Crime News: ಪ್ರತಿಯೊಂದು ಮಗುವಿಗೆ ಅಪ್ಪ-ಅಮ್ಮ ಅಂದರೇ ಎಲ್ಲವೂ ಎನ್ನಬಹುದು, ಅವರೇ ಪ್ರಪಂಚ, ಅವರೇ ರಕ್ಷಣೆಯಾಗಿರುತ್ತಾರೆ. ಆದರೆ ಕೆಲವೊಂದು ಘಟನೆಗಳು ಎಲ್ಲದಕ್ಕೂ ವಿರೋಧ ಎಂಬಂತೆ ಇರುತ್ತದೆ. ಇದೀಗ ಹಣ ಸಂಪಾದಿಸಲು ಅಪ್ಪ-ಅಮ್ಮ ಮಾಡಬಾರಾದ ಕೆಲಸ ಮಾಡಿದ್ದಾರೆ. ತಮ್ಮ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದು, ಅಶ್ಲೀಲ ಪೊಟೋ ಹಾಗೂ ವಿಡಿಯೋಗಳನ್ನು ಚಿತ್ರೀಕರಿಸಿ ಅವುಗಳನ್ನು ಇಂಟರ್ ನೆಟ್ ನಲ್ಲಿ ಅಪ್ಲೋಡ್ ಮಾಡುತ್ತಿದ್ದರು ಎನ್ನಲಾಗಿದೆ.

ಅಪ್ಪ-ಅಮ್ಮ ತಮ್ಮ ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ಘಟನೆ ಚೆನೈನಲ್ಲಿ ನಡೆದಿದೆ ಎನ್ನಲಾಗಿದೆ. ಈ ಆರೋಪದ ಮೇರೆಗೆ ಚೆನೈನಲ್ಲಿ ದಂಪತಿಯನ್ನು ಬಂಧನ ಮಾಡಲಾಗಿದೆ. ಮಕ್ಕಳ ಕಲ್ಯಾಣ ಸಮಿತಿ ದೂರು ದಾಖಲಿಸಿದ ಬಳಿಕ ಪೊಲೀಸ್ ತಂಠ ದಂಪತಿಯನ್ನು ಪತ್ತೆ ಹಚ್ಚಿದೆ. ಆರೋಪಿಗಳ ಪೈಕಿ ಒಬ್ಬರ ಮೊಬೈಲ್ ಪೋನ್ ವಶಪಡಿಸಿಕೊಂಡಿದ್ದು, ಅದರಲ್ಲಿ ಅಪ್ರಾಪ್ತ ಹುಡುಗಿಯರ ಹಲವು ಅಶ್ಲೀಲ ವಿಡಿಯೋಗಳು ಕಂಡುಬಂದಿದೆ ಎನ್ನಲಾಗಿದೆ. ಇನ್ನೂ ಕೆಲವೊಂದು ವರದಿಗಳ ಪ್ರಕಾರ ಈ ಆರೋಪಿ ದಂಪತಿ ಹುಡುಗಿಯರ ಅನೇಕ ವಿಡಿಯೋಗಳನ್ನು ಅವರ ಒಪ್ಪಿಗೆಯಿಲ್ಲದೇ ರಹಸ್ಯ ಕ್ಯಾಮೆರಾದಲ್ಲಿ ಚಿತ್ರೀಕರಣ ಮಾಡುತ್ತಿದ್ದರಂತೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಿದಾಗ ಉದ್ಯಮಿ ಹಾಗೂ ಆತನ ಪತ್ನಿ ತನ್ನ ಸ್ವಂತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದಾರೆ ಹಾಗೂ ಮಗಳ ವಿಡಿಯೋವನ್ನು ಸಹ ಇತರೆ ಹುಡುಗಿಯರೊಂದಿಗೆ ಚಿತ್ರೀಕರಿಸಿದ್ದಾರೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ಇನ್ನೂ ಈ ಸಂಬಂಧ ದಂಪತಿಯ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ ದಂಪತಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಅಪ್ರಾಪ್ತ ಬಾಲಕಿಯನ್ನು ಸರ್ಕಾರಿ ಆರೈಕೆ ಕೇಂದ್ರದಲ್ಲಿ ಇರಿಸಲಾಗಿದೆ. ಆರೋಪಿಗಳ ಮೊಬೈಲ್ ಗಳು ಹಾಗೂ ಇತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಂಡು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.