ಬಾಗೇಪಲ್ಲಿ: (Bagepalli News) ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ, ಕಾರ್ಪೋರೇಟ್ ಕೋಮವಾದಿ ಮೈತ್ರಿ ಪರ ಬಜೆಟ್‌ನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಹಾಗೂ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಶುಕ್ರವಾರ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ರವರ ಪುತ್ಥಳಿ ಮುಂದೆ ಪ್ರತಿಭಟನೆ ನಡೆಸಿದರು.
(Bagepalli News) ಕೇಂದ್ರ ಸರ್ಕಾರದ ಜನವಿರೋಧಿ ಬಜೆಟ್‌ನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಪಿಐ(ಎಂ) ಪಕ್ಷದ ಕಚೇರಿ ಸುಂದರಯ್ಯ ಭವನದಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸಿಪಿಐ(ಎಂ) ಕಾರ್ಯಕರ್ತರು ಮೆರವಣಿಯಲ್ಲಿ ಬಂದು ನಂತರ ಜಿ.ವಿ.ಶ್ರೀರಾಮರೆಡ್ಡಿ ಪುತ್ಥಳಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ(ಎಂ) ಪಕ್ಷದ ಮುಖಂಡರು ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿಕೆಯಾಗಿದೆ, ಬೆಲೆ ಏರಿಕೆಯಿಂದ ಜನಸಾನ್ಯರು ತತ್ತರಿಸುತ್ತಿದ್ದಾರೆ ಆದರೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡುವ ಬದಲಿಗೆ ಚಿನ್ನದ ಬೆಲೆಯನ್ನು ಕಡಿಮೆ ಮಾಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ದೇಶದ ಎಲ್ಲಾ ರಾಜ್ಯಗಳ ಸಮಸ್ಯೆಗಳನ್ನ ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಎನ್‌ಡಿಎ ಮಿತ್ರ ಪಕ್ಷದ ನಾಯಕರು ಇರುವ ರಾಜ್ಯಗಳಿಗಷ್ಟೇ ಹೆಚ್ಚಿನ ಅನುದಾನವನ್ನು ನೀಡುವ ಮೂಲಕ ಇತರೆ ರಾಜ್ಯಗಳಿಗೆ ಮಲತಾಯಿಧೋರಣೆ ಮಾಡಿದೆ ಅಲ್ಲದೆ ಎನ್‌ಡಿಎ ಮೈತ್ರಿ ಹೊಂದಿರುವ ಆಂದ್ರಪ್ರದೇಶ್ ಮತ್ತು ಬಿಹಾರ ರಾಜ್ಯಗಳ ಬಜೆಟ್ ಆಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು.
ಕೇಂದ್ರ ಸರ್ಕಾರದ ಜನವಿರೋಧಿ ಬಜೆಟ್‌ನ್ನು ತಕ್ಷಣ ವಾಪಸ್ ಪಡೆಯಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪಕ್ಷದವತಿಯಿಂದ ಬೃಹತ್ ಪ್ರತಿಭಟನೆ ಮಾಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಸಿಪಿಐ(ಎಂ) ಪಕ್ಷದ ತಾಲೂಕು ಕಾರ್ಯದರ್ಶಿ ರಘುರಾಮರೆಡ್ಡಿ, ಮುಖಂಡರಾದ ಚೆನ್ನರಾಯಪ್ಪ, ವಾಲ್ಮೀಕಿ ಅಶ್ವಥಪ್ಪ, ಮುಸ್ತಾಫ್, ಕೃಷ್ಣಪ್ಪ, ರಾಮಾಂಜಿನಪ್ಪ, ನರಸಿಂಹರೆಡ್ಡಿ, ಮುನಿವೆಂಕಟಪ್ಪ ಮತ್ತಿತರರು ಇದ್ದರು.