ಬಿಜೆಪಿ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇರವಾಗಿ ಮಾತನಾಡುತ್ತಿರುತ್ತಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಕೆಲ ಅಭ್ಯರ್ಥಿಗಳನ್ನು ಸೋಲಿಸಲು ಅಪಾರ ಪ್ರಮಾಣದ ಹಣ ಬಿಜೆಪಿ ಮೂಲದಿಂದಲೇ ಹೋಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಹಾಗೂ ಸಂಸದ ವಿ.ಸೋಮಣ್ಣ ಸೇರಿದಂತೆ ಗೆದ್ದ ಅಭ್ಯರ್ಥಿಗಳೂ ಸಹ ಇದೇ ಆರೋಪ ಮಾಡಿದ್ದಾರೆ ಎಂದು ದೂರಿದ್ದರು, ಈ ಕುರಿತು ಯಾರ ಪರವಾಗಿ ಇರದೇ ಸತ್ಯ ಶೋಧನಾ ಸಮಿತಿಯಾಗಬೇಕೆಂದು ಸಹ ಒತ್ತಾಯಿಸಿದ್ದಾರೆ.
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಈ ಕುರಿತು ಮಾದ್ಯಮದವರೊಂದಿಗೆ ಮಾತನಾಡಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಕೆಲ ಬಿಜೆಪಿ ನಾಯಕರೇ ಕಾರಣ ಎಂದು ಆರೋಪಿಸಿದ್ದಾರೆ. ಹರಿಹರದ ಬಿಜೆಪಿ ಶಾಸಕ ಬಿಪಿ ಹರೀಶ್ ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಣ. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅಂಡ್ ಟೀಮ್ ದಾವಣಗೆರೆಯಲ್ಲಿ ಸುದ್ದಿಗೋಷ್ಟಿ ನಡೆಸುತ್ತಿದ್ದಾಗ ಅದನ್ನು ರಾಜ್ಯಾಧ್ಯಕ್ಷರು ತಡೆದಿದ್ದರೇ ದಾವಣಗೆರೆಯಲ್ಲಿ ಬಿಜೆಪಿ ಗೆಲ್ಲಬಹುದಾಗಿತ್ತು. ನಾನು ಮಾತನಾಡಿದ್ದಕ್ಕೆ ನಾಲ್ಕು ಗೋಡೆಗಳ ಮಧ್ಯೆ ಮಾತನಾಡಬೇಕು ಎಂದು ಹೇಳುತ್ತಾರೆ. ಆದರೆ ಅವರು ಮಾತನಾಡಿದಾಗ ಏನು ಕೇಳಲೇ ಇಲ್ಲ. ಈ ಟಿಂ ರಚನೆ ಮಾಡಿದ್ದು ಅವರೇ ಎಂದು ಆರೋಪಿಸಿದರು.
ಇನ್ನೂ ಚುನಾವಣೆಯಲ್ಲಿ ಯಾರಿಗೆಲ್ಲಾ ತೊಂದರೇಯಾಗಿದೆ ಎಂದು ಆಯಾ ಅಭ್ಯರ್ಥಿಗಳೇ ಮಾಹಿತಿ ನೀಡಿದ್ದಾರೆ ಜೊತೆಗೆ ಹೈಕಮಾಂಡ್ ನಾಯಕರಿಗೆ ವರದಿ ನೀಡಿದ್ದಾರೆ. ಸಂಪನ್ಮೂಲದ ವ್ಯವಸ್ಥೆ ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ಸಹ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪಕ್ಷದಲ್ಲಿ ದೊಡ್ಡ ಜವಾಬ್ದಾರಿ ವಹಿಸಿಕೊಂಡವರೇ ಈ ರೀತಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂಬುದು ಹೈಕಮಾಂಡ್ ಗಮನಕ್ಕೆ ಬಂದಿದೆ. ಅದಕ್ಕೆ ಹೈಕಮಾಂಡ್ ಏನು ಕ್ರಮ ತೆಗೆದುಕೊಳ್ಳಬೇಕೆಂದು ತೀರ್ಮಾ ತೆಗೆದುಕೊಳ್ಳುತ್ತದೆ. ಇನ್ನೂ ಲೋಕಸಭಾ ಚುನಾವಣೆಯಲ್ಲಿ ಸೋಲನ್ನು ಕಂಡ ಅಭ್ಯರ್ಥಿಗಳು ಹಾಗೂ ಗೆದ್ದ ಕೆಲ ಅಭ್ಯರ್ಥಿಗಳಿಂದಲೂ ಸಹ ಇದೇ ದೂರುಗಳು ಕೇಳಿಬಂದಿವೆ. ತುಮಕೂರಿನಲ್ಲಿ ಸೋಮಣ್ಣರವರನ್ನು ಸೋಲಿಸಲು ಅಪಾರ ಪ್ರಮಾಣದ ಹಣ ಬಿಜೆಪಿ ಮೂಲದಿಂದಲೇ ಹೋಗಿದೆ ಎಂದು ಆರೋಪ ಮಾಡಿದ್ದಾರೆ. ಕಲಬುರಗಿ ಅಭ್ಯರ್ಥಿ ಉಮೇಶ್ ಯಾದವ್, ಬೀದರ್ ಅಭ್ಯರ್ಥಿ ಭಗವಂತ ಖೂಬಾ, ಚಿಕ್ಕೋಡಿ ಕ್ಷೇತ್ರದ ಅಣ್ಣಾ ಸಾಹೇಬ್ ಜೊಲ್ಲೆ ರವರದ್ದು ಇದೇ ಸಮಸ್ಯೆ ಎಂದು ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.