Crime News: ಬೆಳ್ಳಂಬೆಳಗ್ಗೆ ಗುಡಿಬಂಡೆಯಲ್ಲಿ ಶೂಟೌಟ್, ಓರ್ವ ಸಾವು, ಚಿಕ್ಕಪ್ಪನ ಮೇಲೆ ಗುಂಡು ಹಾರಿಸಿದ ಆರೋಪಿ…!

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಶೂಟೌಟ್ (Crime News) ನಡೆದಿದೆ. ಈ ವೇಳೆ ಓರ್ವ ಮೃತಪಟ್ಟಿದ್ದು, ಇನ್ನೊಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗ್ರಾಮದ ನಿವಾಸಿ ನಜೀರ್ ಹಾಗೂ ಅವರ ತಂದೆ ಬಾಬು ಸಾಬಿ ರವರುಗಳ ಮೇಲೆ ಮಚ್ಚು ಹಾಗೂ ಗನ್ ನಿಂದ ಧಾಳಿ ನಡೆಸಲಾಗಿದೆ.

ಮೃತ ದುರ್ದೈವಿ ಯನ್ನು ನಜೀರ್ ಅಹ್ಮದ್ (60) ಎಂದು ಗುರ್ತಿಸಲಾಗಿದೆ. ನಜೀರ್ ಮತ್ತು ಬಾಬು ಸಾಬಿ ಎಂದಿನಂತೆ ಬೆಳಿಗ್ಗೆ ನಮಾಜ್ ಮಾಡಲು ಮಸೀದಿಗೆ ಹೋಗುತ್ತಿದ್ದಾಗ ಬಾಬು ಸಾಬಿ ಅವರ ತಮ್ಮ ಬಶೀರ್ ಅಹಮದ್ (66) ಗನ್ ನಲ್ಲಿ ಶೂಟ್ (Crime News) ಮಾಡಿದ್ದಾನೆ ಎನ್ನಲಾಗಿದೆ. ಇದರಿಂದ ನಜೀರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಾಬು ಸಾಬಿ ಮೇಲೆ ಲಾಂಗ್ ಗಳಿಂದ ಹಲ್ಲೆ (Crime News) ಮಾಡಿರುವ ಕಾರಣ ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ್ದು, ಅಲ್ಲಿ ಹೆಚ್ಚಿನ ಚಿಕಿತ್ಸೆ ಸಿಗದ ಕಾರಣ ಬೆಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳು ಬಾಬು ಸಾಬಿ ತೀರ್ವವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆರೋಪಿ ಸೌದಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಇತ್ತೀಚೆಗಷ್ಟೆ ಗುಡಿಬಂಡೆಗೆ ಬಂದಿದ್ದ. ಇನ್ನೂ ಬಶೀರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೂ ಸ್ಥಳಕ್ಕೆ ಚಿಕ್ಕಬಳ್ಳಾಪುರ ಹಾಗೂ ಗುಡಿಬಂಡೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

Next Post

Union Budget 2024: ಕೇಂದ್ರ ಬಜೆಟ್ ನಲ್ಲಿ ಬಿಜೆಪಿ ಕರ್ನಾಟಕಕ್ಕೆ ಚೆಂಬು ಕೊಟ್ಟಿದೆ ಎಂದ ಸಿಎಂ ಸಿದ್ದು….!

Wed Jul 24 , 2024
Union Budget 2024 ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದ್ದಾರೆ. ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ಬಜೆಟ್ ಚೆಂಬು ನೀಡಿದೆ, ಕರ್ನಾಟಕಕ್ಕೆ ಪಂಗನಾಮ ಹಾಕಿದ್ದಾರೆ, ರಾಜ್ಯಕ್ಕೆ ಬಜೆಟ್ ನಲ್ಲಿ ಏನೂ ಕೊಟ್ಟಿಲ್ಲ.ಕರ್ನಾಟಕದಿಂದ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ರವರು ಕರ್ನಾಟಕವನ್ನು ಕಡೆಗಣಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಬಜೆಟ್ 2024 ರ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾದ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಆಂಧ್ರಪ್ರದೇಶ, ಬಿಹಾರ […]
Siddarmaaiah comments about budget 1
error: Content is protected !!