Chikkaballapur Police – ಸಮಾಜದಲ್ಲಿ ಅಪರಾಧ ಪ್ರಕರಣಗಳನ್ನು ತಡೆಯಲು ಪೊಲೀಸರೊಂದಿಗೆ ಸ್ಥಳೀಯರ ಸಹಕಾರ ಸಹ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಹಾಗೂ ಹಳ್ಳಿಗಳಲ್ಲಿ ಸುರಕ್ಷಿತ, ಹೆಚ್ಚು ಪೊಲೀಸ್ ಸಹಕಾರಿ ವಾತಾವರಣವನ್ನು ಉತ್ತೇಜಿಸುವ ಉದ್ದೇಶದಿಂದ ಮನೆ ಮನೆ ಪೊಲೀಸ್ ಹಾಗೂ ಮಾದರಿ ಗ್ರಾಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ತಿಳಿಸಿದರು.

Chikkaballapur Police – ಸಮುದಾಯ ಮತ್ತು ಪೊಲೀಸ್ ಕೈಜೋಡಿಸುವ ಯೋಜನೆ
ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಆಯೋಜಿಸಿದ್ದ ಮನೆ ಮನೆ ಪೊಲೀಸ್ ಹಾಗೂ ಮಾದರಿ ಗ್ರಾಮ ಕಾರ್ಯಕ್ರಮವನ್ನು ಗಿಡ ನೆಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವುದು, ಅಪರಾಧ ತಡೆಗಟ್ಟುವಿಕೆಯಲ್ಲಿ ನಾಗರಿಕರ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಮತ್ತು ಹಳ್ಳಿಗಳಲ್ಲಿ ಸುರಕ್ಷಿತ, ಹೆಚ್ಚು ಪೊಲೀಸ್ ಸಹಕಾರಿ ವಾತಾವರಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಉದ್ದೇಶದಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮನೆ ಮನೆ ಪೊಲೀಸ್ ಹಾಗೂ ಮಾದರಿ ಗ್ರಾಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದರು.
Chikkaballapur Police – ಸೈಬರ್ ಕ್ರೈಂ ಪ್ರಕರಣಗಳ ಬಗ್ಗೆ ಜಾಗೃತಿ ಅಗತ್ಯ
ಇತ್ತೀಚೆಗೆ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ ಈಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಸೈಬರ್ ಅರೆಸ್ ಎಂದು ಬೆದರಿಕೆ ಕರೆಗಳು ಬರುತ್ತವೆ, ಎಪಿಕೆ ಪೈಲ್ ಗಳನ್ನು ಯಾವುದೇ ಕಾರಣಕ್ಕೂ ಡೌನ್ ಲೋಡ್ ಮಾಡಬಾರದು ಹಾಗೇನಾದರು ಸಮಸ್ಯೆ ಆಗಿದ್ದರೆ ತಕ್ಷಣ ಸೈಬರ್ ಸಹಾಯವಾಣಿ 1930ಗೆ ಕರೆಮಾಡಿ. ಮೋಟಾರುವಾಹನ ಸುರಕ್ಷತೆ, 112 ಸಹಾಯವಾಗಿ ಬಗ್ಗೆ, ಮಕ್ಕಳ ಸುರಕ್ಷತೆ ಬಗ್ಗೆ ಹಾಗೂ ಮನೆ ಮನೆ ಪೊಲೀಸ್ ಬಗ್ಗೆ ಮಾಹಿತಿ ನೀಡಿದರು.

Chikkaballapur Police – ಹೆಣ್ಣು ಮಕ್ಕಳ ಸುರಕ್ಷತೆ ಮತ್ತು ಪೋಕ್ಸೋ ಕಾಯ್ದೆ
ಚಿಕ್ಕಬಳ್ಳಾಪುರ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಗನ್ನಾಥ್ ರೆಡ್ಡಿ, ಹೆಣ್ಣು ಮಕ್ಕಳ ಸುರಕ್ಷತೆ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. ಈ ಉದ್ಘಾಟನೆಯ ಭಾಗವಾಗಿ, ಪೊಲೀಸ್ ಅಧಿಕಾರಿಗಳು ಗ್ರಾಮದಾದ್ಯಂತ ಮನೆಗಳಿಗೆ ಭೇಟಿ ನೀಡಿ ಎರಡು ಸಮುದಾಯ ಕೇಂದ್ರಿತ ಕಾರ್ಯಕ್ರಮಗಳ ಉದ್ದೇಶಗಳನ್ನು ವಿವರಿಸಿದರು.
ಗುಡಿಬಂಡೆ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಮುನಿಕೃಷ್ಣ ಮಾತನಾಡಿ, ಪೊಲೀಸ್ ಮಾದರಿ ಗ್ರಾಮ ಕಾರ್ಯಕ್ರಮವು ಮನೆಗಳು ಮತ್ತು ಶಾಲೆಗಳಿಗೆ ದೈನಂದಿನ ಚಟುವಟಿಕೆಗಳಿಗೆ ಒತ್ತು ನೀಡುತ್ತದೆ, ಅಧಿಕಾರಿಗಳು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳೊಂದಿಗೆ ತೊಡಗಿಸಿಕೊಳ್ಳಲು, ಮಾಹಿತಿ ಸಂಗ್ರಹಿಸಲು ಮತ್ತು ಸಾರ್ವಜನಿಕ ಸುರಕ್ಷತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಅನುವು ಮಾಡಿಕೊಡುತ್ತದೆ ಎಂದರು. Read this also : ಎಚ್ಚರ! ಹೊಸ ರೀತಿಯ ಸೈಬರ್ ವಂಚನೆ: OTP ಇಲ್ಲದೆ ಖಾತೆ ಖಾಲಿ….!
ಇದೇ ಸಮಯದಲ್ಲಿ ಹಂಪಸಂದ್ರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಲಕ್ಷ್ಮಿನಾರಾಯಣ ಮಾತನಾಡಿ, ಗುಡಿಬಂಡೆ ಪೊಲೀಸ್ ಇಲಾಖೆಯ ವತಿಯಿಂದ ನಮ್ಮ ಹಂಪಸಂದ್ರ ಗ್ರಾಮವನ್ನು ಮಾದರಿ ಗ್ರಾವನ್ನಾಗಿ ಆಯ್ಕೆ ಮಾಡಿರುವುದು ಸಂತೋಷದ ವಿಷಯ. ಕಳೆದ 20 ವರ್ಷಗಳ ಹಿಂದೆಗೆ ಹೋಲಿಕೆ ಮಾಡಿದರೆ ಈಗ ಹಂಪಸಂದ್ರ ಗ್ರಾಮ ಕ್ರೈಮ್ ನಲ್ಲಿ ಸಾಕಷ್ಟು ಸುಧಾರಣೆಯಾಗಿದೆ ಎಂದರು.

Chikkaballapur Police – ಕಾರ್ಯಕ್ರಮದಲ್ಲಿ ಹಾಜರಿದ್ದವರು
ಈ ಸಂದರ್ಭದಲ್ಲಿ ಫೋರೆನ್ಸಿಕ್ ತಜ್ಞ ವೈದ್ಯರಾದ ಡಾ. ವೆಂಕಟೇಶ್, ಚಿಕ್ಕಬಳ್ಳಾಪುರ ಡಿವೈಎಸ್‌ಪಿ ಶಿವಕುಮಾರ್, ಗುಡಿಬಂಡೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಗಣೇಶ್, ರಮೇಶ್, ಸಿಬ್ಬಂದಿ, ಹಂಪಸಂದ್ರ ಗ್ರಾಪಂ ಅಧ್ಯಕ್ಷೆ ಮುನಿಲಕ್ಷ್ಮಮ್ಮ, ಉಪಾಧ್ಯಕ್ಷೆ ಮುದ್ದುಗೌರಮ್ಮ, ಸದಸ್ಯರಾದ ಶಿವರಾಮ್, ನಾಗರಾಜ್, ಪಿಡಿಓ ಶ್ರೀನಿವಾಸ್, ಹಂಪಸಂದ್ರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರು, ಸಹ ಶಿಕ್ಷಕರು ಶಾಲಾ ವಿದ್ಯಾರ್ಥಿಗಳು, ಹಂಪಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು, ವಿವಿಧ ಗ್ರಾಮಗಳ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.
