ಗುಡಿಬಂಡೆ: ಇಂದಿನ ಕಾಲದಲ್ಲಿ ಹೆಚ್ಚು ಮಕ್ಕಳು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳಾಗಿದ್ದು, ದೇಶದ ಭವಿಷ್ಯ ನಿಮ್ಮ ಕೈಯಲ್ಲಿದೆ. ಆದ್ದರಿಂದ ಮಕ್ಕಳು ಯಾವುದೇ ದುಶ್ಚಟಗಳಿಗೆ ದಾಸರಾಗದೇ ಓದಿನ ಕಡೆ ಗಮನ ಹರಿಸಿ ಒಳ್ಳೆಯ ಪ್ರಜೆಗಳಾಗಬೇಕೆಂದು (Awareness Program) ಜಿಲ್ಲಾ ಜನ ಜಾಗೃತಿ ವೇದಿಕೆಯ ಸದಸ್ಯೆ ಡಿ.ಎಲ್.ಪರಿಮಳ ತಿಳಿಸಿದರು.
ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿ ವಲಯದ ವರ್ಲಕೊಂಡ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗಾಗಿ(Awareness Program) ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಿ.ಎಲ್.ಪರಿಮಳ ದುಶ್ಚಟ ಮುಕ್ತ ಸಮಾಜ ನಿರ್ಮಾಣವಾಗುವಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಈ ಪೈಕಿ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಹಮ್ಮಿಕೊಳ್ಳುವಂತಹ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವೂ ಒಂದಾಗಿದೆ. ಈ ಕಾರ್ಯಕ್ರಮದ ಮೂಲಕ ಮಕ್ಕಳಿಗೆ ದುಶ್ಚಟಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ. ವಿದ್ಯಾರ್ಥಿಗಳಾದ ತಾವು ಓದಿನ ಕಡೆಗೆ ಹೆಚ್ಚು ಗಮನ ಹರಿಸಿ, ಮೊಬೈಲ್, ಟಿವಿ ಗಳಿಗೆ (Awareness Program) ದಾಸರಾಗದೇ ಕಠಿಣ ಪರಿಶ್ರಮದಿಂದ ಓದಬೇಕು. ಆಗ ಒಳ್ಳೆಯ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ. ಆ ಮೂಲಕ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಸಲಹೆ ನೀಡಿದರು.
ಬಳಿಕ ಸಾರ್ವಜನಿಕ ಆಸ್ಪತ್ರೆಯ RBSK ವೈದ್ಯಾಧಿಕಾರಿ ಡಾ.ರಂಗವೇಣಿ ಮಾತನಾಡಿ, (Awareness Program) ಮಕ್ಕಳು ಆರೋಗ್ಯಕರವಾಗಿರಬೇಕು. ಬಾಲ್ಯದಲ್ಲಿ ದುಶ್ಚಟಗಳಿಗೆ ಬಲಿಯಾದರೇ ತಮ್ಮ ಆರೋಗ್ಯ ಹದೆಗೆಡುತ್ತದೆ. ಅದರ ಜೊತೆಗೆ ನೀವು ಹಾಗೂ ನಿಮ್ಮ ಕುಟುಂಬ ತುಂಬಾನೆ ಕಷ್ಟಪಡಬೇಕಾಗುತ್ತದೆ. ಆರೋಗ್ಯ ಚೆನ್ನಾಗಿದ್ದರೇ ನೀವು ಏನು ಬೇಕಾದರೂ ಸಾಧನೆ ಮಾಡಬಹುದು. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು, ಮಕ್ಕಳ ಆರೋಗ್ಯ ಬಗ್ಗೆ ಮಾಹಿತಿ ನೀಡಿದರು.
ಈ (Awareness Program) ವೇಳೆ ಶಾಲೆಯ ಮುಖ್ಯಶಿಕ್ಷಕಿ ನಳಿನಾಕ್ಷಿ, ಸಾರ್ವಜನಿಕ ಆಸ್ಪತ್ರೆಯ ಆರ್.ಬಿ.ಎಸ್.ಕೆ ವೈದ್ಯಾಧಿಕಾರಿ ಡಾ.ಜ್ಯೋತಿ, ಶಾಲೆಯ ಶಿಕ್ಷಕರಾದ ವಿಜಯ್ ಕುಮಾರ್, ಅಂಜಿನಪ್ಪ, ರಾಮಕೃಷ್ಣಪ್ಪ, ಅಶ್ವತ್ಥನಾರಾಯಣಪ್ಪ, ರಶ್ಮಿ, ಪದ್ಮಶ್ರೀ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕಿ ಮಂಜುಳಾ, ಸೇವಾ ಪ್ರತಿನಿಧಿ ಆಶೀಯಾ ಸೇರಿದಂತೆ ಹಲವರು ಇದ್ದರು.