ಬಾಗೇಪಲ್ಲಿ: ಶಿಕ್ಷಣದ ಜೊತೆಗೆ ಮನೆಯಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಸಂಸ್ಕಾರವನ್ನು ಕಲಿಸುವುದಕ್ಕೆ ಹೆಚ್ಚಿನ ಒತ್ತು ನೀಡಬೇಕಾದ ಅಗತ್ಯವಿದೆ (BGS School) ಎಂದು ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳನಾಥ ಸ್ವಾಮಿಜಿ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಬಿಜಿಎಸ್ ಪಬ್ಲಿಕ್ ಶಾಲೆಯ (BGS School) ಆವರಣದಲ್ಲಿ ಆಯೋಜಿಸಲಾಗಿದ್ದ ಜ್ಞಾನಾಂಕುರ -2024 ಕಾರ್ಯಕ್ರಮದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿ ಮಾತನಾಡಿ, ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವಂತಹ ಆಸೆ ಪ್ರತಿಯೊಬ್ಬ ಪೋಷಕರಲ್ಲಿಯೂ ಇರುತ್ತೆ ಅದಕ್ಕೆ ಪೂರಕವಾಗಿ ಆದುನಿಕ ಜಗತ್ತಿನ ಪ್ರವೇಶಕ್ಕೆ ಮಕ್ಕಳನ್ನು ಪ್ರಾಥಮಿಕ ಹಂತದಲ್ಲಿಯೇ ಹಣಿಗೊಳಿಸುವುದೇ ಶ್ರೀ ಮಠದ ಉದ್ದೇಶವಾಗಿದೆ ಎಂದ ಅವರು ಶಾಲೆಯಲ್ಲಿ ಮಕ್ಕಳು ಕಲಿಯುವ ಶಿಕ್ಷಣದ ಜೊತೆಗೆ ಮನೆಯಲ್ಲಿ ತಮ್ಮ ಮಕ್ಕಳಿಗೆ ಸಂಸ್ಕಾರವನ್ನು ಕಲಿಸುವಂತಹ ಕೆಲಸಕ್ಕೆ ಮುಂದಾಗಬೇಕೆಂದರು.
ಬಿಜಿಎಸ್ (BGS School) ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ಡಾ.ಎನ್.ಶಿವರಾಮರೆಡ್ಡಿ ಮಾತನಾಡಿ, ಗಂಡು ಹೆಣ್ಣು ಎಂಬ ತಾರತಮ್ಯ ಬೇಡ, ಮಕ್ಕಳು ಅವರ ಸಮಸ್ಯೆಗಳಿಗೆ ಅವರೇ ಪರಿಹಾರ ಕಂಡುಕೊಳ್ಳುವ ರೀತಿಯಲ್ಲಿ ಮಕ್ಕಳನ್ನ ಬೆಳಸಬೇಕಾಗಿರುವುದು ಪೋಷಕರ ಕರ್ತವ್ಯ ಎಂದರಲ್ಲದೆ ಯಾವುದೇ ಕಾರಣಕ್ಕೂ ಮಕ್ಕಳ ಕೈಗೆ ಮೊಬೈಲ್ ನೀಡಬೇಡಿ ಎಂದರು. ಈ ಸಂದರ್ಭದಲ್ಲಿ ಬಿಜಿಎಸ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು ಸೇರಿದಂತೆ ಶಿಕ್ಷಕರು ಹಾಗೂ ಪೋಷಕರ ಇದ್ದರು.