Monday, June 30, 2025
HomeStateBPL Ration Card: ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್, ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಲು...

BPL Ration Card: ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್, ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಲು ಸಿಎಂ ಸಿದ್ದು ಸೂಚನೆ….!

BPL Ration Card – ಕರ್ನಾಟಕದಲ್ಲಿ ಕೆಲವೊಂದು ದಿನಗಳಿಂದ ಬಿಪಿಎಲ್ ಕಾರ್ಡ್ ರದ್ದು ಮಾಡುವ ಕುರಿತು ಸುದ್ದಿಗಳು ಕೇಳಿಬರುತ್ತಲೇ ಇದೆ. ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಲಾಗದೇ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿದೆ ಎಂಬ ಆರೋಪಗಳನ್ನು ಸಹ ಪ್ರತಿಪಕ್ಷಗಳು ಮಾಡಿದ್ದವು. ಇದೀಗ ಸಿಎಂ ಸಿದ್ದರಾಮಯ್ಯ ಆಹಾರ ನಾಗರೀಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದು, ಸಭೆಯಲ್ಲಿ ಅಂತಹವರ ಬಿಪಿಎಲ್ ಪಡಿತರ ಚೀಟಿಗಳನ್ನು ತೆಗೆದು ಹಾಕುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Siddaramaiah BPL Card warning 0

ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ, ಅವರ ಗೃಹ ಕಚೇರಿಯಲ್ಲಿ ನಡೆದ ಆಹಾರ ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆದಿದ್ದು, ಸಭೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅನರ್ಹ ಬಿಪಿಎಲ್ ಪಡಿತರದಾರರನ್ನು ಹಂತ ಹಂತವಾಗಿ ತೆಗೆದು ಹಾಕಬೇಕು. ಆದರೆ ಒಂದು ಅರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದೆಂದು ಸೂಚನೆ ನೀಡಿದ್ದಾರೆ. ಇನ್ನೂ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರು ಸ್ವತಃ ಅವರೇ ತಮ್ಮ ಕಾರ್ಡ್‌ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು. ಉಳಿದವರಿಗೆ ನೊಟೀಸ್ ನೀಡಿ ಕಾರ್ಡ್ ಗಳನ್ನು ರದ್ದುಗೊಳಿಸಲು ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Siddaramaiah BPL Card warning 1

BPL Ration Card – ಸಭೆಯ ಪ್ರಮುಖ ಅಂಶಗಳು:

  • ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ, ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ ಹಂತವಾಗಿ ತೆಗೆದು ಹಾಕಬೇಕು. ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗದಂತೆ ನೋಡಿಕೊಳ್ಳಬೇಕು. ಅನರ್ಹ ಬಿಪಿಎಲ್‌ ಪಡಿತರ ಚೀಟಿದಾರರು ಸ್ವಯಂ ತಮ್ಮ ಬಿಪಿಎಲ್ ಕಾರ್ಡ್ ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು. ಹಿಂತಿರುಗಿಸದಿದ್ದಲ್ಲಿ ಅಂತವರಿಗೆ ನೊಟೀಸ್ ನೀಡಿ ಕಾರ್ಡ್‌ಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು.
  • ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ ₹4,692 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್ ಅಂತ್ಯದವರೆಗೆ ₹3,253 ಕೋಟಿ ವೆಚ್ಚ ಮಾಡಲಾಗಿದೆ. 4,44,48,294 ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ.
  • ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಬೇಕು. ಸಮಿತಿ ನಿಯಮಿತವಾಗಿ ಸಭೆ ನಡೆಸುವುದನ್ನು ಖಾತ್ರಿಪಡಿಸಬೇಕು.
  • ರಾಜ್ಯದಲ್ಲಿ ಒಟ್ಟು 4,518 ಪೆಟ್ರೋಲ್ ಬಂಕ್‌ಗಳಿದ್ದು, ಡಿಸೆಂಬರ್ ಅಂತ್ಯದವರೆಗೆ 503 ಪೆಟ್ರೋಲ್‌ ಬಂಕ್‌ಗಳ ತಪಾಸಣೆ ಮಾಡಲಾಗಿದೆ. ಪೆಟ್ರೋಲ್ ಬಂಕ್‌ಗಳ ತಪಾಸಣೆಯನ್ನು ಹೆಚ್ಚಿಸಿ ಅಳತೆ ಮತ್ತು ಗುಣಮಟ್ಟದಲ್ಲಿ ನಡೆಯುವ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು.
  • ಕನಿಷ್ಠ ಬೆಂಬಲ ಬೆಲೆ ಅಡಿ ಆಹಾರ ಧಾನ್ಯ ಸಂಗ್ರಹಿಸಲು ಎಲ್ಲಾ ವ್ಯವಸ್ಥೆ ಮಾಡಬೇಕು. ರೈತರಿಗೆ ಸಮಸ್ಯೆಯಾಗದಂತೆ ತ್ವರಿತವಾಗಿ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು.
  • ರಾಜ್ಯದಲ್ಲಿ 1,53,69,945 ಪಡಿತರ ಚೀಟಿಗಳಿದ್ದು, 5,30,88,636 ಫಲಾನುಭವಿಗಳಿದ್ದಾರೆ.
  • ಒ೦ದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಕರ್ನಾಟಕದಲ್ಲಿ ಬೇರೆ ರಾಜ್ಯಗಳ 13,383 ಫಲಾನುಭವಿಗಳು ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ.
  • ಕುಟುಂಬದಲ್ಲಿ ಒಬ್ಬರೇ ಇರುವ, 80 ವರ್ಷ ದಾಟಿದವರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ಒದಗಿಸುವ ಅನ್ನ-ಸುವಿಧಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. 8,500 ಪಡಿತರ ಚೀಟಿದಾರರು ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ.
by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular