ಮೇ.21 ರಂದು ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದ ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯವನ್ನು ವೀಕ್ಷಣೆ ಮಾಡಲು ಬಂದಿದ್ದ ಬಾಲಿವುಡ್ ನಟ ಶಾರುಖ್ ಖಾನ್ ರವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಹಮದಾಬಾದ್ ನ ಕೆಡಿ ಆಸ್ಪತ್ರೆಗೆ ದಾಖಲಾಗಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮೇ.21 ಮಂಗಳವಾರ ಗುಜರಾತ್ ನ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ IPL 2024ರ ಮೊದಲ ಕ್ವಾಲಿಫೈಯರ್ ಪಂದ್ಯ ನಡೆದಿತ್ತು. ಹೈದರಾಬಾದ್ ತಂಡವನ್ನು (SRH) ಶಾರುಖ್ ಖಾನ್ ಮಾಲೀಕತ್ವದ ಕೋಲ್ಕತ್ತ ತಂಡ (KKR) ಸೋಲಿಸಿ ಫೈನಲ್ ಸ್ಥಾನ ಪಡೆದುಕೊಂಡಿದೆ. ಈ ಪಂದ್ಯವನ್ನು ವೀಕ್ಷಣೆ ಮಾಡಲು ನಟ ಶಾರುಖ್ ಖಾನ್ ಆಗಮಿಸಿದ್ದರು. ಈ ಪಂದ್ಯವನ್ನು ತಾವು ಓರ್ವ ಸಾಮಾನ್ಯರಂತೆ ಖುಷಿಯಿಂದ ವೀಕ್ಷಣೆ ಮಾಡಿದ್ದರು. ಪಂದ್ಯ ಮುಗಿದ ಬಳಿಕ ಮೈದಾನದ ಸುತ್ತಾ ಓಡಾಡುತ್ತಾ ಅಲ್ಲಿದ್ದ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದ್ದರು. ಈ ವೇಳೆ ಅವರು ಹೀಟ್ ಸ್ಟ್ರೋಕ್ ನಿಂದ ದಿಢೀರ್ ನೇ ಆಸ್ಪತ್ರೆಗೆ ದಾಖಲಾಗಿ ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನೂ ನಟ ಶಾರುಖ್ ಖಾನ್ ರವರಿಗೆ ಚಿಕಿತ್ಸೆ ನೀಡಿದ ಕೆ.ಡಿ. ಆಸ್ಪತ್ರೆಯ ವೈದ್ಯರ ಪ್ರಕಾರ ಮಂಗಳವಾರ ಅಹಮದಾಬಾದ್ ನಲ್ಲಿ ಕೆಕೆಆರ್ ಹಾಗೂ ಎಸ್.ಆರ್.ಹೆಚ್ ನಡುವೆ ಮೊದಲ ಪ್ಲೇ ಆಫ್ ಪಂದ್ಯ ನಡೆದಿತ್ತು. ಈ ಪಂದ್ಯದ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆಯೇ ಅಹಮದಾಬಾದ್ ಗೆ ಶಾರುಖ್ ಖಾನ್ ರವರು ಬಂದಿದ್ದರು. ಪಂದ್ಯ ಮುಗಿದ ಬಳಿಕ ಅವರ ತಮ್ಮ ತಂಡದೊಂದಿಗೆ ಅಹಮದಾಬಾದ್ ನ ಐಟಿಸಿ ನರ್ಮದಾ ಹೋಟೆಲ್ ಗೆ ತಡರಾತ್ರಿ ತಲುಪಿದ್ದರು. ಅವರು ನಿರ್ಜಲೀಕರಣದಿಂದ ಬಳಲುತ್ತಿದ್ದರು. ಬೆಳಿಗ್ಗೆ ಅವರ ಸ್ಥಿತಿ ಹದಗೆಟ್ಟ ನಂತರ ಮದ್ಯಾಹ್ನ 1 ಗಂಟೆ ಸಮಯದಲ್ಲಿ ಕೆಡಿ. ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ಕೊಟ್ಟು ಅವರನ್ನು ಬಿಡುಗಡೆ ಮಾಡಲಾಯ್ತು. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ಮತಷ್ಟು ವಿಶ್ರಾಂತಿ ಪಡೆದುಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.