Monday, October 27, 2025
HomeStateCPIM Protest : ಸೆ.26 ರಂದು ನಡೆಯಲಿರುವ ಪ್ರತಿಭಟನೆ ಯಶಸ್ವಿಗೊಳಿಸಲು ಸಿಪಿಎಂ ಮನವಿ

CPIM Protest : ಸೆ.26 ರಂದು ನಡೆಯಲಿರುವ ಪ್ರತಿಭಟನೆ ಯಶಸ್ವಿಗೊಳಿಸಲು ಸಿಪಿಎಂ ಮನವಿ

CPIM Protest – ನಿವೇಶನ, ಇ-ಖಾತೆ ಸೇರಿದಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸ್ಥಳೀಯ ಸಮಸ್ಯೆಗಳ ಕುರಿತಂತೆ ಸೆ.26 ರಂದು ಗ್ರಾಪಂ ಮಟ್ಟದಲ್ಲಿ ಏಕಕಾಲದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಈ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಹಾಗೂ ಸಹಕಾರ ನೀಡಬೇಕೆಂದು ಸಿಪಿಎಂ ಪಕ್ಷದ ಮುಖಂಡರು ಮನವಿ ಮಾಡಿದರು.

CPIM leaders announcing protest for rural issues in Chikkaballapur on September 26

CPIM Protest – ಸೆ.26 ರಂದು ನಡೆಯಲಿರುವ ಪ್ರತಿಭಟನೆ

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಸಿಪಿಎಂ ಕಚೇರಿಯಲ್ಲಿ ಈ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೊಷ್ಟಿಯಲ್ಲಿ ಮಾತನಾಡಿದ ಸಿಪಿಎಂ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಜಯರಾಮರೆಡ್ಡಿ, ಗ್ರಾಮಗಳ ಉದ್ದಾರವೇ ದೇಶದ ಉದ್ದಾರ ಎಂದು ಎಲ್ಲರೂ ಹೇಳುತ್ತಾರೆ. ಆದರೆ ಇಂದು ಗ್ರಾಮೀಣ ಭಾಗಗಳ ಪರಿಸ್ಥಿತಿ ನೋಡಿದರೇ ದೇಶ ಯಾವ ರೀತಿ ಉದ್ದಾರವಾಗಿದೆ ಎಂಬುದು ತಿಳಿಯುತ್ತದೆ. ಇಂದಿಗೂ ಅನೇಕ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೇ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೂ ಸಹ ಇಂದಿನ ಸರ್ಕಾರಗಳು ಗ್ರಾಮೀಣ ಭಾಗಗಳನ್ನು ಉದ್ದಾರ ಮಾಡುವುದರತ್ತ ಗಮನ ಹರಿಸುತ್ತಿಲ್ಲ. ಈ ನಿಟ್ಟಿನಲ್ಲಿ ಸಿಪಿಎಂ ಪಕ್ಷ ಸೆ.26 ರಂದು ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಏಕಕಾಲಕ್ಕೆ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಈ ಪ್ರತಿಭಟನೆಗೆ ಸಾರ್ವಜನಿಕರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

CPIM Protest – ಗ್ರಾಮಗಳಲ್ಲಿ ಸ್ವಚ್ಚತೆ ಮರೀಚಿಕೆ

ಬಳಿಕ ಸಿಪಿಎಂ ಪಕ್ಷದ ತಾಲೂಕು ಸಮಿತಿ ಸದಸ್ಯ ಆದಿನಾರಾಯಣ ಮಾತನಾಡಿ, ಬಡ ಹಾಗೂ ಕೂಲಿಕಾರ್ಮಿಕರ ಪರಿಸ್ಥಿತಿ ಹದಗೆಟ್ಟು ಹೋಗಿದೆ, ಸರ್ಕಾರದ ನಿಯಮಗಳಿಂದ ಮನೆ ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ ಈ ಸ್ವತ್ತು ಮಾಡಲು ಅಧಿಕಾರಿಗಳು ಮುಂದಾಗುತ್ತಿಲ್ಲ, ಗ್ರಾಮೀಣ ಪ್ರದೇಶದಲ್ಲಿ ಚರಂಡಿಗಳನ್ನು ಸ್ವಚ್ಚ ಮಾಡುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಹೀಗಾಗಿ ಸ್ವಚ್ಛತೆ ಸಂಪೂರ್ಣ ಮರೀಚಿಕೆಯಾಗಿದೆ ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಲ್ಲಿದ್ದಾರೆ ಎಂದರು. Read this also : ಗುಡಿಬಂಡೆಯಲ್ಲಿ ಸಿಪಿಎಂ ಪ್ರತಿಭಟನೆ: ಬಡವರಿಗೆ ಭೂಮಿ ನೀಡುವಲ್ಲಿ ಸರ್ಕಾರ ವಿಫಲ, ಸಿದ್ದಗಂಗಪ್ಪ ಆರೋಪ…!

CPIM leaders announcing protest for rural issues in Chikkaballapur on September 26

CPIM Protest – ಗ್ರಾಪಂ ವ್ಯಾಪ್ತಿಯಲ್ಲಿ ಪ್ರತಿಭಟನೆ

ಇನ್ನೂ ಸ್ಥಳೀಯವಾಗಿ ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಒಂದು ದಿನದ ಮಟ್ಟಿಗೆ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ ನಂತರ ಸಾರ್ವಜನಿಕರ ಸಮಸ್ಯೆಗಳನ್ನು ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಿ, ನಂತರ ತಾಲೂಕು ಮಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.  ಈ ವೇಳೆ ಸಿಪಿಎಂ ಪಕ್ಷದ ಮುಖಂಡರಾದ ವೆಂಕಟರಾಜು, ಆದಿನಾರಾಯಣಸ್ವಾಮಿ. ರಮಣ .ದೇವರಾಜ್. ಸೋಮಶೇಖರ ರೆಡ್ಡಿ ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿಗಳಾದ ಉಪ್ಪಾರಹಳ್ಳಿ ಶ್ರೀನಿವಾಸ್ ಸೇರಿದಂತೆ ಹಲವರು ಇದ್ದರು.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular