Banking jobs in 2025- ಬ್ಯಾಂಕ್ ಗಳಲ್ಲಿ ಕೆಲಸ ಮಾಡಲು ಬಯಸುವಂತಹ ನಿರುದ್ಯೋಗಿಗಳಿಗೆ ಬ್ಯಾಂಕ್ ಆಫ್ ಇಂಡಿಯಾ ಅವಕಾಶ ಕಲ್ಪಿಸುತ್ತಿದೆ. ದೇಶದಾದ್ಯಂತ 4500 ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿರುವಂತಹ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿಯಿರುವ 266 ಝೋನ್ ಬೇಸ್ಡ್ ಆಫೀಸರ್ (ಅಸಿಸ್ಟಂಟ್ ಮ್ಯಾನೇಜರ್) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಹಾಗೂ ಅರ್ಹರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಫೆ.9 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಅಧಿಸೂಚನೆಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
Central Bank of India Recruitment 2025 – ಸಂಕ್ಷಿಪ್ತ ವಿವರ
- Organization Name: Central Bank of India (CBI)
- Post Name: Zone-Based Officer (ZBO )
- Total Vacancies: 266 Posts
- Application Mode: Online
- Last Date to Apply: 09 /02/ 2025
- Official Website: www.centralbankofindia.co.in
Central Bank of India Recruitment 2025 – Zone wise wise vacancies:
Zone | State | Vacancy |
Ahmedabad | Gujrat, Dadra & Nagar Haveli, Daman & Diu | 123 |
Chennai | Tamil Nadu, Pondicherry, Kerala | 58 |
Guwahati | Assam, Manipur, Nagaland, Meghalaya, Arunachal Pradesh, Mizoram & Tripura | 43 |
Hyderabad | Telangana, Andhra Pradesh & Karnataka | 42 |
Total | 266 |
ವಿದ್ಯಾರ್ಹತೆ ಹಾಗೂ ವೇತನ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿಯಿರುವ ಝೋನ್ ಬೇಸ್ಡ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ದೇಶದ ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹48,480 – 85,920/- ವೇತನವನ್ನು ನಿಗದಿಪಡಿಸಲಾಗಿದೆ.
ವಯೋಮಿತಿ : ಅರ್ಜಿ ಸಲ್ಲಿಸಲು ಬಯಸುವಂತಹವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 32 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ-ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ/ಮಹಿಳಾ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 175 ರೂ. ಪಾವತಿಸಬೇಕು. ಇತರ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 850 ರೂ. ಅನ್ನು ಪಾವತಿಸಬೇಕು. ಆನ್ ಲೈನ್ ಮೂಲಕ ಮಾತ್ರ ಅರ್ಜಿ ಶುಲ್ಕ ಪಾವತಿಸಬೇಕಿದೆ.
ಆಯ್ಕೆ ವಿಧಾನ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರವಿದೆ. ಲಿಖಿತ ಪರೀಕ್ಷೆಯು ಇಂಗ್ಲಿಷ್ ಭಾಷೆ, ಬ್ಯಾಂಕಿಂಗ್ ನಾಲೆಡ್ಜ್, ಕಂಪ್ಯೂಟರ್ ನಾಲೆಡ್ಜ್, ಪ್ರೆಸಂಟ್ ಎಕಾನಾಮಿಕ್ ಮತ್ತು ಜನರಲ್ ಎವರ್ನೆಸ್ ಮುಂತಾದ ವಿಷಯಗಳ ಪ್ರಶ್ನೆಗಳನ್ನು ಒಳಗೊಂಡಿದೆ.
Central Bank of India Recruitment 2025 – ಪ್ರಮುಖ ದಿನಾಂಕಗಳು:
- ಆನ್‌ಲೈನ್ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ: 21-01-2025
- ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 09-02-2025
- ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಲು ಕೊನೆ ದಿನಾಂಕ: 24-02-2025
- ಆನ್‌ಲೈನ್ ಪರೀಕ್ಷೆಯ ಸಂಭಾವ್ಯ ದಿನಾಂಕ: 2025 ರ ಮಾರ್ಚ್.
Central Bank of India Recruitment 2025 – ಅರ್ಜಿ ಸಲ್ಲಿಸುವ ವಿಧಾನ :
- Visit the Central Bank of India Website https://www.centralbankofindia.co.in/en
- Click on the “Careers with us“
- Click on the “Current Vacancies“
- Next Page, Scroll Down and Select the “Recruitment of Zone Based officer in Junior Management Grade Scale I in Mainstream on Regular Basis“
- Click on the “APPLY ONLINE“ (https://ibpsonline.ibps.in/cbijan25/)
- Fill in the application form with accurate details.
- Upload the required documents.
- Pay the application fee as per your category.
- Submit the form and take a printout for future reference.
Central Bank of India Recruitment 2025 – ಪ್ರಮುಖ ಲಿಂಕ್ ಗಳು:
- Official Career Page of Central Bank of India: Website Link
- Advertisement PDF for Central Bank of India: Notification PDF
- Online Application Form for Central Bank of India: Apply Link