ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿ ವಲಯದ ಸೋಮೇಶ್ವರ ಶ್ರೀ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜೂನ್ 5 ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ಹಾಗೂ ಪರಿಸರ ನಾಶದಿಂದಾಗುವ ದುಷ್ಟಪರಿಣಾಮಗಳ ಬಗ್ಗೆ ಮಾಹಿತಿ ನೀಡಲಾಯಿತು.
ಕಾರ್ಯಕ್ರಮನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಚಿಕ್ಬಳ್ಳಾಪುರ ತಾಲೂಕಿನ ಯೋಜನಾಧಿಕಾರಿ ಧನಂಜಯ್ ರವರು ಉದ್ಘಾಟಿಸಿ. ಮಾತನಾಡಿದರು. ನಮ್ಮ ಸುತ್ತಮುತ್ತಲಿರುವ ಪರಿಸರದ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇತ್ತೀಚಿನ ಕಾಲಘಟ್ಟದಲ್ಲಿ ನಮ್ಮ ವಾತಾವರಣ ಎಷ್ಟೊಂದು ಮಲಿನವಾಗಿದೆ ಎಂಬುದನ್ನು ನಾವೆಲ್ಲರೂ ಅರಿತುಕೊಂಡಿರುತ್ತೇವೆ. ಕಲುಷಿತ ಗಾಳಿಯ ಸೇವನೆಯ ಉಸಿರಾಟದಿಂದ ಜನರು ಬಹಳಷ್ಟು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ ನಾವು ಉಸಿರಾಡುವ ಆಮ್ಲಜನಕ ನಮಗೆ ಸಿಗಬೇಕಾದರೆ ಅತಿ ಹೆಚ್ಚು ಗಿಡಗಳನ್ನು ಬೆಳೆಸಬೇಕು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜೂನ್ 1 ರಿಂದ ಜೂನ್ 30ರ ತನಕ ಪರಿಸರ ಕಾರ್ಯಕ್ರಮ, ಗಿಡ ನಾಟಿ, ಬೀಜದ ಉಂಡೆ ಕಾರ್ಯಕ್ರಮ, ಹಣ್ಣಿನ ಗಿಡಗಳ ನಾಟಿ, ಪರಿಸರ ಸಂರಕ್ಷಣೆಯ ಕುರಿತು ಮಾಹಿತಿ ಕಾರ್ಯಕ್ರಮ. ಶಾಲಾ ಕೈತೋಟ ಇನ್ನಿತರ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದೇವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ನಿವೃತ್ತ ಶಿಕ್ಷಕರಾದ ಮುನಿ ವೆಂಕಟಪ್ಪ ರವರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಡೆಸುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ ಅದರಂತೆ ಪ್ರತಿ ಮಗುವಿನಿಂದ ಮನೆಗೊಂದು ಗಿಡ ಬೆಳೆಸಿದರೆ ನಮ್ಮ ಪರಿಸರವನ್ನು ಸ್ವಲ್ಪಮಟ್ಟಿಗೆ ಉಳಿಸಿಕೊಳ್ಳಬಹುದೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೋಮೇನಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಮಂಗಲ ಇವರು ಅಧ್ಯಕ್ಷತೆಯನ್ನು ವಹಿಸಿದರು. ಈ ವೇಳೆ ಸಮಾಜ ಸೇವಕ ಈಶ್ವರ್, ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣಮ್ಮ, ಒಕ್ಕೂಟದ ಅಧ್ಯಕ್ಷರಾದ ಆದಿ ಲಕ್ಷ್ಮಮ್ಮ, ಸೋಮೇಶ್ವರ ವಲಯದ ಮೇಲ್ವಿಚಾರಕ್ಕೆ ಮಂಜುಳಾ, ಸೇವಾ ಪ್ರತಿನಿಧಿ ರಮೇಶ್ ಹಾಗೂ ಸಂಘದ ಸದಸ್ಯರೂ ಉಪಸ್ಥಿತರಿದ್ದರು.