Crime News – ಆಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಗಳಿಂದ ಸುಮಾರು (Crime News) 1.35 ಲಕ್ಷ ರೂ.ಗಳ ಬೆಲೆಬಾಳುವ 3.5 ಕೆಜಿ ಗಾಂಜಾ ವಶಕ್ಕೆ ಪಡೆದಿರುವ ಘಟನೆ ವರದಿಯಾಗಿದೆ ಎಂದು ತಿಳಿದುಬಂದಿದೆ.
ಬಾಗೇಪಲ್ಲಿ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಗಾಂಜಾ ಮಾರಾಟ (Crime News) ಮಾಡುತ್ತಿರುವ ಖಚಿತ ಮಾಹಿತಿಯ ಮೇರೆಗೆ ಬಾಗೇಪಲ್ಲಿ ಪೊಲೀಸ್ ಇನ್ಸ್‍ಪೆಕ್ಟರ್ ಪ್ರಶಾಂತ್ ವರ್ಣಿ(Crime News) ಬಾಗೇಪಲ್ಲಿ ಪಟ್ಟಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಪಟ್ಟಣದ ಸೈಯದ್ ನಾಸೀರ್ (ಕಾಲ) ಎಂಬುವವನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ ಸಂದರ್ಭದಲ್ಲಿ ಆಂಧ್ರಪ್ರದೇಶದ ಅರಕು ಪ್ರದೇಶದಿಂದ ಗಾಂಜಾ ತಂದು ವಿದ್ಯಾರ್ಥಿಗಳು ಸೇರಿದಂತೆ ಯುವಜನತೆಗೆ (Crime News) ಮಾರಾಟ ಮಾಡುತ್ತಿದ್ದರು ಎಂಬುದಾಗಿ ತಿಳಿದುಬಂದಿದೆ.
ಈ ಸಂಬಂಧ (Crime News) 6 ಜನರ ವಿರುದ್ದ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪಟ್ಟಣದ ಸೈಯದ್ ನಾಸೀರ್(ಕಾಲ), ಶ್ರೀನಾಥ್ ಅಲಿಯಾಸ್ ಬಿರಿಯಾನಿ, ನಯಾಜ್(ಶಾನು) ಎಂಬ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದು (Crime News) ಉಳಿದ 3 ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಕಾರ್ಯಾಚರಣೆಯಲ್ಲಿ (Crime News) ಅಪರಾಧ ವಿಭಾಗದ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಮುನಿರತ್ನಂ, ಪೊಲೀಸ್ ಪೇದೆಗಳಾದ ಮೋಹನ್, ಧನಂಜಯ, ಸಾಗರ್, ಅನಿಲ್, ರಾಜಪ್ಪ ಮತ್ತಿತರರು ಇದ್ದರು.