...
HomeStateBasanagouda Patil Yatnal : ಅಧಿವೇಶನದಲ್ಲಿ ವಕ್ಫ್ ವಿರುದ್ದ ಹೋರಾಟ ಮಾಡುತ್ತೇವೆ ಎಂದ ಶಾಸಕ ಯತ್ನಾಳ್.

Basanagouda Patil Yatnal : ಅಧಿವೇಶನದಲ್ಲಿ ವಕ್ಫ್ ವಿರುದ್ದ ಹೋರಾಟ ಮಾಡುತ್ತೇವೆ ಎಂದ ಶಾಸಕ ಯತ್ನಾಳ್.

Basanagouda Patil Yatnal  – ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ವಕ್ಫ್ ನೊಟೀಸ್ ವಿರುದ್ದ ಮೊದಲಿನಿಂದಲೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ವಿರೋಧಿಸುತ್ತಾ, ಹೋರಾಟಗಳನ್ನು ಮಾಡಿದ್ದಾರೆ. ಸದ್ಯ ವಕ್ಫ್ ನೊಟೀಸ್ ವಾಪಸ್ ತೆಗೆದುಕೊಂಡರೇ ಸಾಲದು, ವಕ್ಫ್ ಕಾಯ್ದೆಯನ್ನು ರದ್ದುಪಡಿಸಬೇಕು. ಈ ಕುರಿತು ವಕ್ಫ್ ವಿರುದ್ದ ಅಧಿವೇಶನದ ವೇಳೆ ಹೋರಾಟ ಮಾಡುತ್ತೇವೆ ಎಂದು ಗುಡುಗಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಯತ್ನಾಳ್ (Basanagouda Patil Yatnal) ಈ ವಿಚಾರ ಹಂಚಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ವಕ್ಫ್ ಎಂಬ ಕರಾಳ ಕಾನೂನನ್ನು ವಾಪಸ್ ಪಡೆಯಬೇಕು ಎಂಬ ಬೇಡಿಕೆಯನ್ನು ಪ್ರಧಾನಿಗಳ ಬಳಿ ಮನವಿ ಮಾಡಿದ್ದೇವೆ. ಮುಸ್ಲಿಂರಿಗಗಾಗಿ ವಕ್ಫ್ ಟ್ರಿಬ್ಯುನಲ್ ಒಪ್ಪಲ್ಲ. ದೇಶದಲ್ಲಿ ಇರಬೇಕಾದರೇ ನಮ್ಮ ದೇಶದ ಕಾನೂನು ಪಾಲಿಸಬೇಕು. ನ.25 ರಿಂದ ರಾಜ್ಯದಾದ್ಯಂತ ವಕ್ಫ್ ವಿರುದ್ದ ಪ್ರವಾಸ ಮಾಡಿ ಹೋರಾಟ ಮಾಡುತ್ತಿದ್ದೇವೆ. ಇಲ್ಲಿಯವರೆಗೆ ನೊಟೀಸ್ ನೀಡದೇ ವಕ್ಫ್ ಹೆಸರು ಸೇರ್ಪಡೆಯಾದ ಪ್ರಕರಣಗಳಲ್ಲೂ ವಕ್ಫ್ ಹೆಸರು ರದ್ದಾಗಬೇಕು. ಸದನದಲ್ಲೂ ಈ ಕುರಿತು ಚರ್ಚೆ ಮಾಡುತ್ತೇವೆ. ವಕ್ಫ್ ವಿರುದ್ದ ದೆಹಲಿಗೂ ನಿಯೋಗ ಹೋಗುತ್ತೇವೆ. ಮತ್ತೊಮ್ಮೆ ಜಂಟಿ ಸಂಸದೀಯ ಸಮಿತಿಗೆ ಮನವಿ ಮಾಡುತ್ತೇವೆ, ವಕ್ಫ್ ಸಾಯುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.

Basanagouda Patil Yatnal – ಹಿಂದೂಗಳನ್ನು ಟಾರ್ಗೆಟ್ ಮಾಡಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿದೆ ಎಂದ ಯತ್ನಾಳ್

ಇನ್ನೂ ರಾಜ್ಯದಲ್ಲಿ ಹಿಂದೂಗಳನ್ನು ಟಾರ್ಗೆಟ್ ಮಾಡಿ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುತ್ತಿದ್ದಾಋಎ ಎಂದು ರಾಜ್ಯ ಸರ್ಕಾರದ ವಿರುದ್ದ ಯತ್ನಾಳ್ ಕಿಡಿಕಾರಿದ್ದಾರೆ. ಹಿಂದೂಗಳ ರೇಷನ್ ಕಾರ್ಡ್ ರದ್ದು ಮಾಡುತ್ತಿದೆ. ಅವರನ್ನು ಟಾರ್ಗೆಟ್ ಮಾಡಿಯೇ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿದ್ದಾರೆ. ಈ ಕುರಿತು ಸಹ ಅಧಿವೇಶನದಲ್ಲಿ ಇದರ ವಿರುದ್ದ ಹೋರಾಟ ಮಾಡಲಿದ್ದೇವೆ. ಸಿದ್ದರಾಮಯ್ಯ ಹಿಂದೂಗಳ ವೋಟು ಬೇಡ ಎಂದಿದ್ದಾರೆ. ಅದಕ್ಕೆ ಹಿಂದೂಗಳ ರೇಷನ್ ಕಡಿತವಾಗುತ್ತಿದೆ ಎಂಬ ನನಗೂ ಮಾಹಿತಿ ಬಂದಿದೆ ಎಂದು ಆಕ್ರೋಷ ಹೊರಹಾಕಿದರು.

ಇನ್ನೂ ಸಾರ್ವಜನಿಕರು ಹಾಗೂ ವಿರೋಧ ಪಕ್ಷಗಳು ಬಿಪಿಎಲ್ ಕಾರ್ಡ್​ ರದ್ದುಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಜಿಲ್ಲೆ-ಜಿಲ್ಲೆಗಳಲ್ಲೂ ವ್ಯಾಪಕ ಆಕ್ರೋಶ ಸೃಷ್ಟಿಯಾಗುತ್ತಿರುವ ಬೆನ್ನಲ್ಲೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಹೊರಡಿಸಿದ್ದಾರೆ. ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಆದೇಶ ಹೊರಡಿಸಿದ್ದಾರೆ. ಜೊತೆಗೆ ಒಂದು ವೇಳೆ ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ವರಿಕೆ ನೀಡಿದ್ದಾರೆ.

by Admin
by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

Most Popular

Seraphinite AcceleratorOptimized by Seraphinite Accelerator
Turns on site high speed to be attractive for people and search engines.