HomeNationalCrime News: ನರ್ಸ್ ಗೆ ಚಿತ್ರಹಿಂಸೆ ಕೊಟ್ಟು ಅತ್ಯಾಚಾರವೆಸಗಿದ ಪಾಪಿಗಳು, ಗುಪ್ತಾಂಗಕ್ಕೆ ಮೆಣಸಿಣ ಪುಡಿ ಹಾಕಿ...

Crime News: ನರ್ಸ್ ಗೆ ಚಿತ್ರಹಿಂಸೆ ಕೊಟ್ಟು ಅತ್ಯಾಚಾರವೆಸಗಿದ ಪಾಪಿಗಳು, ಗುಪ್ತಾಂಗಕ್ಕೆ ಮೆಣಸಿಣ ಪುಡಿ ಹಾಕಿ ಚಿತ್ರಹಿಂಸೆ?

Crime News – ಅತ್ಯಾಚಾರಿಗಳಿಗೆ ದೇಶದಲ್ಲಿ ಕಠಿಣ ಶಿಕ್ಷೆಯಿದ್ದರೂ ಸಹ ದೇಶದ ಹಲವು ಕಡೆ ಪ್ರತಿನಿತ್ಯ ಒಂದಲ್ಲ ಒಂದು ರೀತಿಯ ದೌರ್ಜನ್ಯಗಳು ನಡೆಯುತ್ತಲೇ ಇರುತ್ತದೆ. ಮತಷ್ಟು ಕಠಿಣ ಶಿಕ್ಷೆಯನ್ನು ವಿಧಿಸಬೇಕೆಂಬ ಕೂಗೂ ಸಹ ಕೇಳಿಬರುತ್ತಿದೆ. ಉತ್ತರ ಪ್ರದೇಶದ ನರ್ಸ್ ಒಬ್ಬರ ಮೇಲೆ ಇಬ್ಬರು ಕಾಮುಕರು ಅತ್ಯಾಚಾರವೆಸಗಿ, (Crime News) ಆಕೆಗೆ ಇನ್ನಿಲ್ಲದ ರೀತಿಯಲ್ಲಿ ಚಿತ್ರಹಿಂಸೆ ನೀಡಿದ್ದಾರೆ. ಆಕೆಯ ಖಾಸಗಿ ಭಾಗಕ್ಕೆ ಕೋಲು ಹಾಗೂ ಮೆಣಸಿನ ಪುಡಿ ಹಾಕಿ ವಿಕೃತಿ ಮೆರೆದಿದ್ದಾರೆ ಎಂದು ಹೇಳಲಾಗಿದೆ.

nurse assault in up

ಉತ್ತರ ಪ್ರದೇಶದ ಜಲೌನ್ ನಲ್ಲಿ ಈ ಭೀಕರ ಘಟನೆ ನಡೆದಿದೆ ಎನ್ನಲಾಗಿದೆ. ಚುರ್ಖಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಒಬ್ಬರ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ ಆರೋಪ ಕೇಳಿಬಂದಿದೆ. ಸಂತ್ರಸ್ತೆ ನರ್ಸ್ ಕೆಲಸಕ್ಕೆ ಹೋಗುವಾಗ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಸ್ಕೂಟರ್‍ ಮೂಲಕ ನರ್ಸ್ ಕೆಲಸಕ್ಕೆ ಹೋಗುವಾಗ ಅಡ್ಡಗಟ್ಟಿದ ಕಾಮುಕರು ಆಕೆಯನ್ನು ಪೊದೆಯೊಳಗೆ ಎಳೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತೆಯ ಪತಿ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ಆದರೆ ಈ ಸಂಬಂಧ ಅಲ್ಲಿನ ಪೊಲೀಸರು ಬೇರೆಯ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಸಂತ್ರಸ್ತೆ ಮಹಿಳೆಯು ತನ್ನ ಹಳ್ಳಿಯ ಬೇರೆ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು, ಈ ವಿವಾದದ ಸಂದರ್ಭದಲ್ಲಿ ವ್ಯಕ್ತಿ ಹಾಗೂ ಆತನ ಕುಟುಂಬದವರು ಆಕೆಯ ಮೇಲೆ ಹ್ಲೆ ನಡೆಸಿದ್ದಾರೆ. ಸಾಮೂಹಿಕ ಅತ್ಯಾಚಾರ ನಡೆದ ಬಗ್ಗೆ ಯಾವುದೇ ಸಾಕ್ಷಿ-ಪುರಾವೆಗಳಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ ಎನ್ನಲಾಗಿದೆ. ಈ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ಈ ಘಟನೆಯ ಕುರಿತು ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣವನ್ನು ಸಂಪೂರ್ಣ ಹಾಗೂ ನಿಷ್ಪಕ್ಷವಾಗಿ ತನಿಖೆ ನಡೆಸಬೇಕೆಂದು ಅನೇಕರು ಆಗ್ರಹಿಸಿದ್ದಾರೆ.

by Baluhttp://ismkannadanews.com
ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular