HomeStateCrime News - ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಬರ್ಬರ ಹತ್ಯೆ….!

Crime News – ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಬರ್ಬರ ಹತ್ಯೆ….!

Crime News –  ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆ.28ರ ಸಂಜೆ ಸಮಯದಲ್ಲಿ ವ್ಯಕ್ತಿಯೊಬ್ಬರ ಬರ್ಬರ ಕೊಲೆ ನಡೆದಿದೆ. ಅನೈತಿಕ ಸಂಭಂಧ ಶಂಕೆಯ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ. (Crime News) ಕೊಲೆಯಾದ ವ್ಯಕ್ತಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮೃತ ದುರ್ದೈವಿಯನ್ನು ರಾಮಕೃಷ್ಣ (45) ಎಂದು ಗುರ್ತಿಸಲಾಗಿದ್ದು, (Crime News)ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ನಿವಾಸಿ ರಮೇಶ್ ಎಂಬಾತನೆ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. (Crime News)ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ಒಂದರಲ್ಲಿ ರಾಮಕೃಷ್ಣ ಎಂಬಾತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಬಿಎಂಟಿಸಿ ಬಸ್ ನಲ್ಲಿ ವಿಮಾನ ನಿಲ್ದಾಣಕ್ಕೆ ಬಂದ (Crime News)ಕೊಲೆ ಮಾಡಿದ ಆರೋಪಿ ರಮೇಶ್, ವಿಮಾನ ನಿಲ್ದಾಣದಲ್ಲಿ ಟ್ರಾಲಿ ಎಳೆಯುವ ಕೆಲಸ ಮಾಡುತ್ತಿದ್ದ ರಾಮಕೃಷ್ಣನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. (Crime News)ನನ್ನ ಸಂಸಾರ ಹಾಳು ಮಾಡಿದ್ದೀಯಾ ಎಂದು ಪೋನ್ ನಲ್ಲಿ ಆರೋಪಿ ಜಗಳ ಮಾಡಿದ್ದನಂತೆ. ಅದರ ಬೆನ್ನಲ್ಲೇ ಕೊಲೆ ಮಾಡಿದ್ದಾನೆ. (Crime News)ಇನ್ನೂ ತನ್ನ ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಆರೋಪದ ಮೇರೆಗೆ ಈ ಕೊಲೆ ನಡೆದಿದೆ ಎನ್ನಲಾಗಿದೆ.(Crime News) ಇನ್ನೂ ಸ್ಥಳಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular