Crime – ಮಂಡ್ಯ ಜಿಲ್ಲೆಯಲ್ಲಿ (Mandya News) ಒಂದು ಆಘಾತಕಾರಿ ಘಟನೆ ಸಂಭವಿಸಿದೆ. ಯುವತಿಯೊಬ್ಬಳು ಚಲಿಸುತ್ತಿದ್ದ ರೈಲಿಗೆ ತಲೆಯಿಟ್ಟು ಆತ್ಮಹತ್ಯೆ (Suicide Case in Mandya) ಮಾಡಿಕೊಂಡಿದ್ದಾಳೆ. ಈ ದುರ್ಘಟನೆಯಲ್ಲಿ ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಸಶಸ್ತ್ರ ಮೀಸಲು ಪಡೆಯ ಎ.ಎಸ್.ಐ (Assistant Sub-Inspector) ಅನ್ಸರ್ ಪಾಷಾ ಅವರ ಪುತ್ರಿ ಸುಹಾನಾ (19) ಎಂದು ಗುರುತಿಸಲಾಗಿದೆ.
Crime – ಕಾಲೇಜು ಮುಗಿಸಿಕೊಂಡು ಬಂದು ಆತ್ಮಹತ್ಯೆ?
ಮೃತ ಸುಹಾನಾ ಮೈಸೂರಿನಲ್ಲಿ (Mysuru College) ಪ್ರಥಮ ವರ್ಷದ ಬಿಎ (BA First Year Student) ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಮನೆಗೆ ವಾಪಸ್ ಬಂದಿದ್ದ ಆಕೆ, ತನ್ನ ಜೀವನವನ್ನು ಈ ರೀತಿಯಲ್ಲಿ ಅಂತ್ಯಗೊಳಿಸಲು ನಿರ್ಧರಿಸಿದ್ದಾಳೆ. ಬಂದೀಗೌಡ ಬಡಾವಣೆ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಯಿಟ್ಟು ಆತ್ಮಹತ್ಯೆಗೆ (Self Harm Incident) ಶರಣಾಗಿದ್ದಾಳೆ ಎಂದು ವರದಿಯಾಗಿದೆ. ಈ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲ. ಮಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
ಇನ್ನೂ ಮಂಡ್ಯ ಪೊಲೀಸರು (Mandya Police) ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಹಾನಾ ಅವರ ಕುಟುಂಬದ ಸದಸ್ಯರು, ಸಹಪಾಠಿಗಳು ಹಾಗೂ ಸ್ನೇಹಿತರಿಂದ ಮಾಹಿತಿ ಸಂಗ್ರಹಿಸುವ ಸಂಗ್ರಹಿಸುತ್ತಿದ್ದಾರೆ ಎನ್ನಲಾಗಿದೆ. ಈ ಘಟನೆಯು ಮಂಡ್ಯದಲ್ಲಿ (Mandya Crime News) ಚರ್ಚೆಗೆ ಕಾರಣವಾಗಿದ್ದು, ಯುವ ಜನಾಂಗದ ಮಾನಸಿಕ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ ಎನ್ನಲಾಗುತ್ತಿದೆ.

Crime – ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ (Bengaluru News) ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಕಾಲೇಜಿನ ನಾಲ್ಕನೇ ಮಹಡಿಯಿಂದ (Fourth Floor Incident) ಜಿಗಿದು ಆತ್ಮಹತ್ಯೆ (Student Suicide Case) ಮಾಡಿಕೊಂಡಿದ್ದಾಳೆ. ಈ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Soladevanahalli Police Station) ಕಳೆದ ಮಾರ್ಚ್ 21, 2025 ರಂದು ನಡೆದಿದೆ ಎನ್ನಲಾಗಿದೆ.
Crime – ಕಾಲೇಜಿನ ಕಾಲೇಜಿನ 4ನೇ ಮಹಡಿಯಿಂದ ಹಾರಿ ಆತ್ಮಹತ್ಯೆ
ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಕೇರಳ ರಾಜ್ಯದ ಕಲ್ಲಿಕೋಟೆ ಜಿಲ್ಲೆಯ (Kerala) ಲಕ್ಷ್ಮೀ ಮಿತ್ರಾ (21) ಎಂದು ಗುರುತಿಸಲಾಗಿದೆ. ಲಕ್ಷ್ಮೀ ಬೆಂಗಳೂರಿನ ಹೆಸರಘಟ್ಟ ರಸ್ತೆಯ (Hesaraghatta Road) ಒಂದು ಪ್ರತಿಷ್ಟಿತ ಕಾಲೇಜಿನಲ್ಲಿ ಬಿಸಿಎ 6ನೇ ಸೆಮಿಸ್ಟರ್ (BCA 6th Semester) ವ್ಯಾಸಂಗ ಮಾಡುತ್ತಿದ್ದಳು. ಕಾಲೇಜಿನ ನಾಲ್ಕನೇ ಮಹಡಿಯಿಂದ ಕೆಳಗೆ ಹಾರಿದ ಆಕೆ ಗಂಭೀರವಾಗಿ ಗಾಯಗೊಂಡಿದ್ದಳು. ತಕ್ಷಣ ಸ್ಥಳೀಯ ಆಸ್ಪತ್ರೆಗೆ (Local Hospital Bengaluru) ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
Crime – ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ
ಈ ಆತ್ಮಹತ್ಯೆಗೆ (Self Harm Bengaluru) ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಸೋಲದೇವನಹಳ್ಳಿ ಪೊಲೀಸರು (Bengaluru Police Investigation) ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಲಕ್ಷ್ಮೀಯ ಸಹಪಾಠಿಗಳು, ಕಾಲೇಜು ಸಿಬ್ಬಂದಿ ಹಾಗೂ ಕುಟುಂಬದವರನ್ನು ವಿಚಾರಿಸುವ ಮೂಲಕ ಆತ್ಮಹತ್ಯೆಗೆ ಕಾರಣ ಏನಿರಬಹುದು ಎಂಬ ಸಂಗತಿಗಳನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.