ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಸದ್ಯ ರಾಜ್ಯ ಹಾಗೂ ರಾಷ್ಟ್ರದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಸದ್ಯ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಪ್ರಜ್ವಲ್ ಯಾವುದೇ ದೇಶದಲ್ಲಿದ್ದರೂ ಎಸ್ಕೇಪ್ ಆಗಲು ಬಿಡೊಲ್ಲ, ಆತ ಎಲ್ಲಿದ್ದರೂ ಹಿಡಿದು ತರ್ತಿವಿ ಎಂದು ಗುಡುಗಿದ್ದಾರೆ. ಬಾಗಲಕೋಟೆಯಲ್ಲಿ ಮಾದ್ಯಮಗಳೋಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ದುಬೈಗೆ ಪ್ರಯಾಣ ಬೆಳೆಸಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಗುಡುಗಿದ್ದಾರೆ.
ಮಾದ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪ್ರಜ್ವಲ್ ರೇವಣ್ಣ ಎಲ್ಲಿಗಾದರೂ ಎಸ್ಕೇಪ್ ಆಗಲಿ, ಯಾವುದೇ ದೇಶದಲ್ಲಿರಲಿ ಅಲ್ಲಿಂದ ಹಿಡಿದು ತರುತ್ತೇವೆ. ಕೇಂದ್ರ ಸರ್ಕಾರಕ್ಕೆ ಪಾಸ್ ಪೋರ್ಟ್ ರದ್ದು ಮಾಡುವ ಅಧಿಕಾರ ಇರೋದು, ಈಗಾಗಲೇ ನಾನು ಪ್ರಧಾನಿಗೆ ಪ್ರಜ್ವಲ್ ಪಾಸ್ ಪೋರ್ಟ್ ರದ್ದು ಮಾಡಿ ಅಂತಾ ಪತ್ರ ಕೂಡ ಬರೆದಿದ್ದೇನೆ. ಆದರೆ ಕೇಂದ್ರ ಸರ್ಕಾರ ಪ್ರಜ್ವಲ್ ನನ್ನು ರಕ್ಷಣೆ ಮಾಡುತ್ತಿದೆ. ಚುನಾವಣೆ ಸಮಯದಲ್ಲಿ ಪ್ರಜ್ವಲ್ ನನ್ನ ಮಗ ಇದ್ದ ಹಾಗೆ ಎಂದು ಹೇಳಿದ್ದರು. ಆದರೆ ಇದೀಗ ಅವರ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಎನ್ನುತ್ತಿದ್ದಾರೆ. ಅವರು ಎಲ್ಲಾ ಕುಕೃತ್ಯಗಳನ್ನು ಒಟ್ಟಿಗೆ ಮಾಡುತ್ತಾರೆ,. ಬಳಿಕ ನಾವಲ್ಲ ಎಂದು ನುಣುಚಿಕೊಳ್ಳುತ್ತಾರೆ ಎಂದು ಆಕ್ರೋಷ ಹೊರಹಾಕಿದ್ದಾರೆ.
ಇನ್ನೂ ಪ್ರಜ್ವಲ್ ರೇವಣ್ಣ ವಿರುದ್ದ ರೇಪ್ ಕೇಸ್ ನೀಡಿದಂತಹ ಸಂತ್ರಸ್ತ ಮಹಿಳೆಯನ್ನು ರೇವಣ್ಣ ಎಸ್ಕೇಪ್ ಮಾಡಿಸಿದ್ದಾರೆ ಎಂಬ ವಿಚಾರದ ಬಗ್ಗೆ ರಿಯಾಕ್ಟ್ ಆದಂತಹ ಸಿಎಂ, ಆ ಹೆಣ್ಣು ಮಗಳು ಎಲ್ಲಿ ಹೋಗಿದ್ದಾರೆ ಎಂದು ಪತ್ತೆ ಹಚ್ಚಲು ಸೂಚನೆ ಕೊಟ್ಟಿದ್ದೇನೆ. ಪ್ರಜ್ವಲ್ ವಿಡಿಯೋ ಬಗ್ಗೆ ತಿಳಿದಿದ್ದರೂ ಸಹ ಏಕೆ ಅಲಿಯನ್ಸ್ ಮಾಡಿಕೊಂಡರು. ಪ್ರಧಾನಿ ಮೋದಿ ನಾ ಖಾವುಂಗಾ ನಾ ಖಾನೆ ದೂಂಗಾ ಎಂದು ಹೇಳ್ತಾರೆ. ಆದರೆ ಇಂಕಮ್ ಟ್ಯಾಕ್, ಇಡಿ ರೈಡ್ ಆದವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಅಪರಾಧಿಗಳನ್ನೆಲ್ಲಾ ಸೇರಿಸಿಕೊಂಡಿದ್ದಾರೆ. ಅವರ ಪಕ್ಷಕ್ಕೆ ಸೇರಿದವರು ಮಾಡಬಾರದ ಕೆಲಸ ಮಾಡ್ತಾರೆ. ಅಧಿಕಾರ ಮಾಡುವುದಕ್ಕಾಗಿ ಮಾಡಬಾರದ ಕೆಲಸಗಳನ್ನೆಲ್ಲಾ ಮಾಡುತ್ತಿರುತ್ತಾರೆ ಎಂದು ಫೈರ್ ಆಗಿದ್ದಾರೆ.