ಬೆಂಗಳೂರಿನ ರಿಯಲ್ ಎಸ್ಟೇಟ್ ಲೋಕದ ದೈತ್ಯ, (Confident Group Chairman) ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ. ರಾಯ್ (CJ Roy) ಅವರು ಇಂದು ಅನಿರೀಕ್ಷಿತವಾಗಿ ಬದುಕಿಗೆ ವಿದಾಯ ಹೇಳಿದ್ದಾರೆ. ಬೆಂಗಳೂರಿನ ಲ್ಯಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲೇ ಎದೆಗೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿರುವ ಸುದ್ದಿ ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ದೇಶ-ವಿದೇಶಗಳಲ್ಲಿ ಬೃಹತ್ ಉದ್ಯಮ ಸಾಮ್ರಾಜ್ಯ ಹೊಂದಿದ್ದ ವ್ಯಕ್ತಿಯೊಬ್ಬರು ಹೀಗೆ ಅಕಾಲಿಕವಾಗಿ ಸಾವನ್ನಪ್ಪಿರುವುದು ರಿಯಲ್ ಎಸ್ಟೇಟ್ ವಲಯಕ್ಕೆ ದೊಡ್ಡ ಆಘಾತ ನೀಡಿದೆ.

Confident Group Chairman – ವಿಚಾರಣೆ ನಡುವೆಯೇ ಸಂಭವಿಸಿದ ಘೋರ ದುರಂತ
ಕಳೆದ ಕೆಲವು ದಿನಗಳಿಂದ ಆದಾಯ ತೆರಿಗೆ (IT) ಇಲಾಖೆಯ ಅಧಿಕಾರಿಗಳು ಸಿ.ಜೆ. ರಾಯ್ ಅವರಿಗೆ ಸೇರಿದ ಕಚೇರಿಗಳು, ಫಾರ್ಮ್ ಹೌಸ್ ಹಾಗೂ ನಿವಾಸಗಳ ಮೇಲೆ ಸತತವಾಗಿ ದಾಳಿ ನಡೆಸುತ್ತಿದ್ದರು. ಇಂದು ಕೂಡ ಲ್ಯಾಂಗ್‌ಫೋರ್ಡ್ ಕಚೇರಿಯಲ್ಲಿ ಐಟಿ ಅಧಿಕಾರಿಗಳು ರಾಯ್ ಅವರನ್ನು ವಿಚಾರಣೆ ನಡೆಸುತ್ತಿದ್ದರು. ಸುಮಾರು ಒಂದು ಗಂಟೆಗಳ ಕಾಲ ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಿದ್ದ ರಾಯ್, ತಮ್ಮ ವ್ಯವಹಾರಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ದಾಖಲೆಗಳನ್ನು ಒದಗಿಸಿದ್ದರು. ಅಧಿಕಾರಿಗಳು ಇನ್ನೂ ಕೆಲವು ಪೂರಕ ದಾಖಲೆಗಳನ್ನು ಕೇಳಿದಾಗ, ಅವುಗಳನ್ನು ತರುವುದಾಗಿ ಹೇಳಿ ಪಕ್ಕದ ಕೋಣೆಗೆ ತೆರಳಿದವರು ಮತ್ತೆ ಹಿಂತಿರುಗಲೇ ಇಲ್ಲ. ತಮ್ಮ ಬಳಿಯಿದ್ದ ರಿವಾಲ್ವರ್‌ನಿಂದ ಎದೆಗೆ ಗುಂಡು ಹಾರಿಸಿಕೊಂಡು ಅವರು ಬದುಕು ಅಂತ್ಯಗೊಳಿಸಿದ್ದಾರೆ.
ಆಸ್ಪತ್ರೆಗೆ ಸಾಗಿಸುವ ಮುನ್ನವೇ ಕೊನೆಯುಸಿರು
ಗುಂಡಿನ ಶಬ್ದ ಕೇಳುತ್ತಿದ್ದಂತೆ ಕಚೇರಿ ಸಿಬ್ಬಂದಿ ಗಾಬರಿಯಿಂದ ಓಡಿ ಹೋಗಿ ನೋಡಿದಾಗ ರಾಯ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೂಡಲೇ ಅವರನ್ನು ಹೆಚ್.ಎಸ್.ಆರ್ ಲೇಔಟ್‌ನ ನಾರಾಯಣ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಲಾಯಿತಾದರೂ, ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿದುಬಂದಿದೆ. ಈ ಸುದ್ದಿ (Confident Group Chairman) ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. Read this also : ಭೋಪಾಲ್ ಏಮ್ಸ್ ಲಿಫ್ಟ್ ನಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಅಟ್ಯಾಕ್: ಬೆಚ್ಚಿಬೀಳಿಸುವ ವಿಡಿಯೋ ವೈರಲ್!

ಸಾವಿನ ಸುತ್ತ ಹತ್ತಾರು ಅನುಮಾನಗಳ ಹುತ್ತ
ಸಾವಿರಾರು ಕೋಟಿ ರೂಪಾಯಿ ಆಸ್ತಿ ಮತ್ತು ಅತಿದೊಡ್ಡ ಉದ್ಯಮ ಸಾಮ್ರಾಜ್ಯ ಹೊಂದಿದ್ದ ಸಿ.ಜೆ. ರಾಯ್ (Confident Group Chairman) ಅವರ ಈ ನಿರ್ಧಾರ ಈಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಐಟಿ ಅಧಿಕಾರಿಗಳ ನಿರಂತರ ಶೋಧ ಕಾರ್ಯ ಮತ್ತು ಪ್ರೊಹಿಬಿಟರಿ ಆರ್ಡರ್ ಅವರನ್ನು ಮಾನಸಿಕವಾಗಿ ಕುಗ್ಗಿಸಿತ್ತೇ ಎಂಬ ಚರ್ಚೆ ನಡೆಯುತ್ತಿದೆ. ಈ ಹಿಂದೆಯೂ ಅನೇಕ ವ್ಯವಹಾರಿಕ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದ್ದ ರಾಯ್, ಈ ಬಾರಿ ಮಾತ್ರ ಯಾಕೆ ಇಷ್ಟು ದೊಡ್ಡ ನಿರ್ಧಾರ ತೆಗೆದುಕೊಂಡರು ಎಂಬುದು ನಿಗೂಢವಾಗಿದೆ. ಈ ಘಟನೆಯು ಈ ಹಿಂದೆ ಕಾಫಿ ಡೇ ಮಾಲೀಕ ವಿ.ಜಿ. ಸಿದ್ಧಾರ್ಥ್ ಅವರ ಸಾವಿನ ಸಂದರ್ಭದಲ್ಲಿ ನಡೆದ ಚರ್ಚೆಗಳನ್ನು ಮತ್ತೆ ಮುನ್ನೆಲೆಗೆ ತಂದಿದೆ.
