Thursday, February 5, 2026
HomeStateBJP Leader: ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಮುನಿರಾಜು ಹುಟ್ಟುಹಬ್ಬದ ಅಂಗವಾಗಿ ಹಣ್ಣು ಹಂಪಲು ವಿತರಣೆ

BJP Leader: ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಮುನಿರಾಜು ಹುಟ್ಟುಹಬ್ಬದ ಅಂಗವಾಗಿ ಹಣ್ಣು ಹಂಪಲು ವಿತರಣೆ

ಗುಡಿಬಂಡೆ: ಕ್ಷೇತ್ರದ ಬಿಜೆಪಿ ಮುಖಂಡ (BJP Leader) ಸಿ.ಮುನಿರಾಜು ರವರ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು. ಬಳಿಕ ವರ್ಲಕೊಂಡ ಗ್ರಾಮದಲ್ಲಿರುವ ಗಂಗಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

BJP C Muniraju Birthday

ಗುಡಿಬಂಡೆ ತಾಲೂಕಿನ ವರ್ಲಕೊಂಡ ಗ್ರಾಮದ ಗಂಗಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಮುಖಂಡ (BJP Leader) ಸಿ.ಮುನಿರಾಜು, ಕ್ಷೇತ್ರದ ಜನತೆ ನನ್ನ ಮೇಲೆ ತುಂಬಾನೆ ಪ್ರೀತಿ ವಿಶ್ವಾಸ ಇಟ್ಟುಕೊಂಡಿದ್ದಾರೆ. ಇಂದು ನನ್ನ ಹುಟ್ಟುಹಬ್ಬದ ಅಂಗವಾಗಿ ಕ್ಷೇತ್ರದ ವಿವಿಧ ಕಡೆಯಿಂದ ನಮ್ಮ ಕಾರ್ಯಕರ್ತರು ಹಾಗೂ ನನ್ನ ಶ್ರೇಯೋಭಿಲಾಷಿಗಳು ಬಂದು ಶುಭ ಹಾರೈಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ದಿಯಲ್ಲಿ ನಾನು ಮತಷ್ಟು ಶ್ರಮಿಸುತ್ತೇನೆ. ಬಡವರು ಸೇರಿದಂತೆ ಕ್ಷೇತ್ರದ ಜನತೆಗೆ ಸೇವೆ ಮಾಡುವುದೇ ನನ್ನ ಮುಖ್ಯ ಉದ್ದೇಶವಾಗಿದೆ ಎಂದರು.

BJP C Muniraju Birthday 0

ಈ ವೇಳೆ ಬಿಜೆಪಿ (BJP Leader)  ತಾಲೂಕು ಅಧ್ಯಕ್ಷ ಗಂಗಿರೆಡ್ಡಿ ಮಾತನಾಡಿ, ನಮ್ಮ ಪಕ್ಷದ ಮುಖಂಡರಾದ ಸಿ.ಮುನಿರಾಜು ರವರು ಸುಮಾರು ವರ್ಷಗಳಿಂದ ಗುಡಿಬಂಡೆ-ಬಾಗೆಪಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಸ್ಫರ್ಧಿಸಿದ್ದರು. ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಬಲಪಡಿಸುವಲ್ಲಿ ತುಂಬಾನೆ ಶ್ರಮಿಸಿದರು. ಅವರ ಶ್ರಮದಿಂದ ಬಾಗೇಪಲ್ಲಿ ಕ್ಷೇತ್ರದಲ್ಲಿ ಅತ್ಯಧಿಕ ಮತಗಳನ್ನು ಬಿಜೆಪಿ ಪಡೆದುಕೊಂಡಿದೆ. ರಾಜ್ಯ ನಾಯಕರೊಂದಿಗೆ ಉತ್ತಮ ಬಾಂದವ್ಯ ಹೊಂದಿರುವಂತಹ ಸಿ.ಮುನಿರಾಜು ರವರು ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ದಿಗಾಗಿ ಕೇಂದ್ರದಿಂದ ಯೋಜನೆಗಳನ್ನು ತರಲು ಶ್ರಮಿಸುತ್ತಾರೆ ಎಂದರು. ಈ ಸಮಯದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು, ಸಿ.ಮುನಿರಾಜು ಅಭಿಮಾನಿಗಳೂ ಸೇರಿದಂತೆ ಹಲವರು ಇದ್ದರು.

by ISM Kannada News Deskhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular