ಸದ್ಯ ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ದ ಆಕ್ರೋಷ ಹೊರಹಾಕುತ್ತಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಸಂಬಂಧಪಟ್ಟ ಇಲಾಖೆಯ ಸಚಿವರು ರಾಜಿನಾಮೇ ನೀಡಬೇಕು. ಜೂ.6 ರೊಳಗೆ ರಾಜೀನಾಮೆ ನೀಡದೇ ಇದ್ದರೇ ರಾಜ್ಯದಾದ್ಯಂತ ಹೋರಾಟ ಮಾಡುವುದಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R.Ashok) ಗಡುವು ನೀಡಿದ್ದಾರೆ.
ಈ ಕುರಿತು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಆರ್.ಅಶೋಕ್, ಸಿಎಂ ಸಿದ್ದರಾಮಯ್ಯನವರಿಗೆ ಹಲವು ಪ್ರಶ್ನೆಗಳನ್ನು ಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ FIR ನಲ್ಲಿ ಮಂತ್ರಿಯ ಹೆಸರು ಏಕೆ ಹಾಕಿಲ್ಲ, ಹಣ ಗುಳುಂ ಮಾಡಿದ್ದ ಅಧಿಕಾರಿಗಳನ್ನು ಏಕೆ ಬಂಧಿಸಿದಲ್ಲ, ಅವರನ್ನು ಬಂಧಿಸಿದ್ರೆ ನಿಮ್ಮ ಬಂಡವಾಳ ಬಯಲಿಗೆ ಬರುತ್ತಾ? ಸಿಐಡಿ ಅಂದ್ರೆ ಕಾಂಗ್ರೇಸ್ ಇನ್ವೆಸ್ಟಿಗೇಷನ್ ಟೀಮ್ ಅಲ್ಲವೇ, ನಾನು ವರ್ಗಾವಣೆಯಲ್ಲಿ ಹಣ ಮಾಡಿದ್ರೆ ರಾಜಿನಾಮೆ ಕೊಡ್ತೀನಿ ಅಂತಾ ಹೇಳಿದ್ರಿ ಅಲ್ವಾ ಸಿದ್ದರಾಮಯ್ಯನವರೇ ಈಗ ತಾವು ಯಾವಾಗ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತೀರಾ ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಇನ್ನೂ ಈ ಪ್ರಕರಣದಲ್ಲಿ ಮೃತರ ಮನೆಯಲ್ಲಿದ್ದ ಪೆನ್ ಡ್ರೈವ್ ಏಕೆ ತೆಗೆದುಕೊಂಡು ಹೋದ್ರಿ, ಪೆನ್ ಡ್ರೈವ್ ಸಾರ್ವಜನಿಕರ ಮುಂದೆ ಬಹಿರಂಗಪಡಿಸಿ. ಈ ಹಿಂದೆ ಈಶ್ವರಪ್ಪ ಪ್ರಕರಣದಲ್ಲಿ ಕರ್ನಾಟಕಕ್ಕೆ ಕೆಟ್ಟ ದಿನ ಅಂತಾ ಹೇಳಿದ್ರಿ. ಸುರ್ಜೇವಾಲ ರವರು ಕಾಂಗ್ರೇಸ್ ಪಕ್ಷ ಲೂಟಿಯನ್ನು ಸಹಿಸೊಲ್ಲ ಅಂತಾ ಹೇಳಿದ್ರು, ಈಶ್ವರಪ್ಪರನ್ನು ಬಂಧಿಸಿ ಅಂತಾ ಹೇಳಿದ್ರು, ಈಗ ನೀವು ಏನ್ ಮಾಡ್ತಾ ಇದ್ದೀರಾ ಎಂದು ಫೈರ್ ಆಗಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧಿಕಾರಿ ಚಂದ್ರಶೇಖರನ್ ಮನೆಗೆ ಭೇಟಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇದ್ರ ರಾಜ್ಯ ಸರ್ಕಾರದ ವಿರುದ್ದ ಕೆಂಡ ಕಾರಿದರು. ಚಂದ್ರಶೇಖರ್ ಪ್ರಕರಣದಲ್ಲಿ ಭಂಡತನ ಬಿಟ್ಟು ಸಚಿವರ ರಾಜಿನಾಮೆ ಪಡೆಯಬೇಕು. ಸಿಎಂ ಸಿದ್ದರಾಮಯ್ಯ ಸದಾ ಭಂಡತನ ಪ್ರದರ್ಶನ ಮಾಡುತ್ತಿರುತ್ತಾರೆ. ಆದರೆ ಈ ಪ್ರಕರಣದಲ್ಲಿ ಅದು ಸರಿಯಲ್ಲ. ಒಂದು ವಾರದ ಗಡುವು ನೀಡುತ್ತಿದ್ದೇವೆ. ಸಚಿವರ ರಾಜೀನಾಮೆ ಪಡೆದು ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ದೊಡ್ಡ ಮಟ್ಟದ ಹಣಕಾಸಿನ ಅವ್ಯವಹಾರ ನಡೆದಿರುವುದು ಸ್ಪಷ್ಟವಾಗಿ ಗೊತ್ತಾಗಿದೆ. ಅವರ ಡೆತ್ ನೋಟ್ ಸಹ ಬಹಿರಂಗವಾಗಿದೆ. ಕೂಡಲೇ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತಪ್ಪಿತಸ್ಥರ ವಿರುದ್ದ ಕೂಡಲೇ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.