HomeStateಬಾಗೇಪಲ್ಲಿಯಲ್ಲಿ ಶಾಸಕ ಸುಬ್ಬಾರೆಡ್ಡಿ ರವರ 59ನೇ ಹುಟ್ಟುಹಬ್ಬ ಆಚರಣೆ....!

ಬಾಗೇಪಲ್ಲಿಯಲ್ಲಿ ಶಾಸಕ ಸುಬ್ಬಾರೆಡ್ಡಿ ರವರ 59ನೇ ಹುಟ್ಟುಹಬ್ಬ ಆಚರಣೆ….!

ಬಾಗೇಪಲ್ಲಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ರವರ ಜನ್ಮದಿನದ ಅಂಗವಾಗಿ ಶಾಸಕರ ಅಭಿಮಾನಿಗಳು ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿನ ಹೊರರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ, ಬಯಲಾಂಜನೇಯ ಸ್ವಾಮಿ ದೇವಾಲಯ ಹಾಗೂ ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಟಾಕಿಗಳನ್ನು ಸಿಡಿಸಿ ಸಹಿ ಹಂಚುವ ಮೂಲಕ ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ರವರ 59 ನೇ ಹುಟ್ಟು ಹಬ್ಬವನ್ನು ಆಚರಣೆ ಮಾಡಿದರು.

SN SUbbareddy birthday in BGP
ಶಾಸಕ ಎನ್.ಸುಬ್ಬಾರೆಡ್ಡಿ ರವರ ಹುಟ್ಟು ಹಬ್ಬದ ಅಂಗವಾಗಿ ಶಾಸಕರ ಬೆಂಬಲಿಗರು, ಅಭಿಮಾನಿಗಳು, ಪಕ್ಷದ ಮುಖಂಡರು ಸೇರಿದಂತೆ ಕಾರ್ಯಕರ್ತರು ಪಟ್ಟಣದ ಬಯಲಾಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಪಟ್ಟಣದ ಕೊಡಿಕೊಂಡ ರಸ್ತೆಯಲ್ಲಿರುವ ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದಲಿತ ಸಂಘರ್ಷ ಸಮಿತಿವತಿ ಸೇರಿದಂತೆ ವಿವಿಧ ಸಂಘಟನೆಗಳಿಂದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಹೂವಿನ ಹಾರ ಹಾಕಿ ಕೇಕ್ ಕತ್ತರಿಸುವ ಮೂಲಕ ಶಾಸಕರ ಜನ್ಮದಿನಾಚರಣೆ ಆಚರಿಸಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿನ ಒಳರೋಗಿಗಳಿಗೆ ಹಾಲು, ಬ್ರೇಡ್,ಹಣ್ಣು ಪಂಪಲು ವಿತರಿಸಿದರು ಅಲ್ಲದೆ ಡಾ.ಎಚ್.ಎನ್.ವೃತ್ತದಲ್ಲಿ ಅನ್ನಧಾನ ಸೇರಿದಂತೆ ವಿವಿಧ ಸಾಮಾಜಿಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎನ್.ನರೇಂದ್ರ, ಮುಖಂಡರಾದ ಪಿ.ಮಂಜುನಾಥರೆಡ್ಡಿ, ನೂರುಲ್ಲಾ, ಮಹಮ್ಮದ್ ಆಕ್ರಂ, ಪುರಸಭೆ ಉಪಾಧ್ಯಕ್ಷ ಎ.ಶ್ರೀನಿವಾಸ್, ಜಭೀವುಲ್ಲಾ ಸೇರಿದಂತೆ ಶಾಸಕರ ಅಭಿಮಾನಿಗಳು, ಬೆಂಬಲಿಗರು ಇದ್ದರು.

by Balajihttp://ismkannadanews.com
ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

John Doe on TieLabs White T-shirt