Awareness Event: ಸೋಮೇನಹಳ್ಳಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ…!

ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿ  ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ಸ್ವಾಸ್ತ್ಯ ಸಂಕಲ್ಪ (Awareness Event) ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಮಕ್ಕಳಿಗೆ ದುಶ್ಚಟಗಳಿಗೆ ಬಲಿಯಾಗದಂತೆ ಕಠಿಣ ಪರಿಶ್ರಮದಿಂದ ಓದಿ ಒಳ್ಳೆಯ ಹೆಸರು ಗಳಿಸಿಕೊಳ್ಳುವಂತೆ ಸಲಹೆ ನೀಡಿದರು.

ಕಾರ್ಯಕ್ರಮವನ್ನು (Awareness Event) ಧನಂಜಯ್ ಯೋಜನಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಚಿಕ್ಕಬಳ್ಳಾಪುರ ಇವರು ಉದ್ಘಾಟಿಸಿ. ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಹಲವಾರು ಕಾರ್ಯಕ್ರಮಹಮ್ಮಿಕೊಂಡಿದ್ದು ಇದರಲ್ಲಿ ಮುಂದಿನ ಯುವಪೀಳಿಗೆಯು ದಾರಿ ತಪ್ಪದಂತೆ ಹದಿ ಹರೆಯದ ಮಕ್ಕಳಿಗೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

SKDRP event in chikkaballapura Gudibande 1

ಕಾರ್ಯಕ್ರಮದಲ್ಲಿ (Awareness Event) ಸಂಪನ್ಮೂಲ ವ್ಯಕ್ತಿ ಗಳಾದ ಪರಿಮಳ ಶಿಕ್ಷಕರು ಹಾಗೂ ಜನಜಾಗೃತಿ ವೇದಿಕೆ ಸದಸ್ಯರು ಮಾತನಾಡಿ ಮಕ್ಕಳು ಅರೋಗ್ಯ ಬಗ್ಗೆ ಹೆಚ್ಚಿನ ಗಮನ ಕೊಡಬೇಕು ಓದಿನ ಕಡೆ ಗಮನ ಕೊಟ್ಟು ಜೀವನದಲ್ಲಿ ಒಳ್ಳೆಯ ಗುರಿಯನ್ನು ಇಟ್ಟುಕೊಂಡರೆ ಯಾವುದೇ ಮಗು ದುಶ್ಚಟಗಳಿಗೆ ಬಲಿ ಆಗುವುದಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದ (Awareness Event) ಅಧ್ಯಕ್ಷತೆಯನ್ನು ಶಾಲಾ ಶಿಕ್ಷಕರಾದ ಮುರುಳಿ ಕೃಷ್ಣ ರವರು ವಹಿಸಿದ್ದು ಹದಿ ಹರೆಯದ ಮಕ್ಕಳಲ್ಲಿ ಏಕಾಗ್ರತೆ ಬಹಳ ಮುಖ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ (Awareness Event) ಶಾಲೆಯ ಶಿಕ್ಷಕರಾದ ರಾಕೇಶ್, ಭೀಮಣ್ಣ, ಮಹಾಲಕ್ಷ್ಮಿ, ಶ್ರೀಮತಿ ಲಕ್ಷ್ಮಿ ಹಾಗೂ ವಲಯದ ಮೇಲ್ವಿಚಾರಕಕಿ ಮಂಜುಳಾ, ನೇತ್ರಾವತಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Next Post

Dog Meat Controversy: ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸವಲ್ಲ, ಅದು ಕುರಿ ಮಾಂಸ, ವರದಿ ಬಹಿರಂಗ…..!

Wed Jul 31 , 2024
ಕೆಲವು ದಿನಗಳ ಹಿಂದೆಯಷ್ಟೆ ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿಮಾಂಸ (Dog Meat Controversy) ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸುದ್ದಿ ಭಾರಿ ಸಂಚಲನ ಸೃಷ್ಟಿ ಮಾಡಿತ್ತು. ಬಳಿಕ ಈ ಮಾಂಸವನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿಯಲ್ಲಿ ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸವಲ್ಲ, ಬದಲಿಗೆ ಅದು ಕುರಿ ಮಾಂಸ ಎಂದು ದೃಢಪಡಿಸಲಾಗಿದೆ (Dog Meat Controversy)  ಎಂದು ತಿಳಿದುಬಂದಿದೆ. ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ರೈಲಿನ ಮೂಲಕ ಟನ್ ಗಟ್ಟಲೇ ಮಾಂಸ […]
dog meat controvercy 0
error: Content is protected !!