Crime News ಪ್ರೀತಿಗಾಗಿ ಕೊಲೆಗಳು, ಘರ್ಷಣೆಗಳು ನಡೆಯುವಂತಹ ಸುದ್ದಿಗಳನ್ನು ಆಗಾಗ ಕೇಳುತ್ತಲೇ ಇರುತ್ತೇವೆ. ಗುವಾಹಟಿಯಲ್ಲೊಬ್ಬ ಪಾಗಲ್ ಪ್ರೇಮಿ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು (Crime News) ಹತ್ಯೆ ಮಾಡಿದ್ದಾನೆ. ಕೊಲೆಯ ಬಳಿಕ ತಾನೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ತಾನು ಪ್ರೀತಿಸುತ್ತಿದ್ದ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಗುವಾಹಟಿಯ ಲೇಟ್ ಗೇಟ್ ಪ್ರದೇಶದ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ. ಮೃತ ದುರ್ದೈವಿಯನ್ನು ಮೌಸುಮಿ ಗೋಗೊಯ್ ಎಂದು ಗುರ್ತಿಸಲಾಗಿದೆ. ಆರೋಪಿಯನ್ನು ಭೂಪೇನ್ ದಾಸ್ ಎಂದು ಗುರ್ತಿಸಲಾಗಿದೆ. ಲೇಟ್ ಗೇಟ್ ವ್ಯಾಪ್ತಿಯಲ್ಲಿರುವ ಮಹಿಳೆಯ ನಿವಾಸ ಬಳಿಯೇ ಈ ಕೊಲೆ ನಡೆದಿದ್ದು, ಈ ಭೀಕರ ಕೃತ್ಯ ಅಲ್ಲಿದ್ದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಸದ್ಯ ಆರೋಪಿ ಭೂಪೇನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನನ್ನು ಶೀಘ್ರದಲ್ಲೇ ತಮ್ಮ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.
ಮೃತ ದುರ್ದೈವಿ ಗೋಗೊಯ್ ಆಪ್ ಮೂಲಕ ಬುಕ್ ಮಾಡಿದ್ದ ವಾಹನಕ್ಕಾಗಿ ಕಾಯುತ್ತಿದ್ದಳಂತೆ. ಈ ಸಮಯದಲ್ಲಿ ಆರೋಪಿ ಭೂಪೇನ್ ತನ್ನ ಕಾರಿನಲ್ಲಿ ಬಂದು, ಗೋಗೊಯ್ ಗೆ ಇರಿದಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಿದ್ದಾನೆ. ಕೂಡಲೇ ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಆಕೆ ಮೃತಪಟ್ಟಿದ್ದಾಳೆ. ಕೆಲವು ದಿನಗಳ ಹಿಂದೆಯಷ್ಟೆ ಗೋಗೊಯ್ ತನಗೆ ಜೀವ ಬೆದರಿಕೆ ಇದೆ ಎಂದು ಬೆದರಿಕೆ ಹಾಕಿರುವ ವ್ಯಕ್ತಿಯ ವಿರುದ್ದ ಪಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು ಎಂದು ತಿಳಿದುಬಂದಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.