ಮಾಡುತ್ತಿದೆ. ಸನ್ ಸೆಟ್ ಟು ಸನ್ ರೈಸ್ ವಿಕ್ಟರಿ ಎಂಬ ಹೆಸರಿನಲ್ಲಿ ಈ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಅದರಲ್ಲೂ ಪ್ರಮುಖವಾಗಿ ಈ ಪಾರ್ಟಿಯಲ್ಲಿ ಕೆಲ ತೆಲುಗು ನಟಿಯರು, ನಟರು, ಮಾಡಲ್ ಗಳು ಸೇರಿದಂತೆ ಕೆಲವು ಸೆಲಬ್ರೆಟಿಗಳು…
ಕರ್ನಾಟಕ ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಹೊರಗುತ್ತಿಗೆ ಮೇರೆಗೆ ನೇಮಕಾತಿ ಮಾಡಿಕೊಳ್ಳುವಂತಹ ಹುದ್ದೆಗಳಿಗೆ ಇನ್ನು ಮುಂದೆ ಮೀಸಲಾತಿಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂಬ ಆದೇಶವೊಂದನ್ನು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಚತಾ ಸಿಬ್ಬಂದಿ ಹಾಗೂ ಗ್ರೂಪ್ ಡಿ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇರೆಗೆ ಭರ್ತಿ ಮಾಡಿಕೊಳ್ಳುವಾಗ ಹೊಸ ಆದೇಶ ಪಾಲನೆ ಮಾಡಬೇಕೆಂದು ಹೊಸ ಆದೇಶದಲ್ಲಿ ಸೂಚಿಸಿದೆ. ಇನ್ನೂ ರಾಜ್ಯ ಸರ್ಕಾರದಲ್ಲಿ ಇನ್ನು ಮುಂದೆ ಯಾವುದೇ ಹೊರಗುತ್ತಿಗೆ ನೇಮಕಾತಿ ಮಾಡುವಾಗ ಮೀಸಲಾತಿಯನ್ನು ಪಾಲನೆ ಮಾಡಬೇಕಿದೆ. ಕಳೆದ 2023ರ ಡಿಸೆಂಬರ್ ಮಾಹೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಗೆ ಸಂಬಂಧಿಸಿದಂತೆ ಮೀಸಲಾತಿ ನೀಡಿಯನ್ನು ಜಾರಿಗೊಳಿಸಲು ನಿರ್ಣಯ ತೆಗೆದುಕೊಳ್ಳಲಾಗಿತ್ತು. ಅದರಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವಂತ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಮೀಸಲಾತಿ ನಿಯಮಗಳು ಈ ಕೆಳಕಂಡತಿದೆ: ಹೊರಗುತ್ತಿಗೆ ಮೀಸಲಾತಿಯು ನೀತಿಯು…
ಕೆಲವು ದಿನಗಳ ಹಿಂದೆಯಷ್ಟೆ ಚೆನೈನ ತಿರುಮುಲ್ಲೈವಾಯಲ್ ನ ಅಪಾರ್ಟ್‌ಮೆಂಟ್ ನಲ್ಲಿ ಕೆಳಗೆ ಬೀಳುತ್ತಿದ್ದ ಮಗುವನ್ನು ಜೀವಂತವಾಗಿ ರಕ್ಷಣೆ ಮಾಡಲಾಗಿತ್ತು. ಆ ಸಮಯದಲ್ಲಿ ತೆಗೆದಂತಹ ಮಗುವಿನ ರಕ್ಷಣೆಯ ವಿಡಿಯೋ ಭಾರಿ ವೈರಲ್ ಆಗಿತ್ತು. ಇದೀಗ ಆ ಮಗುವಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಸೋಷಿಯಲ್ ಮಿಡಿಯಾದಲ್ಲಿ ಬಂದಂತಹ ಟ್ರೋಲ್ ಗಳು ಎಂದು ಹೇಳಲಾಗುತ್ತಿದೆ. ಈ ಕುರಿತು ಕೋಯಮತ್ತೂರು ಜಿಲ್ಲೆಯ ಕರಮಡೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳೆದ ಏಪ್ರಿಲ್ 28 ರಂದು ಚೆನೈನ ತಿರುಮುಲ್ಲೈವಾಯಲ್ ನ ಅಪಾರ್ಟ್‌ಮೆಂಟ್ ನಲ್ಲಿ ಕೆಳಗೆ ಬೀಳುತ್ತಿದ್ದ ಮಗುವನ್ನು ಜೀವಂತವಾಗಿ ರಕ್ಷಣೆ ಮಾಡಲಾಗಿತ್ತು. ಕೋಯಮತ್ತೂರಿನ ಕರಮಡೈ ಬೆಳ್ಳತ್ತಿಯ ವಾಸುದೇವನ್ ರವರ ಎರಡನೇ ಮಗಳು ರಮ್ಯಾ ಹಾಗೂ ಆಕೆಯ ಪತಿ ವೆಂಕಟೇಶ್ ತಮ್ಮ ಇಬ್ಬರು ಮಕ್ಕಳೊಂದಿಗೆ ತಿರುಮುಲ್ಲೈವಾಯಲ್ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದರು. ಕೆಲವು ದಿನಗಳ ಹಿಂದೆಯ ಅಪಾರ್ಟ್‌ಮೆಂಟ್ ಮೇಲಿಂದ ಅವರ 7 ತಿಂಗಳ ಮಗು ಬೀಳುತ್ತಿದ್ದನ್ನು ಗಮನಸಿದ ಸ್ಥಳಿಯರು ಮಗುವನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದರು.…
