C-Dac ನಲ್ಲಿದೆ 91 ಹುದ್ದೆಗಳಿವೆ, ಇಂಜನೀಯರ್, ಮ್ಯಾನೇಜರ್ ಹುದ್ದೆಗಳಿಗೆ ಅಧಿಸೂಚನೆ, ಕೂಡಲೇ ಅರ್ಜಿ ಸಲ್ಲಿಸಿ…!

ಬೆಂಗಳೂರಿನಲ್ಲಿ ಕೆಲಸ ಮಾಡಲು ಬಯಸುವಂತಹವರಿಗೆ ಇಲ್ಲೊಂದು ಗುಡ್ ನ್ಯೂಸ್ ಇದೆ. C-Dac (ಸೆಂಟರ್​ ಫಾರ್​ ಡೆವಲ್ಮೆಂಟ್​ ಆಫ್​ ಅಡ್ವಾನ್ಸ್​ ಕಂಪ್ಯೂಟಿಂಗ್) ಬೆಂಗಳೂರಿನಲ್ಲಿ 91 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ. ಪ್ರಾಜೆಕ್ಟ್ ಇಂಜನೀಯರ್‍, ಪ್ರಾಜೆಕ್ಟ್ ಮ್ಯಾನೇಜರ್‍ ಹಾಗೂ ಸೀನಿಯರ್‍ ಪ್ರಾಜೆಕ್ಟ್ ಇಂಜನೀಯರ್‍ ಸೇರಿದಂತೆ ಹಲವು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಲೇಖನದ ಮೂಲಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಅಂಶಗಳನ್ನು ಹಂಚಿಕೊಳ್ಳಲಾಗಿದೆ.

ಹುದ್ದೆಗಳ ವಿವರ : (ಒಟ್ಟು ಹುದ್ದೆಗಳು 91)

  • ಪ್ರಾಜೆಕ್ಟ್​ ಇಂಜಿನಿಯರ್​​ 52
  • ಪ್ರಾಜೆಕ್ಟ್​ ಮ್ಯಾನೇಜರ್​​ 4
  • ಸೀನಿಯರ್​ ಪ್ರಾಜೆಕ್ಟ್​​ ಇಂಜಿನಿಯರ್​​ – 35

C Dac Recruitment 1

  • ವಿದ್ಯಾರ್ಹತೆ: ಈ ಮೇಲೆ ತಿಳಿಸಿದ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಸ ಬಯಸುವಂತಹ ಅಭ್ಯರ್ಥಿಗಳು ಕಂಪ್ಯೂಟರ್​ ಸೈನ್ಸ್​​ನಲ್ಲಿ ಬಿಇ, ಬಿಟೆಕ್​, ಎಂಇ ಮತ್ತು ಎಂಟೆಕ್​ ಹಾಗೂ ಸ್ನಾತಕೋತ್ತರ ಪದವಿ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಅಥವಾ ವೆಬ್ ಸೈಟ್ ಗೆ (https://careers.cdac.in/advt-details/BLK-13112024-EPPW0) ಭೇಟಿ ನೀಡಬಹುದಾಗಿದೆ.
  • ವಯೋಮಿತಿ: C-Dac ನಲ್ಲಿ ಖಾಲಿಯಿರುವ ಹುದ್ದೆಗಳಾದ ಪ್ರಾಜೆಕ್ಟ್​​ ಇಂಜಿನಿಯರ್ ಹುದ್ದೆಗೆ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35, ಪ್ರಾಜೆಕ್ಟ್​ ಮ್ಯಾನೇಜರ್​ ಹುದ್ದೆಗೆ ಗರಿಷ್ಠ 56 ಮತ್ತು ಸೀನಿಯರ್​ ಪ್ರಾಜೆಕ್ಟ್ ಹುದ್ದೆಗೆ ಗರಿಷ್ಠ ವಯೋಮಿತಿ 40 ವರ್ಷ ಆಗಿದೆ. ಸರ್ಕಾರದ ನಿಯಮಾವಳಿಯಂತೆ ಪ.ಜಾ, ಪ.ಪಂ ಮತ್ತು ಒಬಿಸಿ, ವಿಕಲಚೇತನ, ನಿವೃತ್ತ ಸೇವಾದಾರರಿಗೆ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.

ಇನ್ನೂ ಈ ಹುದ್ದೆಗಳಿಗೆ ಅರ್ಹರಾದ ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿ ತಿಳಿಸಿದಂತಹ ಎಲ್ಲಾ ಅಂಶಗಳನ್ನು ಒಮ್ಮೆ ಪರಿಶೀಲಿಸಿ, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯಾವುದೇ ಅರ್ಜಿ ಶುಲ್ಕ ನಿಗಧಿಪಡಿಸಿಲ್ಲ. ಈ ಹುದ್ದೆಗಳನ್ನು ಆಯ್ಕೆ ಮಾಡಲು ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿ.5 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಗಾಗಿ ಅಭ್ಯರ್ಥಿಗಳು cdac.in ಭೇಟಿ ನೀಡಿ ಪರಿಶೀಲಿಸಬಹುದಾಗಿದೆ.

Leave a Reply

Your email address will not be published. Required fields are marked *

Next Post

Local News: ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಿ: ಸುಬ್ಬಾರೆಡ್ಡಿ

Wed Nov 27 , 2024
Local News – ಶೈಕ್ಷಣಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರು ತಮ್ಮ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಬೇಕಾದ ಅಗತ್ಯವಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು. ಬಾಗೇಪಲ್ಲಿ ಪಟ್ಟಣದ ಬಾಲಕಿಯರ ಶಾಲಾ ಸಂಕೀರ್ಣ ಆವರಣದಲ್ಲಿ (Local News) ಕರ್ನಾಟಕ ಉರ್ದು ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಡಾ.ಮೌಲಾನ ಅಬ್ದುಲ್ ಕಲಾಂ ಆಜಾದ್ ರವರ 136 ನೇ ಜಯಂತಿ  ಹಾಗೂ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಲ್ಪಸಂಖ್ಯಾತ […]
Education Day in Bagepalli
error: Content is protected !!