ಬಾಗೇಪಲ್ಲಿ: Bagepalli News ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿರುವ 180 ಕೋಟಿ ರೂ.ಗಳ ಹಗರಣ,ಮೂಡ ಹಗರಣಗಳ ಸಮಗ್ರ ನ್ಯಾಯಾಂಗ ತನಿಖೆ ನಡೆಸುವಂತೆ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ಬಸವರಾಜು ಆಗ್ರಹಿಸಿದರು.
ಪಟ್ಟಣದ ಸಿಪಿಐ(ಎಂ) (Bagepalli News) ಪಕ್ದದ ಕಚೇರಿ ಸುಂದರಯ್ಯ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಪರಿಶಿಷ್ಠ ವರ್ಗಕ್ಕೆ ಮೀಸಲಿಟ್ಟಿದ್ದ ಹಣ ದುರ್ಬಳಕೆ ಮಾಡಿಕೊಂಡಿರುವ 180 ಕೋಟಿ ರೂ.ಗಳ ಹಗರಣವನ್ನು ಮತ್ತು ಮೂಡಾ ಹಗರಣಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಿಪಿಐ(ಎಂ) ಪಕ್ಷದವತಿಯಿಂದ ರಾಜ್ಯಾದ್ಯಾಂತ ಬಹೃತ್ ಪ್ರತಿಭಟನೆಗೆ ಮುಂದಾಗಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.
(Bagepalli News) ಮೂಡಾ ಹಗರಣದವನ್ನು ಸರ್ಕಾರ ನಿವೃತ್ತ ನ್ಯಾಯಾಧೀಶರಾದ ಬಿ.ಪಿ.ದೇಸಾಯಿ ಅವರ ನೇತೃತ್ವದಲಲ್ಲಿ ವಿಚಾರಣಾ ಆಯೋಗವನ್ನು ನೇಮಕ ಮಾಡಿರುವುದು ಸ್ವಾಗತಾರ್ಹ ಅದೇ ರೀತಿಯಲ್ಲಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣವನ್ನು ಸಹ ನ್ಯಾಯಾಂಗ ತನಿಖೆಗೆ ವಹಿಸುವಂತೆ ಒತ್ತಾಯಿಸಿದರು. ಈ ಪ್ರಕರಣಗಳನ್ನು ಸಿಬಿಐಗೆ ವಹಿಸುವಂತೆ ವಿಪಕ್ಷಗಳು ಸರ್ಕಾರದ ಮೇಲೆ ಒತ್ತಡ ಹಾಕುತ್ತಿವೆ, ವಿಪಕ್ಷಗಳ ಒತ್ತಡಕ್ಕೆ ಮಣಿದು ಸಿಬಿಐಗೆ ಒಪ್ಪಿಸಿದರೆ ಸ್ಥಳೀಯದ ತನಿಖಾ ಸಂಸ್ಥೆಗಳ ಬಗ್ಗೆ ಜನಸಾಮಾನ್ಯರಲ್ಲಿ ವಿಶ್ವಾಸ ಕಳೆದುಕೊಳ್ಳುವಂತಹ ಪರಿಸ್ಥಿತಿ ಎದುರಿಸಬೇಕಾಗುತ್ತೆ ಎಂದ ಅವರು ಸ್ಥಳೀಯ ತನಿಖಾ ಸಂಸ್ಥೆ ಮತ್ತು ನಿವೃತ್ತ ನ್ಯಾಯಾಧೀಶರ ತನಿಖೆಗೆ ಮುಂದಾಗಿರುವ ಸರ್ಕಾರ ಕ್ರಮ ಸರಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ವಾಲ್ಮೀಕಿ ನಿಗಮ ಮತ್ತು ಮೂಡಾ ಹಗರಣಗಳನ್ನು ವಿಪಕ್ಷಗಳು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಂಡು ಪರಸ್ಪರ ಕೆಸರೆರಚಾಡಿಕೊಳ್ಳುವ ಕೆಲಸದಲ್ಲಿ ತೊಡಗಿಸಿಕೊಂಡಿವೆ ಅಲ್ಲದೆ ಅ.3ರಂದು ಬಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುವುದಾಗಿ ರಾಜಕೀಯ ಮಾಡಲು ಹೊರಟ್ಟಿದ್ದಾರೆ. ಇಂತಹ ಪಾದಯಾತ್ರೆಗೆ ಸರ್ಕಾರ ಅನುಮತಿ ನೀಡಬಾರದು. ಈಗಾಗಲೇ ಪ್ರಕರಣಗಳನ್ನು ಉನ್ನತ ಮಟ್ಟದ ತನಿಖೆಗೆ ಸರ್ಕಾರ ವಹಿಸಿದೆ ಆದರೂ ಸಹ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಂಡು ತಮ್ಮ ಬೆಳೆ ಬೇಯಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ವಿಪಕ್ಷಗಳ ಈ ನಡೆಯನ್ನು ಅಇಪಿಐ(ಎಂ) ತೀವ್ರವಾಗಿ ಖಂಡಿಸುತ್ತೆ ಎಂದರು.
ಈ (Bagepalli News)ಸಂದರ್ಭದಲ್ಲಿ ಸಿಪಿಐ(ಎಂ) ಮುಖಂಡರಾದ ಡಾ.ಅನಿಲ್ ಕುಮಾರ್, ಸಿದ್ದಗಂಗಪ್ಪ, ರಘುರಾಮರೆಡ್ಡಿ, ಮುನಿವೆಂಕಟಪ್ಪ, ಶ್ರೀನಿವಾಸ್ ಮತ್ತಿತರರು ಇದ್ದರು.