ಕಾಂಗ್ರೇಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಹಣದಿಂದ (Gruha Lakshmi Scheme) ಬೋರ್‌ವೆಲ್ ಕೊರೆಸಿದ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಅತ್ತೆ-ಸೊಸೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ (Gruha Lakshmi Scheme) ಇದೊಂದು ನಿದರ್ಶನವಾಗಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೇಸ್ ಸರ್ಕಾರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಐದು ಗ್ಯಾರಂಟಿಗಳನ್ನು (Gruha Lakshmi Scheme) ಘೋಷಣೆ ಮಾಡಿತ್ತು. ಅದರಂತೆ ಅಧಿಕಾರಕ್ಕೆ ಬಂದ ಕೂಡಲೇ ಹಂತ ಹಂತವಾಗಿ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಇತ್ತಿಚಿಗಷ್ಟೆ ಬೆಳಗಾವಿಯ ವೃದ್ದೆಯೊಬ್ಬರು (Gruha Lakshmi Scheme) ಗೃಹಲಕ್ಷ್ಮೀ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ್ದರು. ಮತ್ತೆ ಕೆಲವು ಕಡೆ ಗೃಹ ಲಕ್ಷ್ಮೀ ಹಣದಿಂದ ಗ್ರಂಥಾಲಯಗಳನ್ನು ಕಟ್ಟಿಸಿದ್ದರು. ಕೆಲವರು ತಮ್ಮ ಮಕ್ಕಳಿಗೆ ಬೈಕ್ ಕೊಡಿಸಿದ್ದರು. ಇದೀಗ ಅದೇ ರೀತಿಯಲ್ಲಿ ಅತ್ತೆ ಸೊಸೆ ಗೃಹಲಕ್ಷ್ಮೀ ಹಣದಿಂದ ಬೋರ್ ವೆಲ್ ಕೊರೆಸಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಮಾಬುಬೀ ಮತ್ತು ಸೊಸೆ ರೋಷನ್ ಬೇಗಂ (Gruha Lakshmi Scheme) ಅವರು ಪ್ರತಿ ತಿಂಗಳು ತಮಗೆ ಬರುತ್ತಿದ್ದ ಗೃಹ ಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು, 44 ಸಾವಿರ ರೂ.ಗಳನ್ನು ನೀಡಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ರವರ ಟ್ವೀಟ್ ಇಲ್ಲಿದೆ ನೋಡಿ: Click Here
ಇನ್ನೂ ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. (Gruha Lakshmi Scheme) ಟೀಕೆಗಳು ಸಾಯ್ತವೆ, ಕೆಲಸಗಳು ಉಳಿತವೆ! ಎಂದು ಆರಂಭಿಸಿ ವಿರೋಧ ಪಕ್ಷಗಳು ನಮ್ಮ ಗೃಹಲಕ್ಷ್ಮಿ ಯೋಜನೆಯಿಂದ ಅತ್ತೆ, ಸೊಸೆ ನಡುವೆ ಜಗಳ ಉಂಟಾಗುತ್ತದೆ ಎಂದು ಟೀಕೆ ಮಾಡಿದ್ದರು. ಆದರೆ ವಾಸ್ತವವೇ ಬೇರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಗೃಹಲಕ್ಷ್ಮಿ ಯೋಜನೆಯಡಿ (Gruha Lakshmi Scheme) ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಕೊಳವೆ ಬಾವಿ ಕೊರೆಸಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ. ನಮ್ಮ ದೃಢಸಂಕಲ್ಪ ಜನಪರವಾಗಿದ್ದು, ಗ್ಯಾರಂಟಿಗಳಿಂದ ಜನರಿಗೆ ಹೆಚ್ಚು ಅನುಕೂಲವಾಗಿದೆ (Gruha Lakshmi Scheme) ಎನ್ನುವ ಸಾರ್ಥಕತೆ ಇದೆ ಎಂದು ಟ್ವೀಟ್ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯನವರ ಟ್ವೀಟ್ ಇಲ್ಲಿದೆ ನೋಡಿ: Click Here
ಇನ್ನೂ ಈ ಕುರಿತು ಸಿಎಂ ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದು, ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲದಾರ ಓಣಿಯ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮಿ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್‌ವೆಲ್ ಕೊರೆಸಿ, ಸಮೃದ್ಧ ನೀರು ಪಡೆದಿದ್ದಾರೆ. ನಾಡಿನ ಬಡಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಈ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವುದು ಯೋಜನೆಯನ್ನು ಜಾರಿಗೆ ಕೊಟ್ಟ ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ. ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಅತ್ತೆ – ಸೊಸೆಯ ನಡುವೆ ಜಗಳ ಆರಂಭವಾಗುತ್ತದೆ, ಸಂಸಾರಗಳು ಒಡೆಯುತ್ತವೆ ಎಂದು ಟೀಕಿಸಿದ ಜನರಿಗೆ ಬಾರಿಸಿದ ತಪರಾಕಿ ಇದು. ಬೆಳಕಿಗೆ ಬಾರದ ಇಂತಹ ಇನ್ನೂ ಸಾವಿರಾರು ಯಶೋಗಾಥೆಗಳಿವೆ, ಗೃಹಲಕ್ಷ್ಮಿ ನಾಡಿನ ತಾಯಂದಿರ ಬಾಳಿಗೆ ಅಕ್ಷರಶಃ ಭಾಗ್ಯಲಕ್ಷ್ಮಿಯಾಗಿದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ.
ಗದಗ ಜಿಲ್ಲೆ ಗಜೇಂದ್ರಗಡ (Gruha Lakshmi Scheme) ಪಟ್ಟಣದ ಮಾಲಧಾರ ಓಣಿಯ ಅತ್ತೆ ಮಾಬುಬೀ, ಸೊಸೆ ರೋಷನ್ ಬೇಗಂ ಗೃಹಲಕ್ಷ್ಮಿ ಯೋಜನೆ ಹಣವನ್ನು ಪ್ರತಿ ತಿಂಗಳು ಕೂಡಿಟ್ಟಿದ್ದಾರೆ. ಒಟ್ಟು 44 ಸಾವಿರ ಹಣ ಕೂಡಿಟ್ಟಿದ್ದಾರೆ. ಬೋರ್‌ವೆಲ್ ಕೊರೆಸಲು 60 ಸಾವಿರ ರೂ. ಖರ್ಚು ಆಗಿದ್ದು, ಇದರಲ್ಲಿ 44 ಸಾವಿರ ರೂ.ಗಳನ್ನು ಅತ್ತೆ-ಸೊಸೆ ನೀಡಿದ್ದರೆ, ಉಳಿದ ಹಣವನ್ನು ಮಗ ಹಾಕಿ ಬೋರ್‌ವೆಲ್ ಕೊರಿಸಿದ್ದಾರೆ. ಇನ್ನು ಕೊಳವೆ ಬಾವಿಯಲ್ಲಿ ಭರ್ಜರಿ ನೀರು ಬಂದಿದ್ದರಿಂದ (Gruha Lakshmi Scheme) ಅತ್ತೆ-ಸೊಸೆ ಸಂತಸಗೊಂಡಿದ್ದು, ಸಿದ್ದರಾಮಯ್ಯ ಅವರು ನೀಡಿದ ಗೃಹ ಲಕ್ಷ್ಮಿ ಯೋಜನೆ ತುಂಬಾನೆ ಅನುಕೂಲವಾಗಿದೆ. ಹೀಗಾಗಿ ಅವರಿಗೆ ನಾವು ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಅತ್ತೆ ಸೊಸೆ ಹೇಳಿದ್ದಾರೆ.