Crime – ಕಳೆದೆರಡು ದಿನಗಳ ಹಿಂದೆಯಷ್ಟೆ ವಿದ್ಯುತ್ ಕೆಲಸಕ್ಕೆ ಹೋದ ರವಿ ಎಂಬಾತ ಕೆಲಸ ಮಾಡುವ ವೇಳೆ ಸಾವನ್ನಪ್ಪಿದ್ದು, ಈ ವಿಚಾರವನ್ನು ಯಾರಿಗೂ ತಿಳಿಸಿದಂತೆ ಲೈನ್ ಮೆನ್ ಚಂದ್ರಶೇಖರ್ ಬೀಚಗಾನಹಳ್ಳಿ ಸಮೀಪದ ಬಂದಾರ್ಲಹಳ್ಳಿ ಕೆರೆಯಲ್ಲಿ ಹೂತು ಪರಾರಿಯಾಗಿದ್ದ. ಇದೀಗ ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಮೃತ ರವಿ ಶವವನ್ನು ಹೊರತೆಗೆಯಲಾಗಿದೆ.

Crime – ಘಟನೆ ನಡೆದಿದ್ದು ಹೇಗೆ?
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಮೇಡಿಮಾಕಲಹಳ್ಳಿ ಕ್ರಾಸ್ ಬಳಿಯ ಕೋಳಿಪಾರಂ ಬಳಿ ಭಾನುವಾರ ಮತ್ತು ಸೋಮವಾರ ವಿದ್ಯುತ್ ಕಾಮಗಾರಿ ಮಾಡಲು ಬೀಚಗಾನಹಳ್ಳಿ ಗ್ರಾಮದ ಲೈನ್ ಮೆನ್ ಚಂದ್ರಕುಮಾರ್ ಎಂಬಾತ ರವಿ ಎಂಬ ವಿದ್ಯುತ್ ಕಾರ್ಮಿಕನನ್ನು ಕರೆದುಕೊಂಡು ಹೋಗಿದ್ದ. ಈ ಸಮಯದಲ್ಲಿ ರವಿ ವಿದ್ಯುತ್ ತಗುಲಿ ಕಂಬದಿಂದ ಬಿದ್ದು ಮೃತಪಟ್ಟಿದ್ದ ಎನ್ನಲಾಗಿದೆ. ಬಳಿಕ ಮೃತ ರವಿ ಶವವನ್ನು ಬಂದಾರ್ಲಹಳ್ಳಿ ಕೆರೆಯಲ್ಲಿ ಹೂತುಹಾಕಿ ಏನು ತಿಳಿಯದಂತೆ ಪರಾರಿಯಾಗಿದ್ದ. ಇತ್ತ ಮೃತ ರವಿ ಸಂಬಂಧಿಕರು ಕಾಣೆಯಾದ ಬಗ್ಗೆ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ತನಿಖೆ ನಡೆಸಿದ ಪೊಲೀಸರು ಲೈನ್ ಮೆನ್ ಚಂದ್ರಕುಮಾರ್ ಮೇಲೆ ಅನುಮಾನಗೊಂಡು ಪರಿಶೀಲನೆ ಮಾಡಿದಾಗ, ಆತ ಮೊಬೈಲ್ ಮನೆಯಲ್ಲಿ ಬಿಟ್ಟು ಪರಾರಿಯಾಗಿದ್ದ. ಆಂಧ್ರಪ್ರದೇಶದಲ್ಲಿದ್ದ ಚಂದ್ರಶೇಖರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಸಲೀ ಸತ್ಯವನ್ನು ಆತ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

Crime – ಪೋಲಿಸರ ಭೇಟಿ ಪರಿಶೀಲನೆ
ಇನ್ನೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕುಶಾಲ್ ಚೌಕ್ಸೆ, ಡಿವೈಎಸ್‌ಪಿ ಶಿವಕುಮಾರ್, ತಹಸೀಲ್ದಾರ್ ಸಿಗ್ಬತ್ ಉಲ್ಲಾ, ಗುಡಿಬಂಡೆ ಸಬ್ ಇನ್ಸ್ ಪೆಕ್ಟರ್ ಗಣೇಶ್ ಸೇರಿದಂತೆ ಸ್ಥಳಕ್ಕೆ ವಿಧಿವಿಜ್ಞಾನ ತಂತ್ರಜ್ಞರು, ಜಿಲ್ಲಾ ಸರ್ಜನ್ ಸೇರಿದಂತೆ ವೈದ್ಯಕೀಯ ತಂಡ ಹಾಗೂ ಸಂಬಂಧಿಕರ ಸಮ್ಮುಖದಲ್ಲಿ ಶವವನ್ನು ಹೊರತೆಗೆಯಲಾಯಿತು. ಇನ್ನೂ ರವಿ ಶವವನ್ನು ಹೊರತೆಯುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. Read this also : ಕೆರೆಯಲ್ಲಿ ಪತ್ತೆಯಾದ ವಿದ್ಯುತ್ ಕಾರ್ಮಿಕನ ಶವ, ಗುಡಿಬಂಡೆಯಲ್ಲಿ ನಡೆದ ಘಟನೆ…!
ಈ ಸಾವಿನ ಕುರಿತು ಮೃತನ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಒಬ್ಬನಿಂದ ಈ ಕೃತ್ಯ ಮಾಡಲು ಸಾಧ್ಯವಿಲ್ಲ. ಈ ಕುರಿತು ಪೊಲೀಸರು ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ತಕ್ಕ ಶಿಕ್ಷೆ ಕೊಡಿಸಬೇಕು ಜೊತೆಗೆ ನಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.
