Crime News – ಅತ್ಯಾಚಾರಿಗಳಿಗೆ ದೇಶದಲ್ಲಿ ಕಠಿಣ ಶಿಕ್ಷೆಯಿದ್ದರೂ ಸಹ ದೇಶದ ಹಲವು ಕಡೆ ಪ್ರತಿನಿತ್ಯ ಒಂದಲ್ಲ ಒಂದು ರೀತಿಯ ದೌರ್ಜನ್ಯಗಳು ನಡೆಯುತ್ತಲೇ ಇರುತ್ತದೆ. ಮತಷ್ಟು ಕಠಿಣ ಶಿಕ್ಷೆಯನ್ನು ವಿಧಿಸಬೇಕೆಂಬ ಕೂಗೂ ಸಹ ಕೇಳಿಬರುತ್ತಿದೆ. ಉತ್ತರ ಪ್ರದೇಶದ ನರ್ಸ್ ಒಬ್ಬರ ಮೇಲೆ ಇಬ್ಬರು ಕಾಮುಕರು ಅತ್ಯಾಚಾರವೆಸಗಿ, (Crime News) ಆಕೆಗೆ ಇನ್ನಿಲ್ಲದ ರೀತಿಯಲ್ಲಿ ಚಿತ್ರಹಿಂಸೆ ನೀಡಿದ್ದಾರೆ. ಆಕೆಯ ಖಾಸಗಿ ಭಾಗಕ್ಕೆ ಕೋಲು ಹಾಗೂ ಮೆಣಸಿನ ಪುಡಿ ಹಾಕಿ ವಿಕೃತಿ ಮೆರೆದಿದ್ದಾರೆ ಎಂದು ಹೇಳಲಾಗಿದೆ.
ಉತ್ತರ ಪ್ರದೇಶದ ಜಲೌನ್ ನಲ್ಲಿ ಈ ಭೀಕರ ಘಟನೆ ನಡೆದಿದೆ ಎನ್ನಲಾಗಿದೆ. ಚುರ್ಖಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಒಬ್ಬರ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ ಆರೋಪ ಕೇಳಿಬಂದಿದೆ. ಸಂತ್ರಸ್ತೆ ನರ್ಸ್ ಕೆಲಸಕ್ಕೆ ಹೋಗುವಾಗ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಸ್ಕೂಟರ್ ಮೂಲಕ ನರ್ಸ್ ಕೆಲಸಕ್ಕೆ ಹೋಗುವಾಗ ಅಡ್ಡಗಟ್ಟಿದ ಕಾಮುಕರು ಆಕೆಯನ್ನು ಪೊದೆಯೊಳಗೆ ಎಳೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತೆಯ ಪತಿ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ಆದರೆ ಈ ಸಂಬಂಧ ಅಲ್ಲಿನ ಪೊಲೀಸರು ಬೇರೆಯ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಸಂತ್ರಸ್ತೆ ಮಹಿಳೆಯು ತನ್ನ ಹಳ್ಳಿಯ ಬೇರೆ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು, ಈ ವಿವಾದದ ಸಂದರ್ಭದಲ್ಲಿ ವ್ಯಕ್ತಿ ಹಾಗೂ ಆತನ ಕುಟುಂಬದವರು ಆಕೆಯ ಮೇಲೆ ಹ್ಲೆ ನಡೆಸಿದ್ದಾರೆ. ಸಾಮೂಹಿಕ ಅತ್ಯಾಚಾರ ನಡೆದ ಬಗ್ಗೆ ಯಾವುದೇ ಸಾಕ್ಷಿ-ಪುರಾವೆಗಳಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ ಎನ್ನಲಾಗಿದೆ. ಈ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ಈ ಘಟನೆಯ ಕುರಿತು ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣವನ್ನು ಸಂಪೂರ್ಣ ಹಾಗೂ ನಿಷ್ಪಕ್ಷವಾಗಿ ತನಿಖೆ ನಡೆಸಬೇಕೆಂದು ಅನೇಕರು ಆಗ್ರಹಿಸಿದ್ದಾರೆ.