Crime : ಚಿಕ್ಕಬಳ್ಳಾಪುರದಲ್ಲಿ ಆಘಾತಕಾರಿ ಘಟನೆ: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಮಸೀದಿ ಕೊಠಡಿಯಲ್ಲಿ ಘಟನೆ…!

Crime – ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. 6 ವರ್ಷದ ಪುಟ್ಟ ಬಾಲಕಿಯೊಬ್ಬಳ ಮೇಲೆ 55 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಪ್ರಸಿದ್ಧ ಶಮ್ಸ್ ಮಸೀದಿಯ ಕೊಠಡಿಯೊಂದರಲ್ಲಿ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

Crime - 55-year-old Mahfooz arrested for assaulting a child in Chikkaballapur masjid

 

Crime – ಚಾಕೊಲೇಟ್ ಆಮಿಷವೊಡ್ಡಿ ಕೃತ್ಯ: ಮೌಲ್ವಿಯ ತಂದೆ ಬಂಧನ

ದೂರಿನ ಪ್ರಕಾರ, ಮಸೀದಿಯೊಂದರ ಮೌಲ್ವಿಯ ತಂದೆಯಾದ ಮಹಪ್ಯೂಸ್ ಎಂಬಾತ, ಬಾಲಕಿಗೆ ಚಾಕೊಲೇಟ್ ಕೊಡಿಸುವ ಆಮಿಷವೊಡ್ಡಿ ಈ ಹೇಯ ಕೃತ್ಯ ಎಸಗಿದ್ದಾನೆ. ಬಾಲಕಿಯ ತಾಯಿ ನೀಡಿದ ದೂರಿನನ್ವಯ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದು, ಆರೋಪಿ ಮಹಪ್ಯೂಸ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆರೋಪಿ ಮಹಪ್ಯೂಸ್ ಮೂಲತಃ ಉತ್ತರ ಪ್ರದೇಶದವನಾಗಿದ್ದು, ಸುಮಾರು 20 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರಕ್ಕೆ ಬಂದು ಬೀದಿ ಬದಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಮಸೀದಿ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಿದ್ದಾನೆ.

Minor Assualt in Chikkaballapura 2

Crime – ಸ್ಥಳೀಯರಿಂದ ಮೌಲ್ವಿಗೆ ತರಾಟೆ

ಈ ಘಟನೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆರೋಪಿ ಮಹಪ್ಯೂಸ್‌ನ ಮಗ ಬೇರೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಕೆಲಸ ಮಾಡುತ್ತಿದ್ದಾನೆ. ಆತನ ಆಶ್ರಯಕ್ಕೆಂದು ಜಮಾತ್‌ನಿಂದ ಮಸೀದಿಯ ಕೊಠಡಿಯನ್ನು ನೀಡಲಾಗಿತ್ತು. ಆದರೆ, ಈ ಕೊಠಡಿಯನ್ನು ದುರುಪಯೋಗಪಡಿಸಿಕೊಂಡು ಈ ಘಟನೆ ನಡೆದಿರುವುದು ಗಂಭೀರ ಆರೋಪಕ್ಕೆ ಕಾರಣವಾಗಿದೆ.

Read this also : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, ಬಾಲಕಿಯ ಕೈಯಲ್ಲಿದ್ದ ಓಂ ಟ್ಯಾಟೂ ಮೇಲೆ ಆಸಿಡ್ ಹಾಕಿದ ಕಾಮುಕರು…!

ಘಟನೆ ಬೆಳಕಿಗೆ ಬರುತ್ತಿದ್ದಂತೆ, ಮಸೀದಿಯ ಮೌಲ್ವಿ ಸುಹೇಬ್‌ನನ್ನು ಸ್ಥಳೀಯರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಮೌಲ್ವಿಯ ಆಶ್ರಯಕ್ಕೆಂದು ಪಡೆದ ಕೊಠಡಿಯನ್ನು ತಂದೆಗೆ ಯಾಕೆ ನೀಡಲಾಯಿತು ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು, ಸಂತ್ರಸ್ತ ಬಾಲಕಿಯ ತಾಯಿ ಆಕ್ರೋಶಗೊಂಡು ಆರೋಪಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ ಎನ್ನಲಾಗಿದೆ. ಈ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ಮಾತ್ರವಲ್ಲದೆ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Leave a Comment

Your email address will not be published. Required fields are marked *

Scroll to Top