ಮುಡಾ ಸೈಟು ಹಂಚಿಕೆ (MUDA Case) ಪ್ರಕರಣದ ನಿಮಿತ್ತ ಇಂದು ಹೈಕೋರ್ಟ್ ನೀಡಿದ ತೀರ್ಪನ್ನು ಗೌರವಿಸಿ, ಗೌರವಯುತವಾಗಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಸಿಎಂ ಸಿದ್ದರಾಮಯ್ಯನವರ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ. ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಈ ಕುರಿತು ಬಿ.ವೈ.ವಿಜಯೇಂದ್ರ ಮಾತನಾಡಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರವರ ವಿರುದ್ದ ತನಿಖೆಗೆ ಅವಕಾಶ ಕೊಟ್ಟಿದ್ದ ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿಹಿಡಿದಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ನವರ ಅರ್ಜಿಯನ್ನು ಕೋರ್ಟ್ ವಜಾ ಗೊಳಿಸಿದೆ. ಕಾನೂನಿನ ಮುಂದೆ ಎಲ್ಲರೂ ಒಂದೇ ಎಂದು ಹೈಕೋರ್ಟ್ ತಿಳಿಸಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‍ನಲ್ಲಿ ಸುದೀರ್ಘ ವಾದ, ಪ್ರತಿವಾದದ ಬಳಿಕ ಈ ತೀರ್ಪು ಹೊರಬಿದ್ದಿದೆ. ಗೌರವಾನ್ವಿತ ರಾಜ್ಯಪಾಲರು ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಶನ್‍ಗೆ ಅನುಮತಿ ಕೊಟ್ಟಿದ್ದರು. ಅದನ್ನು ಕಾಂಗ್ರೆಸ್ಸಿಗರು ಗೌರವಾನ್ವಿತ ರಾಜ್ಯಪಾಲರು, ರಾಜಭವನವನ್ನು ಕೇಂದ್ರದ ಏಜೆಂಟ್ ಎಂದು ಆಕ್ಷೇಪಿಸಿದ್ದರು ಇದು ಸರಿಯಲ್ಲ ಎಂದು ಟೀಕೆ ಮಾಡಿದರು.
ಇನ್ನೂ ಕೆಲವು ದಿನಗಳಿಂದ ಭ್ರಷ್ಟ ಕಾಂಗ್ರೇಸ್ ಸರ್ಕಾರ ವಿರುದ್ದ ಬಿಜೆಪಿ ನಿರಂತರ ಹೋರಾಟ ನಡೆಸಿತ್ತು. ವಾಲ್ಮೀಕಿ ಅಭಿವೃದ್ದಿ ನಿಗಮದ ಭ್ರಷ್ಟಾಚಾರ ವಿರುದ್ದ ನಿರಂತರ ಹೋರಾಟ ಬಳಿಕ ಮುಡಾ ಹಗರಣದ ವಿರುದ್ದ ಹೋರಾಟ ಹಮ್ಮಿಕೊಂಡಿದ್ದೇವು. ಬೆಂಗಳುರು ಟು ಮೈಸೂರು ಪಾದಯಾತ್ರೆಯನ್ನು ನಡೆಸಿ ಸಿಎಂ ವಿರುದ್ದ ಕ್ರಮಕ್ಕೆ ಆಗ್ರಹಿಸಲಾಗಿತ್ತು. ಇದೀಗ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. RTI ಕಾರ್ಯಕರ್ತರು ರಾಜ್ಯಪಾಲರಿಗೆ ಈ ಹಗರಣದ ಸಂಬಂಧ ತನಿಖೆ ನಡೆಸಲು ಒತ್ತಾಯಿಸಿದ್ದರು. ಭ್ರಷ್ಟಾಚಾರದ ಕಳಂಕ ಹೊತ್ತ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕು. ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದರು.