ಸದ್ಯ ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ರವರ ನಾಯಕತ್ವದ ಬಗ್ಗೆ ಕೆಲವು ಸ್ವಪಕ್ಷೀಯರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಕರ್ನಾಟಕದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ರನ್ನು ನಾಯಕ ಎಂದು ಒಪ್ಪುವುದಿಲ್ಲ ಎಂದು ಶಾಸಕ ರಮೇಶ್ ಜಾರಕೀಹೊಳಿ ಅಸಮಾಧಾನ ಹೊರಕಿದ್ದರು. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ಪ್ರತಿಕ್ರಿಯೆ ನೀಡಿದ್ದು, ಯಾರೂ ಏನೂ ಹೇಳಿದ್ರೇ ಏನು, ನನ್ನನ್ನು ಅಧ್ಯಕ್ಷರನ್ನಾಗಿ ಕಾರ್ಯಕರ್ತರು ಹಾಗೂ ಜನರು ಒಪ್ಪಿದ್ದಾರೆ. ರಾಜ್ಯಾಧ್ಯಕ್ಷನನ್ನಾಗಿ ನಾನು ನನ್ನ ಕರ್ತವ್ಯವನ್ನು ನಿರ್ವಹಿಸುತ್ತಿದ್ದೇನೆ ಎಂದು ರಮೇಶ್ ಜಾರಕೀಹೊಳಿಗೆ (Ramesh Jarkiholi) ಕೌಂಟರ್ ಕೊಟ್ಟಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿರುವ ಅವರು, ಯಾರು ಏನೇ ಮಾತನಾಡಲಿ, ವಿಜಯೇಂದ್ರನಾದ ನಾನೇ ರಾಜ್ಯಾಧ್ಯಕ್ಷ ಅನ್ನೊದು ಸತ್ಯ. ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಘೋಷಣೆ ಮಾಡಿದ್ದು ಹೈ ಕಮಾಂಡ್, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಜೆ.ಪಿ.ನಡ್ಡಾ ರವರು ನನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷ ಎಂದು ಘೋಷಣೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಆ ಮೂಲಕ ತನ್ನ ವಿರುದ್ದ ಮಾತನಾಡುವಂತಹ ನಾಯಕರಿಗೆ ಕೌಂಟರ್ ಕೊಟ್ಟಿದ್ದಾರೆ.
ಇನ್ನೂ ಇದೇ ಸಮಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದ ವಿರುದ್ದವೂ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೇಸ್ ಸರ್ಕಾರ ಹಿಂದೂ ವಿರೋಧಿ ಸರ್ಕಾರವಾಗಿದೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ಗಲಭೆ ನಡೆಸಿದ್ದಾರೆ. ಪೆಟ್ರೋಲ್ ಬಾಂಬ್ ಹಾಕಿ ಅಂಗಡಿಗಳನ್ನು ಸುಟ್ಟು ಹಾಕಿದ್ದಾರೆ. ಪಾಂಡವರಪುರದಲ್ಲಿನ ಆರ್.ಎಸ್.ಎಸ್. ಕಚೇರಿ ಮೇಲೆ ಪೊಲೀಸರ ದಾಳಿ ನಡೆದಿದೆ. ಸರ್ಕಾರದ ಕುಮ್ಮಕ್ಕಿರುವ ಕಾರಣದಿಂದಲೇ ಪೊಲೀಸರು ಹೀಗೆ ಮಾಡುತ್ತಿದ್ದಾರೆ. ಇದೊಂದು ರಣಹೇಡಿ ಸರ್ಕಾರ ಎಂದು ತೀವ್ರ ವಾಗ್ಡಾಳಿ ನಡೆಸಿದ್ದಾರೆ.