Tuesday, November 5, 2024

Collage Function: ವಿದ್ಯಾರ್ಥಿಗಳು ಬದುಕಿನಲ್ಲಿ ನೈತಿಕತೆ, ಪ್ರಾಮಾಣಿಕತೆ ಅಳವಡಿಸಿಕೊಳ್ಳಿ : ಬ್ರಮ್ಮರಾಯಪ್ಪ

ವಿದ್ಯಾರ್ಥಿಗಳಲ್ಲಿ ಬದುಕಿನಲ್ಲಿ ನೈತಿಕತೆ, ಪ್ರಾಮಾಣಿಕತೆ ಅಳವಡಿಸಿ ಕೊಳ್ಳಬೇಕು ಎಂದು ನಿವೃತ್ತ ಪ್ರಾಂಶುಪಾಲರು ಹಾಗೂ ಜಿಲ್ಲಾ ಪ್ರಾಂಶುಪಾಲರ ಸಂಘದ ಮಾಜಿ ಅಧ್ಯಕ್ಷ ಬ್ರಮ್ಮರಾಯಪ್ಪ ತಿಳಿಸಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ (Collage Function) ಸಮಾರಂಭದಲ್ಲಿ ಮಾತನಾಡಿದ ಅವರು ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಶ್ರದ್ಧೆಯಿಂದ ಗುರಿ ಇಟ್ಟುಕೊಂಡು ವ್ಯಾಸಂಗ ಮಾಡಿದಾಗ ಮಾತ್ರ ನಿಮ್ಮ ಮುಂದಿನ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದರು.

ಕಾಲೇಜಿನ (Collage Function) ಪ್ರಾಂಶುಪಾಲರಾದ ಎ. ರವೀಂದ್ರ ಮಾತನಾಡಿ ಉಪನ್ಯಾಸಕರು ವಿದ್ಯಾರ್ಥಿಗಳ ಮುಂದಿನ ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ಶ್ರಮಿಸುತ್ತಿದ್ದಾರೆ ಹಾಗಾಗಿ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಶ್ರದ್ದೆ ತೋರಿಸುವಂತೆ ತಿಳಿಸಿದರು. ವಿದ್ಯಾರ್ಥಿ ಜೀವನದಲ್ಲಿ ದ್ವಿತೀಯ ಪಿಯುಸಿ ಅತಿ ಮುಖ್ಯವಾದ ಘಟ್ಟವಾಗಿದೆ ಈ ಹಂತದಲ್ಲಿ ಉತ್ತಮ ಸಾಧನೆಯನ್ನು ಮಾಡಿದಾಗ ಮಾತ್ರ ನಿಮ್ಮ ಮುಂದಿನ ಶೈಕ್ಷಣಿಕ ಅಭಿವೃದ್ಧಿಗೆ ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರದ್ಧೆಯಿಂದ ವ್ಯಾಸಂಗ ಮಾಡಿ ಪೋಷಕರಿಗೆ ಗೌರವ ತರುವಂತಾಗಬೇಕೆಂದರು.

College day festival in Gudibande 1

ಮಂಡಿಕಲ್ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗೋವಿಂದಪ್ಪ ಮಾತನಾಡಿ (Collage Function) ಹದಿ ಹರೆಯದ ಈ ವಯಸ್ಸಿನಲ್ಲಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಮೂಡುವ ಆಕರ್ಷಣೆಗಳು ತಾತ್ಕಾಲಿಕವಾಗಿದ್ದು, ಅವುಗಳ ಹಿಂದೆ ಹೋದವರು ಜೀವನದಲ್ಲಿ ನೊಂದಿರುವ ನಿದರ್ಶನಗಳು ಹೆಚ್ಚಾಗಿವೆ. ಕಾಲೇಜು ಸಂದರ್ಭದಲ್ಲಿ ಉತ್ತಮ ಸ್ನೇಹ ಗಳಿಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದು ಹೇಳಿದರು.

