ಗುಡಿಬಂಡೆ: ಲೋಕಸಭಾ ಚುನಾವಣೆ 2024 ಯ ಫಲಿತಾಂಶದಲ್ಲಿ ಅತ್ಯಧಿಕ ಸ್ಥಾನಗಳನ್ನು ಬಿಜೆಪಿ ಪಕ್ಷ ಜಯಗಳಿಸಿದ್ದು, ಈ ಸುದ್ದಿ ಹೊರಬರುತ್ತಿದ್ದಂತೆ ಗುಡಿಬಂಡೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಕರ್ನಾಟಕದಲ್ಲಿ ಬಿಜೆಪಿ ಹಾಗೂ ಮೈತ್ರಿ ಪಕ್ಷ ಜೆಡಿಎಸ್ ಪಕ್ಷ ಅತ್ಯಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಈ ಸಂಬಂಧ ಗುಡಿಬಂಡೆ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಇದೇ ಸಮಯದಲ್ಲಿ ಬಿಜೆಪಿ, ಜೆಡಿಎಸ್, ನರೇಂದ್ರ ಮೋದಿಯವರ ಪರ ಘೋಷಣೆಗಳನ್ನು ಕೂಗುತ್ತಾ ಜಯವನ್ನು ಸಂಭ್ರಮಿಸಿದರು.
ಈ ಸಮಯದಲ್ಲಿ ಬಿಜೆಪಿ ಮುಖಂಡ ಜಿ.ಎಸ್.ನಾಗರಾಜು ಮಾತನಾಡಿ. ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರದಲ್ಲಿದ್ದರೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲು ವಿಫಲವಾಗಿದೆ. ಬಿಜೆಪಿ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೇಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಿದೆ. ಜನರು ಗ್ಯಾರಂಟಿ ಯೋಜನೆಗಳಿಗೆ ಮರಳು ಆಗುವುದಿಲ್ಲ ಎಂದು ಸಾಬೀತು ಮಾಡಿದ್ದಾರೆ. ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕೆಂದು ಬಿಜೆಪಿ ಪಕ್ಷಕ್ಕೆ ಹೆಚ್ಚು ಮತಗಳನ್ನು ನೀಡಿದ್ದಾರೆ. ಕೆಲವೊಂದು ಕ್ಷೇತ್ರಗಳಲ್ಲಿ ಕಡಿಮೆ ಅಂತರದಲ್ಲಿ ಬಿಜೆಪಿ ಸೋಲು ಕಂಡಿದೆ. ಆದರೆ ಕೇಂದ್ರ ಮತ್ತೊಮ್ಮೆ ಮೋದಿ ಪ್ರಧಾನಿಯಾಗೋದು ಖಚಿತ, ದೇಶವನ್ನು ಮತಷ್ಟು ಅಭಿವೃದ್ದಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಬಿಜೆಪಿ ಮುಖಂಡರಾದ ಚಂದ್ರಶೇಖರನಾಯ್ಡು, ಪ್ರೆಸ್ ಶಿವಪ್ಪ, ಪದ್ಮ, ಕಿರಣ್, ಶ್ರೀನಾಥ್, ರಾಜಣ್ಣ, ರವಿ, ರಾಮಕೃಷ್ಣ, ಜಗನ್ನಾಥ್, ಜೆಡಿಎಸ್ ಪಕ್ಷದ ಮುಂಜುನಾಥ್, ಗಾಂಧಿ ಶ್ರೀನಿವಾಸ್, ಶ್ರೀನಿವಾಸ್ ಸೇರಿದಂತೆ ಹಲವರು ಇದ್ದರು.