Bagepalli News-ಬಾಗೇಪಲ್ಲಿಯಲ್ಲಿ ಹರ್ ಘರ್ ತಿರಂಗಾ ಜಾಗೃತಿ ಜಾಥಾ

Bagepalli News – 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅಗಸ್ಟ್ 13ರಿಂದ 15ರವರೆಗೆ ನಡೆಯಲಿರುವ ಹರ್ ಘರ್ ತಿರಂಗಾ ಅಭಿಯಾನದ ನಿಮಿತ್ತ ಬಾಗೇಪಲ್ಲಿ ತಾಲೂಕು ಆಡಳಿತ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸ್ವಾತಂತ್ರ್ಯ ಜಾಗೃತಿ ಜಾಥ ನಡೆಯಿತು. ಈ ಜಾಥದಲ್ಲಿ ಜನರಿಗೆ ಹರ್‍ ಗರ್‍ ತಿರಂಗಾ ಅಭಿಯಾನದಲ್ಲಿ ಭಾಗಿಯಾಗಿ ದೇಶಪ್ರೇಮ ಸಾರಬೇಕೆಂದು ಅರಿವು ಮೂಡಿಸಲಾಯಿತು.

(Bagepalli News) ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಪಿ.ಎಂ.ಶ್ರೀ ಶಾಲೆಯ ವಿದ್ಯಾರ್ಥಿಗಳು ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದು ಪಟ್ಟಣದ ಮುಖ್ಯ ರಸ್ತೆಯಲ್ಲಿ ದೇಶಭಕ್ತಿ, ದೇಶಪ್ರೇಮ ಕುರಿತು ಘೋಷಣೆಗಳನ್ನು ಕೂಗುತ್ತಾ ಪಟ್ಟಣದ ಮುಖ್ಯ ರಸ್ತೆಯಲ್ಲಿ  ಪ್ರದರ್ಶಿಸಿದರು.  (Bagepalli News) ಮೆರವಣಿಗೆಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ತ್ಯಾಗ ಬಲಿದಾನ ಮಾಡಿದ ಮಹನೀಯರ ಬಗ್ಗೆ ಹಾಗೂ ಮಹತ್ವದ ಬಗ್ಗೆ  ಜಾಗೃತಿ ಜನಜಾಗೃತಿ ಮೂಡಿಸಿದರಲ್ಲದೆ ಅಗಸ್ಟ್ 15ರಂದು  ನಡೆಯಲಿರುವ 78ನೇ ಸ್ವಾತಂತ್ರ್ಯ ದಿನಾಚರಣೆಯಂದು (Bagepalli News) ಪ್ರತಿಯೊಬ್ಬ ಭಾರತೀಯರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ  ದೇಶಕ್ಕೆ ಗೌರವ ಸಲ್ಲಿಸುಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ (Bagepalli News)   ತಾ.ಪಂ ಇಒ ರಮೇಶ್‍ರೆಡ್ಡಿ, ಬಿಇಒ ವೆಂಕಟೇಶ್, ಟಿಪಿಓ ರಂಗನಾಥ್, ಗಣೇಶ್, ಮಂಜುನಾಥ್, ಶಿವಪ್ಪ ಸೇರಿದಂತೆ ವಿವಿಧ ಶಾಲಾ ಮಕ್ಕಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

Leave a Comment

Your email address will not be published. Required fields are marked *

Scroll to Top