ಕಾರ್ಯಕ್ರಮ (Collage Function) ಆರಂಭಕ್ಕೂ ಮುನ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಕಾಲೇಜು ಹಾಗೂ ಇಲ್ಲಿನ ವ್ಯವಸ್ಥೆ ಬಗ್ಗೆ ಹಾಗೂ ನಮ್ಮ ಬಗ್ಗೆ ಅನುಮಾನ, ಆತಂಕ ಬೇಡ ಎಂದು ವಿಶ್ವಾಸ ತುಂಬಿದರು. ಸಂಕೋಚವಿಲ್ಲದೆ ನಮ್ಮ ಜತೆ ವ್ಯವಹರಿಸಿ ಎಂದು ಪರಸ್ವರ ಕೈ-ಕುಲುಕಿದರು. ಜಾನಪದ ಕಲಾವಿದರಾದ ಮುನಿರೆಡ್ಡಿ ಮತ್ತು ಕಲಾ ತಂಡ ಹತ್ತಾರು ಜಾನಪದ ಹಾಡುಗಳ ಮೂಲಕ ವಿದ್ಯಾರ್ಥಿಗಳಿಗೆ ಮೂಢನಂಬಿಕೆಗಳ ಜಾಗೃತಿ ಮೂಡಿಸಿದರು.

ತಳಿರು ತೋರಣ: ಸಮಾರಂಭಕ್ಕೆ (Collage Function) ಆಗಮಿಸುವ ಅತಿಥಿ ಗಣ್ಯರನ್ನು ಆಹ್ವಾನಿಸಲು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಅಂಗಳದಲ್ಲಿ ಬಣ್ಣ ಬಣ್ಣದ ರಂಗೋಲಿ ಚಿತ್ತಾರ ಬಿಡಿಸಿದ್ದರು. ಕಾಲೇಜು ಆವರಣವನ್ನು ತಳಿರು ತೋರಣಗಳಿಂದ ಅಲಂಕರಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಭಾವಗೀತೆ, ಚಲನಚಿತ್ರ ಗೀತೆ ಗಾಯನ, ನತ್ಯ, ಪ್ರದರ್ಶನ ಏರ್ಪ ಡಿಸಲಾಗಿತ್ತು. ಅಚ್ಚಕಟ್ಟಾಗಿ ನಡೆದ ಕಾರ್ಯಕ್ರಮ ಬಗ್ಗೆ ಹಾಗೂ ವಿದ್ಯಾರ್ಥಿಗಳ ಬಗ್ಗೆ ಅತಿಥಿಗಳು ಮೆಚ್ಚುಗೆಯ ಮಾತುಗಳನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಜಾನಪದ ಹಾಡು, ಸಿನಿಮಾ ಹಾಡುಗಳಿಗೆ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ನೃತ್ಯಗಳನ್ನು ಪ್ರದರ್ಶಿಸಿದರು.

ಪ್ರಥಮ ಮತ್ತು ದ್ವಿತೀಯ ಪಿಯು ನಲ್ಲಿ ಅತೀ ಹೆಚ್ಚು ಅಂಕಗಳಿಸಿ ಉತ್ತಿರ್ಣರಾದ ವಿದ್ಯಾರ್ಥಿಗಳಿಗೆ (Collage Function) ಪ್ರಶಸ್ತಿಗಳನ್ನು ನೀಡಿ ಸನ್ಮಾನ ಮಾಡಲಾಯಿತು. ಇತ್ತೀಚಿಗೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಜಯಶೀಲರಾದ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ ಹಾಗೂ ಮೆಡಲ್ ವಿತರಿಸಲಾಯಿತು.  ಈ (Collage Function) ಕಾರ್ಯಕ್ರಮದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಮಂಜುಭಾರ್ಗವಿ, ಬಿಜೆ ರಾಮಣ್ಣ, ನರೇಶ್, ಮೆಹಬೂಬ್ ಖಾನ್, ಡಿ.ಮೋಹನ್ ಕುಮಾರ್, ಕೃಷ್ಣಪ್ಪ, ರಾಮಾಂಜಿನಪ್ಪ, ಅನಂತ್ ಕುಮಾರ್, ಬೋಧಕೇತರ ಸಿಬ್ಬಂದಿ ಸೇರಿದಂತೆ ಕಾಲೇಜಿನ ಹಳೇ ವಿದ್ಯಾರ್ಥಿಗಳು, ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಜರಿದ್ದರು.

by Admin
by Adminhttp://ismkannadanews.com
Welcome to ISM News, if you want to contact us, then feel free to say anything about www.ismkannadanews.com. We'll appreciate your feedback.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe

Latest Articles

error: Content is protected !!