ಕರ್ನಾಟಕ ರಾಜ್ಯ ಕಾಂಗ್ರೇಸ್ ಸರ್ಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದು, ಕಾಂಗ್ರೇಸ್ ಆಡಳಿತವನ್ನು ವಿರೋಧ ಪಕ್ಷದ ನಾಯಕರು ಟೀಕೆ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ನಾಯಕರ ಟೀಕೆ ಮಾಡಿದ್ದಾರೆ. ಈ ಕುರಿತು ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಒಂದು ವರ್ಷ ಸರ್ಕಾರ ಹೇಗೆ ಕೆಲಸ ಮಾಡಿದೆ ಅಂತಾ ಜನರು ಹೇಳಬೇಕು, ನಾಯಕರು ಹೇಳೋದಲ್ಲ ಎಂದು ಆರೋಪಗಳಿಗೆ ಕೌಂಟರ್ ಕೊಟ್ಟಿದ್ದಾರೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒಂದು ವರ್ಷ ಸರ್ಕಾರ ಐಸಿಯುನಲ್ಲಿತ್ತು ಎಂದು ಹೇಳಿಕೆ ನೀಡಿದ್ದರು. ಈ ಆರೋಪಕ್ಕೆ ಡಿಕೆಶಿ ಕೌಂಟರ್ ಕೊಟ್ಟಿದ್ದಾರೆ. ನಮ್ಮ ಸರ್ಕಾರ ಹೇಗೆ ಕೆಲಸ ಮಾಡಿದೆ ಅಂತಾ ಜನ ಹೇಳ್ತಾರೆ. ನಾಯಕರು ಹೇಳೋದಲ್ಲ. ಹೆಣ್ಣು ಮಕ್ಕಳ ಬದುಕಿನಲ್ಲಿ ಎಷ್ಟರ ಮಟ್ಟಿಗೆ ಬದಲಾವಣೆಯಾಗಿದೆ ಎಂದು ತಾಯಂದಿರು ಹೇಳಬೇಕು. ಚುನಾವಣೆಗೂ ಮುನ್ನಾ ಕುಮಾರಸ್ವಾಮಿಯವರೇ ನುಡಿಮುತ್ತು ಹೇಳಿದ್ದರು. ಅವರ ನುಡಿ ಮುತ್ತುಗಳ ನಿಮ್ಮ ಹತ್ತಿರ ಇದೆಯಲ್ಲ. ನಮ್ಮ ಬಗ್ಗೆ ಅವರೇ ಹೇಳಬೇಕು.…
ಇಂದು ಮೇ.21 ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟವಾಗಲಿದೆ. Karnataka Second PUC Exam 2nd Result 2024 ರ ಫಲಿತಾಂಶವನ್ನು ಇಂದು (May 21) ರ ಮದ್ಯಾಹ್ನ ಬಿಡುಗಡೆಯಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಈಗಾಗಲೇ ಮೊದಲ ಹಂತದ ಫಲಿತಾಂಶ ಪ್ರಕಟವಾಗಿತ್ತು. ಮೊದಲ ಹಂತದಲ್ಲಿ ಫೇಲ್ ಆದಂತಹ ವಿದ್ಯಾರ್ಥಿಗಳಿಗೆ ಕಳೆದ ಏಪ್ರಿಲ್ 29 ರಿಂದ ಮೇ.16 ರವರೆಗೆ ಪೂರಕ ಪರೀಕ್ಷೆಗಳನ್ನು ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶ ಇಂದು ಮದ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ. ಈ ವರ್ಷದಿಂದಲೇ ವಿದ್ಯಾರ್ಥಿಗಳು ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶವನ್ನು ಸಹ ನೀಡಲಾಗಿದೆ. ದ್ವಿತೀಯ ಪಿಯುಸಿ 2 ರ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯಗೊಂಡಿದ್ದು, ಇದೀಗ ಫಲಿತಾಂಶ ಪ್ರಕಟವಾಗಲಿದೆ. ಇನ್ನೂ ವಿದ್ಯಾರ್ಥಿಗಳು ಫಲಿತಾಂಶ ಈ ರೀತಿ…