CPIM Protest – ಸರ್ಕಾರದ ವಿವಿಧ ಯೋಜನೆಗಳಿಗೆ ಸೇರಿದ ಆಹಾರ ಪದಾರ್ಥಗಳನ್ನು ದಾಸ್ತಾನು ಮಾಡಿದ್ದ ಆರೋಪಿಗಳ ವಿರುದ್ದ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ (CPIM Protest) ಸಿಪಿಐ(ಎಂ) ಕಾರ್ಯಕರ್ತರು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಕಾರರನನ್ನು ಉದ್ದೇಶಿಸಿ ಸಿಪಿಐ(ಎಂ) (CPIM Protest) ಮುಖಂಡರು ಮಾತನಾಡಿ, ಜೂ.19ರಂದು ಜಿ.ಪಂ ಸಿಇಒ, ತಹಸೀಲ್ದಾರ್ ಮನಿಷಾ ಎನ್. ಸೇರಿದಂತೆ ವಿವಿಧ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ತಾಲೂಕಿನ ಪೂಲವಾರಪಲ್ಲಿ ಗ್ರಾಮದಲ್ಲಿ ಸರ್ಕಾರದ ವಿವಿಧ ಯೋಜನೆಗಳಿಗೆ ಸೇರಿದ ಲಕ್ಷಾಂತರ ಆಹಾರ ಪದಾರ್ಥಗಳನ್ನು ಆಕ್ರಮವಾಗಿ ದಾಸ್ತಾನು ಮಾಡಿದ್ದ ಪಡಿತರ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿತ್ತು. (CPIM Protest) ಆದರೆ ಈ ಆಕ್ರಮದಲ್ಲಿ ತೊಡಗಿಸಿಕೊಂಡಿದ್ದ ವಿರುದ್ದ ಕ್ರಮ ಜರಿಗಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರಕರಣದಲ್ಲಿ (CPIM Protest) ತೊಡಗಿಸಿಕೊಂಡಿರುವ ಕೆಲವರ ವಿರುದ್ದ ದಾಖಲಿಸಲಾಗಿದೆ ಆದರೆ ಬಡವರವರಿಗೆ ಸೇರಬೇಕಾಗಿದ್ದ ಆಕ್ರಮ ಪಡಿತರ ಪದಾರ್ಥಗಳನ್ನು ದಾಸ್ತಾನು ಮಾಡಿ ಕಾಳಸಂತೆಯಲ್ಲಿ ಮಾಡುವ ದಂಧೆಯಲ್ಲಿ ರಾಜಕೀಯ ಪ್ರಭಾವಿಗಳು ಭಾಗಿಯಾಗಿರುವ ಹಿನ್ನಲೆಯಲ್ಲಿ ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮಕ್ಕೆ ಮುಂದಾಗಬೇಕು, ಈ ಪ್ರಕರಣದಲ್ಲಿ ತೊಡಗಿಸಿಕೊಂಡಿರುವವರನ್ನು ಬಂಧಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತೆ ಎಂದು (CPIM Protest) ಎಚ್ಚರಿಕೆ ನೀಡಿದರು.
ಅಕ್ರಮವಾಗಿ ಪಡಿತರ ಆಹಾರ ಪದಾರ್ಥಗಳನ್ನು ದಾಸ್ತಾನು ಮಾಡಿರುವ ಆರೋಪಿಗಳ ಬಗ್ಗೆ ಸ್ಪಷ್ಟವಾದಂತಹ ಮಾಹಿತಿ ಇದ್ದರೂ ರಾಜಕಾರಣಿಗಳ ಒತ್ತಡಕ್ಕೆ ಮಣಿದು ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಳಂಭಧೋರಣೆ ಅನುಸರಿಸುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡುವಂತಿದೆ. ಈ ಪ್ರಕರಣಕ್ಕೆ ಸಂಬಂಧಿಸದಂತೆ ಸಮರ್ಪಕವಾಗಿ ತನಿಖೆ ಸಹ ನಡೆಯುತ್ತಿಲ್ಲ ಇದರಿಂದ ಗೊಂದಲ ಉಂಟಾಗುತ್ತಿದೆ. ಇದರಲ್ಲಿ ಹಲವು ಇಲಾಖೆಗಳ ಅಧಿಕಾರಿಗಳು ಸಹ ಶಾಮೀಲಾಗಿರುವ ಅನುಮಾನ ಕಾಡುತ್ತಿದೆ ಈ ಪ್ರಕರಣದಲ್ಲಿ ಯಾರೇ ಇದ್ದರೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಬಡವರಿಗೆ ನ್ಯಾಯ ಒದಗಿಸುವಂತೆ (CPIM Protest) ಒತ್ತಾಯಿಸಿದರು.
ನಂತರ ಪತ್ರಿಭಟನಕಾರರು (CPIM Protest) ತಹಸೀಲ್ದಾರ್ ರವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿಪಿಐ(ಎಂ) ಮುಖಂಡರಾದ ಡಾ.ಅನಿಲ್ ಕುಮಾರ್, ಚೆನ್ನರಾಯಪ್ಪ, ಮುನಿವೆಂಕಟಪ್ಪ, ಅಶ್ವಥಪ್ಪ, ರಘುರಾಮರೆಡ್ಡಿ, ರಾಮಲಿಂಗಪ್ಪ, ನಾಗರಾಜ್, ಮತ್ತಿತರರು ಇದ್ದರು.