Friday, August 1, 2025
HomeStateಜನರ ಕೆಲಸಗಳನ್ನು ಶೀಘ್ರವಾಗಿ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಜನರ ಕೆಲಸಗಳನ್ನು ಶೀಘ್ರವಾಗಿ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಬಾಗೇಪಲ್ಲಿ: ವಿನಾ ಕಾರಣ ಸಾರ್ವಜನಿಕರನ್ನು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸದೆ ತ್ವರಿತವಾಗಿ  ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ಸರ್ಕಾರ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಈ ಕಾರ್ಯಕ್ರಮವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ರವರ ಅಧ್ಯಕ್ಷೆತೆಯಲ್ಲಿ ನಡೆದ  ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ  ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು. ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಸಂಬಂಧಿಸಿದಂತೆ 30,  ಪುರಸಭೆಗೆ ವ್ಯಾಪ್ತಿಗೆ ಸೇರಿದ 18,  ಗ್ರಾಮೀಣಾಭಿವೃದ್ದಿ, ಪಂಚಾಯತ್ ರಾಜ್ ಇಲಾಖೆಗೆ ಸೇರಿದ 10, ಪೊಲೀಸ್ ಇಲಾಖೆಗೆ ಸೇರಿದಂತೆ 5 ಅರ್ಜಿಗಳು ಒಟ್ಟು 65 ಅರ್ಜಿಗಳು ಬಂದಿದ್ದವು. ಈ ಎಲ್ಲಾ ಅರ್ಜಿಗಳನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು  ವಿಲೇವಾರಿಗೆ ಸೂಕ್ತ ಕ್ರಮವಹಿಸಿದರು.

DC Meeting 1

ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿ.ಪಂ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಪ್ರಕಾಶ್,ಜಿ,ಟಿ ನಿಟ್ಟಾಲಿ ರವರು ಜಂಟಿಯಾಗಿ ಸಾರ್ವಜನಿಕರ ದೂರುಗಳನ್ನ ಪರಿಶೀಲನೆ ನಡೆಸಿ ಸ್ಥಳದಲ್ಲಿಯೇ ಹಲವು ಅರ್ಜಿಗಳನ್ನು ಇತ್ಯಾರ್ಥಪಡಿಸಿದರು. ಉಳಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯಾರ್ಥಗೊಳಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ  ಕಟ್ಟುನಿಟ್ಟಿನ ಸೂನೆ ನೀಡಿದರು. ಪಟ್ಟಣದ ಮುಖ್ಯ ರಸ್ತೆಯಲ್ಲಿನ ಪುಟ್‍ಪಾತ್ ಮೇಲೆ ಇಟ್ಟಕೊಂಡಿರುವ ಅನಧಿಕೃತ ಅಂಗಡಿಗಳ ತೆರೆವುಗೊಳಿಸುವಂತೆ,  ಮೂಲಭೂತ ಸೌಲಭ್ಯಗಳಲ್ಲಿ ಒಂದಾಗಿರುವ ಶೌಚಾಲಯಗಳ ಬಗ್ಗೆ  ಶೌಚಾಲಯಗಳ ಹಾಗೂ ಪುರಸಭೆ ವ್ಯಾಪ್ತಿಯಲ್ಲಿನ ಪಾರ್ಕ್‍ಗಳ ನಿರ್ವಾಹಣೆಗೆ  ಹೆಚ್ಚಿನ ಕಾಳಚಿವಹಿಸುವಂತೆ ಪುರಸಭೆ ಮುಖ್ಯಾದಿಕಾರಿಗಳಿಗೆ ಸೂಚನೆ ನೀಡಿದರು.

ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ  ಧಾರವಾಡ ಐಐಟಿಗೆ ಪ್ರವೇಶದ ಅರ್ಹತೆ ಪಡೆದಿದ್ದ ಬಾಗೇಪಲ್ಲಿಯ ವಂಶಿಕ.ಜಿ ಎಂಬ ವಿದ್ಯಾರ್ಥಿನಿಯ ಜಾತಿ ಮತ್ತು ಆಧಾಯ ಪ್ರಮಾಣ ಪತ್ರ  ಅಸಿಂದುವಾಗಿದ್ದರಿಂದ ನೂತನವಾಗಿ ಸಲ್ಲಿಸಿದ್ದ  ಸದರಿ ಅರ್ಜಿಯ ವಿಲೆವಾರಿಗೆ ತೆಡಕಾಗಿತ್ತು. ಇಂದಿನ ಜನತಾ ದರ್ಶನದಲ್ಲಿ ಜಿಲ್ಲಾಧಿಕಾರಿಗಳು ಈ ಅರ್ಜಿಯನ್ನು ಪರಿಶೀಲನೆ ನಡೆಸಿ  ಈ ಹಿಂದಿನ ಅರ್ಜಿಯನ್ನು ರದ್ದುಗೊಳಿಸಿ ಸ್ಥಳದಲ್ಲಿಯೇ ವಿಲೆವಾರಿ ಮಾಡಿ ಜಾತಿ ಮತ್ತು ಆಧಾಯ ಪ್ರಮಾಣ ಪತ್ರವನ್ನು ಮಂಜೂರು ಮಾಡಿದರು.

ಈ ಸಂದರ್ಭದಲ್ಲಿ  ಜಿ.ಪಂ ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ತಹಸೀಲ್ದಾರ್ ಪ್ರಶಾಂತ್ ಕೆ ಪಾಟಿಲ್, ತಾ.ಪಂ ಇಒ ರಮೇಶ್ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular