ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಗಿಂತ ಒಂದು ಮತ ಹೆಚ್ಚಿಗೆ ಪಡೆದರೇ ತಾನು ರಾಜೀನಾಮೆ ನೀಡುವುದಾಗಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ರವರಿಗೆ ಸವಾಲು ಹಾಕಿದ್ದರು. ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪ್ರದೀಪ್ ಈಶ್ವರ್ ಹಾಕಿದ್ದ ಈ ಸವಾಲಿನ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಟ್ರೋಲ್ ಆಗಿತ್ತು. ಇದೀಗ ಪ್ರದೀಪ್ ಈಶ್ವರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ನಕಲಿ ಪತ್ರವೊಂದು ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿದೆ.
ಚಿಕ್ಕಬಳ್ಳಾಪುರದಲ್ಲಿ ಕಳೆದ 2023ರ ವಿಧಾನಸಭಾ ಚುನಾವಣೆಯಿಂದ ಹಾಲಿ ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಡಾ.ಕೆ.ಸುಧಾಕರ್ ನಡುವೆ ಜೋರಾಗಿಯೇ ಟಾಕ್ ವಾರ್ ನಡೆಯುತ್ತಿತ್ತು. ಡಾ.ಕೆ.ಸುಧಾಕರ್ 2023ರ ಚುನಾವಣೆಯಲ್ಲಿ ಸೋಲು ಕಂಡರು. ಬಳಿಕ ಅವರು ಲೋಕಸಭಾ ಚುನಾವಣೆಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಭರ್ಜರಿ ಜಯಗಳಿಸಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರದಲ್ಲೂ ಮಾತಿನ ಭರಾಟೆ ಜೋರಾಗಿಯೇ ಇತ್ತು. ಬಿಜೆಪಿ ಅಭ್ಯರ್ಥಿಯಾದಂತಹ ಡಾ ಕೆ ಸುಧಾಕರ್ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಮತವನ್ನು ಲೀಡ್ ಪಡೆದುಕೊಂಡರೇ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಶಾಸಕ ಪ್ರದೀಪ್ ಈಶ್ವರ್ ಸವಾಲು ಹಾಕಿದ್ದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ 20000 ಮತಗಳನ್ನು ಪಡೆದುಕೊಂಡಿದ್ದಾರೆ.
ಇನ್ನೂ ಡಾ.ಕೆ.ಸುಧಾಕರ್ ಅತ್ಯಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಿದ್ದಂತೆ ಸೋಷಿಯಲ್ ಮಿಡಿಯಾದಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆಯ ಬಗ್ಗೆ ಟ್ರೋಲ್ ಗಳು ಜೋರಾಗಿಯೇ ಕೇಳಿಬಂದವು. ತಾವು ಹಾಕಿದ ಸವಾಲಿನಂತೆ ಯಾವಾಗ ರಾಜೀನಾಮೆ ಕೊಡ್ತೀರಾ ಅಣ್ಣಾ, ಬುಜ್ಜಿ ಲೀಡ್ ಚುಸ್ಯಾವಾ ಎಂಬೆಲ್ಲಾ ಕಾಮೆಂಟ್ ಗಳ ಮೂಲಕ ಸಖತ್ ಟ್ರೋಲ್ ಮಾಡಿದ್ದರು. ಇದೀಗ ಶಾಸಕ ಪ್ರದೀಪ್ ಈಶ್ವರ್ ಕೊಟ್ಟ ಮಾತಿನಂತೆ ರಾಜೀನಾಮೆ ನೀಡಿದ್ದಾರೆ ಎಂದು ರಾಜೀನಾಮೆ ಪತ್ರವೊಂದು ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿದೆ. ಆದರೆ ಈ ಪತ್ರ ನಕಲೀ ಎಂದು ಕಾಂಗ್ರೇಸ್ ಬೆಂಬಲಿಗರು ಹೇಳುತ್ತಿದ್ದಾರೆ. ಈ ಕುರಿತು ಶಾಸಕ ಪ್ರದೀಪ್ ಈಶ್ವರ್ ರವರೇ ಸ್ಪಷ್ಟನೆ ನೀಡಬೇಕಾಗಿದೆ.
ಇನ್ನೂ ವೈರಲ್ ಆಗುತ್ತಿರುವ ಪತ್ರದಲ್ಲಿ ಏನಿದೆ: ಕೊಟ್ಟ ಮಾತು ಇಟ್ಟ ಹೆಜ್ಜೆ ತಪ್ಪಬಾರದು ಅನ್ನೋ ಮಾತನ್ನು ಜೀವನ ದುದ್ದಕ್ಕೂ ನಾನು ಪಾಲಿಸುತ್ತಾ ಬಂದಿದ್ದೇನೆ. ಕೆಲ ದಿನಗಳ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಡಾ.ಕೆ ಸುಧಾಕರ್ ಒಂದು ಮತವನ್ನು ತೆಗೆದುಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಾರ್ವಜನಿಕವಾಗಿ ಹೇಳಿದ್ದೆ. ಅದರಂತೆ ಈಗ ಸುಧಾಕರ್ ಅವರು 20,000 ಮತಗಳನ್ನು ನನ್ನ ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿರುವುದರಿಂದ ನಾನು ಹಿಂದೆ ಆಡಿದ ಮಾತಿಗೆ ಬದ್ಧನಾಗಿ ಸ್ವಯಿಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಎಂದು ಸಭಾಪತಿ ಯುಟಿ ಖಾದರ್ ಅವರಿಗೆ ಪತ್ರವನ್ನು ಬರೆಯಲಾಗಿದೆ.