Crime News: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ, 8ರಿಂದ 9 ಲಕ್ಷ ಮೌಲ್ಯ ಕಳವು….!

ಗುಡಿಬಂಡೆ:  ತಾಲೂಕಿನ ದಪ್ಪರ್ತಿ ಗ್ರಾಮ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಸುಮಾರು 8ರಿಂದ 9 ಲಕ್ಷ ಮೌಲ್ಯದ ಬೆಳ್ಳಿ, ಬಂಗಾರ, ಹುಂಡಿ ಹಣ ಸಿಸಿಕ್ಯಾಮರ ಡಿವಿಆರ್ ದೋಚಿ (Crime News) ಪರಾರಿಯಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

theft in Dapparthi temple 1

ಮಂಗಳವಾರ ರಾತ್ರಿ 1-30 ರ ಸಮಯದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವಸ್ಥಾನದಲ್ಲಿ ಅಳವಡಿಸಿದ್ದ ಸಿಸಿ ಟಿವಿಗಳನ್ನು ಬೇರೆ ಕಡೆಗೆ ತಿರುಗಿಸಿ, ವೈರ್‌ಗಳನ್ನು ಕಟ್ ಮಾಡಿ ಡಿ.ವಿ.ಆರ್‌ ಕದ್ದು, ದೇವಾಲಯ ಒಳಗೆ ಬಿರುವನಲ್ಲಿದ್ದ 2.75 ಕೆ.ಜಿ ಬೆಳ್ಳಿ ಕವಚ, 1 ಕೆಜಿ ಬೆಳ್ಳಿಯ ಪೂಜೆ ಸಾಮಾನು, 15 ಗ್ರಾಂ ಚಿನ್ನದ ತಾಳಿ ಮತ್ತು ಹುಂಡಿಯಲ್ಲಿದ್ದ ಸುಮಾರು 50 ಸಾವಿರ ಹಣ ಕಳವಾಗಿದ್ದು, ಒಟ್ಟಾರೆ ಸುಮಾರು 8 ರಿಂದ 9 ಲಕ್ಷ ಎಂದು ಅಂದಾಜಿಸಲಾಗಿದೆ.

ಬುಧವಾರ ಬೆಳಿಗ್ಗೆ ಸುಮಾರು 6 ಗಂಟೆ ಸಮಯದಲ್ಲಿ ದಪ್ಪರ್ತಿ ಗ್ರಾಮದ ವೆಂಕಟರೆಡ್ಡಿ ಕಸವನ್ನು ತಿಪ್ಪಗೆ ಹಾಕಲು ಹೋಗಿದ್ದಾಗ ದೇವಸ್ಥಾನದ ಕಾಂಪೌಂಡ್‌ಗೆ ಏಣಿಯನ್ನು ಹಾಕಿರುವುದು ಗಮನಿಸಿ ದೇವಸ್ಥಾನದ ಬಾಗಿಲು ಕಡೆ ನೋಡಿದಾಗ ಬಾಗಿಲು ತೆಗೆದಿರುವುದು ಗಮನಿಸಿದ ಅವರು ಕೂಡಲೇ ದೇವಾಲಯದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮುರಳಿಗೆ ದೂರವಾಣಿ ಮೂಲಕ ಮಾಹಿತಿ ತಿಳಿಸಿದ್ದಾರೆ.

theft in Dapparthi temple 2

ಮಾಹಿತಿ ತಿಳಿದ ದೇವಾಲಯದ ಅರ್ಚಕರು,  ಗ್ರಾಮಸ್ಥರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ಬಾಗಿಲು ತೆರೆದಿದ್ದು ಒಳಗೆ ಹೋಗಿ ನೋಡಿದಾಗ ದೇವಾಲಯದಲ್ಲಿ ಕಳ್ಳತನವಾಗಿರುವುದು ದೃಡಪಟ್ಟಿರುತ್ತದೆ. ದೇವಾಲಯದ ಅರ್ಚಕ ವರ್ಲಕೊಂಡ ಕೆ.ವಿ.ವೆಂಕಟನರಸಿಂಹಾಚಾರ್ ಶನಿವಾರ ಬೆಳಿಗ್ಗೆ 9-00 ಗಂಟೆಯಲ್ಲಿ ಪೂಜೆ ಮುಗಿಸಿ ಎಂದಿನಂತೆ ದೇವಾಲಯದ ಬಾಗಿಲುಗಳನ್ನು ಹಾಕಿಕೊಂಡು ಹೋಗಿರುತ್ತಾರೆ. ಬುಧವಾರ ಬೆಳಿಗ್ಗೆ ಕಳ್ಳತನವಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.

ಸ್ಥಳಕ್ಕೆ ಗುಡಿಬಂಡೆ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ನಯಾಜ್ ಬೇಗ್, ಸಬ್ ಇನ್ಸ್ ಪೆಕ್ಟರ್ ಗಣೇಶ್, ಬೆರಳಚ್ಚು ತಜ್ಞರು ಮತ್ತು ಶ್ವಾನದಳ, ಗುಡಿಬಂಡೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Next Post

Retired Employees: ಪರಿಷ್ಕೃತ ವೇತನ ಶ್ರೇಣಿಯಲ್ಲಿ ನಿವೃತ್ತಿ ಸೌಲಭ್ಯ ಒದಗಿಸಲು ಆಗ್ರಹ

Wed Oct 2 , 2024
ರಾಜ್ಯ ಸರ್ಕಾರ 7ನೇ ವೇತನ ಆಯೋಗದ (7th Pay) ಶಿಪಾರಸ್ಸುಗಳ ಅನುಷ್ಠಾನ ಮಾಡಿದ್ದು, ಅದರಲ್ಲಿ ಪಿಂಚಣಿದಾರರಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿ ನಿವೃತ್ತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಆಗ್ರಹಿಸಿ (Retired Employees) ಕರ್ನಾಟಕ ನಿವೃತ್ತ ನೌಕರರ ವೇದಿಕೆ ತಾಲ್ಲೂಕು ಘಟಕದ ವತಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಹಸೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಜಿಲ್ಲಾ ಘಟಕದ ಡಾ.ನಾರಾಯಣಸ್ವಾಮಿ 7ನೇ ವೇತನ ಆಯೋಗದ […]
Retired employees protest
error: Content is protected !!