Crime News – ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳು, ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾರೆ. ರಾಮಭಾಯಿ ಹಾಸ್ಟೆಲ್‌ನಲ್ಲಿ ಘಟನೆ ನಡೆದಿದ್ದು ಮೃತ ವಿದ್ಯಾರ್ಥಿನಿಯನ್ನು 22 ವರ್ಷದ ಹೆಚ್.ಎನ್.ಪಾವನಾ ಎಂದು ಗುರುತಿಸಲಾಗಿದೆ. ಈ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮೃತ ದುರ್ದೈವಿ ಬೆಂಗಳೂರು ವಿಶ್ವವಿದ್ಯಾಲಯ ಹಾಸ್ಟೆಲ್ ನಲ್ಲಿದ್ದುಕೊಂಡು ಕನ್ನಡ ವಿಭಾಗದ ದ್ವಿತೀಯ ವರ್ಷದ ಎಂ.ಎ. ಓದುತ್ತಿದ್ದಳು. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದ ನಿವಾಸಿಯಾದ ಹೆಚ್.ಎನ್.ಪಾವನ ನಾನು ಗೆಳಯನೊಬ್ಬನನ್ನು ನಂಬಿದ್ದೆ ಆತ ಮೋಸ ಮಾಡಿದ್ದಾನೆ, ಕ್ಷಮಿಸಿ ಅಪ್ಪ, ಅಮ್ಮ ಐ ಲವ್ ಯೂ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ. ಇನ್ನೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತ ವಿದ್ಯಾರ್ಥಿನಿ ಪಾವನಳ ಶವ ಇರಿಸಲಾಗಿದ್ದು, ಪೋಷಕರು ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.
ಸೋಮವಾರ ಮಧ್ಯಾಹ್ನ 12 ರ ಸುಮಾರಿಗೆ ನೇಣಿಗೆ ಶರಣಾಗಿರುವ ಸಾಧ್ಯತೆ ಇದೆ. ಹಾಸ್ಟೆಲ್‌ನಲ್ಲಿದ್ದ ಕೆಲ ಯುವತಿಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾಲೇಜಿನಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಕಾರ್ಯಕ್ರಮಕ್ಕೆ ತೆರಳಿದ್ದ ಪಾವನ ಅರ್ಧಕ್ಕೆ ಬಿಟ್ಟು ಬಂದು ಹಾಸ್ಟೆಲ್‌ನಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ. ಹಾಸ್ಟೆಲ್‌ನಲ್ಲಿದ್ದ ಕೆಲ ಯುವತಿಯರು ಗಮನಿಸಿ ಮಾಹಿತಿ ನೀಡಿದ ಬಳಿಕ ಘಟನೆ ಗೊತ್ತಾಗಿದೆ. ಇನ್ನೂ ಈ ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎನ್ನಲಾಗಿದೆ.