Siddaramaiah – ಕಳೆದೆರಡು ದಿನಗಳ ಹಿಂದೆಯಷ್ಟೆ ಬಿಜೆಪಿ ಎಂ.ಎಲ್.ಸಿ ಸಿ.ಟಿ.ರವಿ ರವರು ಬೆಳಗಾವಿಯ ಅಧಿವೇಶನ ಕಲಾಪದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರಿಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ ಎಂಬ ಆರೋಪ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಈ ಘಟನೆಯ ಸಂಬಂಧ ಆಡಳಿತ ಹಾಗೂ ವಿರೋಧ ಪಕ್ಷಗಳು ಜೋರು ವಾಕ್ಸಮರ ನಡೆಸುತ್ತಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯನವರ (Siddaramaiah) ಹಳೇಯ ಘಟನೆಯ ವಿರುದ್ದ ಬಿಜಪಿ ಕಾರ್ಯಕರ್ತರೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ಆನ್ ಲೈನ್ ಮೂಲಕ ದೂರು ನೀಡಿದ್ದಾರೆ.

ಸುಮಾರು 6 ವರ್ಷದ ಹಿಂದೆ ಸಿದ್ದರಾಮಯ್ಯ (Siddaramaiah) ನವರು ಮೈಕ್ ಕಿತ್ತುಕೊಳ್ಳಲು ಹೋಗಿ ಮಹಿಳೆಯ ವೇಲ್ ಎಳೆದಿದ್ದ ಘಟನೆಗೆ ಸಂಬಂಧಿಸಿದಂತೆ ಸಿಎಂ ವಿರುದ್ದ ಮಂಡ್ಯ ಜಿಲ್ಲಾ ಬಿಜೆಪಿ ವಕ್ತಾರ ಸಿ.ಟಿ.ಮಂಜುನಾಥ್ ರವರು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿಗೆ ದೂರು ನೀಡಿದ್ದಾರೆ. ಮಹಿಳಾ ಆಯೋಗ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಹಿಂದೆ ಸಿದ್ದರಾಮಯ್ಯ ಸಭೆಯೊಂದರಲ್ಲಿ ಮಹಿಳೆಯ ವೇಲ್ ಎಳೆದು ಅಪಮಾನಿಸಿದ್ದರು. (Siddaramaiah) ಆ ಮಹಿಳೆ ದೂರು ದಾಖಲಿಸಿದ್ದಾರೋ ಇಲ್ಲವೋ ಗೊತ್ತಿಲ್ಲ. ದೂರು ಸಲ್ಲಿಸದಂತೆ ಮಹಿಳಿಗೆ ಬೆದರಿಕೆ ಹಾಕಿರಬಹುದು. ಸಿಎಂ ಸೀರೆ ಎಳೆದು ಅವಮಾನಿಸಿರುವ ವಿಡಿಯೋ ಸಹ ವೈರಲ್ ಆಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಸಿಎಂ ವಿರುದ್ದ ಸ್ವಯಂ ಪ್ರೇರಿತ ಕೇಸ್ ದಾಖಲಿಸಬೇಕು, (Siddaramaiah) ತನಿಖೆ ನಡೆಸಿ ಮಹಿಳೆಗೆ ನ್ಯಾಯ ದೊರಕಿಸಿಕೊಡಬೇಕೆಂದು ದೂರು ನೀಡಿದ್ದಾರೆ ಎನ್ನಲಾಗಿದೆ.

ಕಳೆದ 6 ವರ್ಷಗಳ ಹಿಂದೆ ಮೈಸೂರಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಹಿಸಲಾಗಿತ್ತು. ಈ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬರು ತನ್ನ ಕಷ್ಟ ಹೇಳಿಕೊಳ್ಳಲು ಬಂದಿದ್ದರು. ಸಮಸ್ಯೆಯನ್ನು ಮಹಿಳೆ ಹೇಳುತ್ತಿದ್ದಾಗ ಸಿಎಂ (Siddaramaiah) ಸಿದ್ದರಾಮಯ್ಯ ಆಕೆಯ ಮೇಲೆ ಗರಂ ಆಗಿದ್ದರು. ಜೊತೆಗೆ ಮಹಿಳೆಯ ಕೈಯಲ್ಲಿದ್ದ ಮೈಕ್ ಅನ್ನು ಕಸಿದುಕೊಳ್ಳುವಾಗ ಆಕೆಯ ವೇಲ್ ಎಳೆದು ಅವಮಾನಿಸಿದ್ದಾರೆ ಎಂದು ಆರೋಪ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೋಗಳೂ ಸಹ ಅಂದು ತುಂಬಾನೆ ವೈರಲ್ ಆಗಿತ್ತು. ಇದೀಗ ಈ ಘಟನೆಯ ಸಂಬಂಧ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು (Siddaramaiah) ಜೊತೆಗೆ ಮಹಿಳೆಗೆ ನ್ಯಾಯ ದೊರಕಿಸಿಕೊಡಬೇಕೆಂದು ಬಿಜೆಪಿ ಕಾರ್ಯಕರ್ತ ದೂರು ಸಲ್ಲಿಕೆ ಮಾಡಿದ್ದಾರೆ.