ಶಾಸಕ ಸುಬ್ಬಾರೆಡ್ಡಿಯವರ ಹುಟ್ಟುಹಬ್ಬದ ಅಂಗವಾಗಿ ಹಣ್ಣು ಹಂಪಲು ವಿತರಣೆ

ಗುಡಿಬಂಡೆ: ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿಯವರ ಹುಟ್ಟುಹಬ್ಬದ ನಿಮಿತ್ತ ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಹಾಗೂ ತಾಲುಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

SN Subbareddy birthday celebration in GBD

ಈ ವೇಳೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಆದಿರೆಡ್ಡಿ ಮಾತನಾಡಿ, ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ಸಮಾಜ ಸೇವೆ ಮಾಡುತ್ತಾ, ಬಳಿಕ ಜನರ ಸೇವೆಗಾಗಿ ರಾಜಕೀಯಕ್ಕೆ ಬಂದ ಸುಬ್ಬಾರೆಡ್ಡಿಯವರು ಸರಳ ಹಾಗೂ ಸಜ್ಜನರು. ಮೂರು ಭಾರಿ ಸತತವಾಗಿ ಅವರು ಶಾಸಕರಾಗಿ ಹ್ಯಾಟ್ರಿಕ್ ಹೊಡೆದಿದ್ದಾರೆ. ಕ್ಷೇತ್ರಕ್ಕೆ ಅವರ ಸೇವೆ ಅಪಾರವಾದುದು. ಅವರ ಹುಟ್ಟುಹಬ್ಬದಂದು ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ ಸೇರಿದಂತೆ ಮತಷ್ಟು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಅವರು ಮತಷ್ಟು ರಾಜಕೀಯವಾಗಿ ಬೆಳೆದು ಕ್ಷೇತ್ರದ ಅಭಿವೃದ್ದಿಯಲ್ಲಿ ಭಾಗಿಯಾಗಲಿದ್ದಾರೆ ಎಂದರು.

SN Subbareddy birthday celebration in GBD 2

ಬಳಿಕ ಯೂತ್ ಕಾಂಗ್ರೇಸ್ ರಾಜ್ಯ ಕಾರ್ಯದರ್ಶಿ ರಮೇಶ್ ಮಾತನಾಡಿ, ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಸುಬ್ಬಾರೆಡ್ಡಿಯವರಿಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ನಮಗಿದೆ. ಶಾಸಕರಾಗಿಯೇ ಅವರು ಕ್ಷೇತ್ರದ ಅಭಿವೃದ್ದಿಗಾಗಿ ಶ್ರಮಿಸುತ್ತಿದ್ದಾರೆ. ಅಂತಹುದರಲ್ಲಿ ಸಚಿವರಾದರೇ ಕ್ಷೇತ್ರ ಮತಷ್ಟು ಅಭಿವೃದ್ದಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಯ ದೃಷ್ಟಿಯಿಂದ ಸುಬ್ಬಾರೆಡ್ಡಿಯವರಿಗೆ ಕಾಂಗ್ರೇಸ್ ಸರ್ಕಾರ ಸಚಿವ ಸ್ಥಾನ ನೀಡಲಿ ಎಂದು ಮನವಿ ಮಾಡಿದರು.

SN Subbareddy birthday celebration in GBD 3

ಈ ವೇಳೆ ಪ.ಪಂ. ಉಪಾಧ್ಯಕ್ಷ ವಿಕಾಸ್, ಬ್ಲಾಕ್ ಕಾಂಗ್ರೇಸ್ ಕಾರ್ಯಾಧ್ಯಕ್ಷ ಪ್ರಕಾಶ್, ಮುಖಂಡರಾದ ರಮೇಶ್, ಅಂಬರೀಶ್, ರಾಜೇಶ್, ನವೀನ್, ಬುಲೆಟ್ ಶ್ರೀನಿವಾಸ್, ಮಧು, ನಾಗರಾಜ್, ಮುನ್ನಾ, ಅಬ್ದುಲ್ ವಹಾಬ್ ಸೇರಿದಂತೆ ಕಾಂಗ್ರೇಸ್ ಕಾರ್ಯಕರ್ತರು, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರು ಸೇರಿದಂತೆ ಹಲವರು ಇದ್ದರು.

Leave a Comment

Your email address will not be published. Required fields are marked *

Scroll to Top