Bagepalli News: ಬಾಗೇಪಲ್ಲಿ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧ ಆಯ್ಕೆ…..!

ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಪುರಸಭೆ ಅಧ್ಯಕ್ಷ ಮತ್ತು  ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ 23 ನೇ ವಾರ್ಡಿನ ಸದಸ್ಯ ಎ.ಶ್ರೀನಿವಾಸ್, ಉಪಾಧ್ಯಕ್ಷರಾಗಿ 8 ನೇ ವಾರ್ಡಿನ ಸದಸ್ಯೆ ಸುಜಾತ ಎಸ್ ನರಸಿಂಹನಾಯ್ಡು ಅವಿರೋಧ ಅಯ್ಕೆಯಾಗಿದ್ದಾರೆ. ಬಾಗೇಪಲ್ಲಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 25 ಮತದಾರರನ್ನು ಹೊಂದಿದ್ದು, ಈ ಚುನಾವಣೆಯಲ್ಲಿ 19 ಜನ ಸದಸ್ಯರು ಹಾಜರಾಗಿದ್ದು, 4 ಜನ ಸದಸ್ಯರು ಗೈರು ಹಾಗಿರುವುದಾಗಿ ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್ ಎನ್.ಮನೀಷ್ ತಿಳಿಸಿದರು.

ಬಾಗೇಪಲ್ಲಿ ಪುರಸಭೆ ಅಧ್ಯಕ್ಷ ಮತ್ತು  ಉಪಾಧ್ಯಕ್ಷ ಸ್ಥಾನದ 2 ನೇ ಅವಧಿಗೆ ಶುಕ್ರವಾರ ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‍ನ ಎ.ಶ್ರೀನಿವಾಸ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‍ನ ಸುಜಾತ ಎಸ್.ನರಸಿಂಹನಾಯ್ಡು ರವರು ನಾಮಪತ್ರ ಸಲ್ಲಿಸಿರುತ್ತಾರೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಎ.ಶ್ರೀನಿವಾಸ್ ಮತ್ತು ಸುಜಾತ ಎಸ್ ರವರನ್ನು ಹೊರತುಪಡಿಸಿ ಯಾವುದೇ  ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎ.ಶ್ರೀನಿವಾಸ್, ಉಪಾಧ್ಯಕ್ಷ ಸ್ಥಾನಕ್ಕೆ ಸುಜಾತ ಎಸ್. ನರಸಿಂಹನಾಯ್ಡು ಅವಿರೋಧ ಅಯ್ಕೆಗೊಂಡಿರುತ್ತಾರೆ. ಅಭಿವೃದ್ದಿ ದೃಷ್ಟಿಯಿಂದ ಪುರಸಭೆ ಅಧ್ಯಕ್ಷ ವಕಾಂಗ್ರೆಸ್, ಜೆಡಿಎಸ್ ಪಕ್ಷ ಹಾಗೂ ಕೆಲ ಪಕ್ಷೇತರ ಸದಸ್ಯರ ಪರಸ್ಪರ ಹೊಂದಾಣಿಕೆ ಮಾಡಿಕೊಂಡು  ಪಟ್ಟಣದ ಅಭಿವೃದ್ದಿಗೆ ಕೈಜೋಡಿಸುವಂತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ರವರ  ಸೂಚನೆಯಂತೆ ಅಧ್ಯಕ್ಷ, ಉಪಾಧ್ಯಕ್ಷರನ್ನು ಅವಿರೋಧವಾಗಿ ಅಯ್ಕೆ ಮಾಡಿಕೊಂಡಿರುತ್ತಾರೆ.

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ಪಟ್ಟಣದ ಜನತೆಗೆ ಶುದ್ದ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪುರಸಭೆಯ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಪಟ್ಟಣದ ಅಭಿವೃದ್ದಿಗೆ ಕೈಜೋಡಿಸಬೇಕೆಂದು  ಸದಸ್ಯರಿಗೆ ಸೂಚಿಸಿದರು.

ನಂತರ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಅಭಿಮಾನಿಗಳು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಸಿಹಿ ತಿನ್ನಿಸಿ, ಪಟಾಕಿ ಸಿಡಿಸಿ  ಸಂಭ್ರಮಾಚರಣೆ ಮಾಡಿದರು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ  ಚುನಾವಣೆಯಲ್ಲಿ  ಪೊಲೀಸ್ ಇನ್ಸ್‍ಪೆಕ್ಟರ್ ಪ್ರಶಾಂತ್ ವರ್ಣಿ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಅಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್, ಸದಸ್ಯರಾದ ಶ್ರೀನಿವಾಸರೆಡ್ಡಿ, ಅಶೋಕರೆಡ್ಡಿ, ಎ.ನಂಜುಂಡಪ್ಪ, ಗಡ್ಡಂ ರಮೇಶ್, ಗುಲ್ನಾಜ್‍ಬೇಗಂ, ಜಭಿವುಲ್ಲಾ ಖಾನ್, ಎ.ಶ್ರೀನಾಥ, ಶಭಾನಾ, ಪದ್ಮ ಮಲ್ಲೇಶ್, ಹಸೀನಾ ಮನ್ಸೂರ್, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ವಿ.ಪ್ರಭಾಕರರೆಡ್ಡಿ, ಮುಖಂಡರಾದ ಪಿ.ಮಂಜುನಾಥರೆಡ್ಡಿ, ನೂರುಲ್ಲಾ, ಗೂಳೂರು ರಮೇಶ್‍ಬಾಬು, ಜಯಪ್ರಕಾಶ್‍ನಾರಾಯಣ್, ಎ.ವಿ.ಪೂಜಪ್ಪ, ಜಿ.ಪಂ ಮಾಜಿ ಸದಸ್ಯ ಲಕ್ಷ್ಮೀ ನರಸಿಂಹಪ್ಪ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

Next Post

R Ashok : ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ನಡೆಯುತ್ತಿದೆ ಎಂದು ಆಕ್ರೋಷ ಹೊರಹಾಕಿದ ವಿಪಕ್ಷ ನಾಯಕ ಅಶೋಕ್….!

Fri Sep 13 , 2024
ಕಳೆದೆರಡು ಮಂಡ್ಯದ ನಾಗಮಂಗಲದಲ್ಲಿ (Nagamangala Case) ಗಣೇಶ ವಿಸರ್ಜನೆಯ ವೇಳೆ ನಡೆದ ಗಲಬೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರ ಮೇಲೆ ಕೇಸ್ ದಾಖಲು ಮಾಡಿದ್ದಕ್ಕೆ ವಿಪಕ್ಷ ನಾಯಕ ಆರ್‍.ಅಶೋಕ್ (R Ashok) ಕಿಡಿಕಾರಿದ್ದು, ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ನಡೆಯುತ್ತಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಸುಧೀರ್ಘ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಸರಣಿ ಪ್ರಶ್ನೆಗಳ ಮೂಲಕ ಸರ್ಕಾರಕ್ಕೆ ಉತ್ತರ ಕೊಡುವಂತೆ ಆಗ್ರಹ ವ್ಯಕ್ತಪಡಿಸಿದ್ದಾರೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಕೋಮುಗಲಭೆ […]
R Ashoka comments on Nagamangala case 0
error: Content is protected !!