Darshan Case – ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿಯಾಗಿ ವಿಚಾರಣಾಧೀನ ಕೈದಿಯಾಗಿರುವ ದರ್ಶನ್ ಜೈಲಿನಲ್ಲಿ ರಾಯಲ್ ಆಗಿ ಬೇರೆ ರೌಡಿಗಳ ಜೊತೆ ಕಾಲ ಕಳೆಯುತ್ತಿರುವ ಪೊಟೋ, ವಿಡಿಯೋಗಳು ಸೋಷಿಯಲ್ ಮಿಡಿಯಾದಲ್ಲಿ (Darshan Case) ವೈರಲ್ ಆಗಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ (Siddaramaiah) ಗರಂ ಆಗಿದ್ದಾರೆ. ಇದರಿಂದ ಸರ್ಕಾರಕ್ಕೂ ಮುಜುಗರ ತಂದಿದ್ದು, ಕೂಡಲೇ ದರ್ಶನ್ ಸೇರಿದಂತೆ ಇತರರನ್ನು ಬೇರೆ ಜೈಲಿಗೆ (Darshan Case) ಶಿಫ್ಟ್ ಮಾಡುವಂತೆ ರಾಜ್ಯ ಪೊಲೀಸ್ ಮಹಾ ಆಯುಕ್ತರಿಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ರೇಣುಕಾಸ್ವಾಮಿ ಕೊಲೆ ಆರೋಪದ ಮೇರೆಗೆ ಪರಪ್ಪನ (Darshan Case) ಅಗ್ರಹಾರದಲ್ಲಿ ವಿಚಾರಣಾಧೀನ ಖೈದಿಯಾಗಿರುವ ದರ್ಶನ್ ಬಿಂದಾಸ್ ಆಗಿದ್ದಾರೆ ಎಂಬ ಪೊಟೋ ಹಾಗೂ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ದರಾಮಯ್ಯ, (Darshan Case) ದರ್ಶನ್ ಸೇರಿ ಇತರರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಪೊಲೀಸ್ ಮಹಾ ಆಯುಕ್ತರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ದರ್ಶನ್ ಹಾಗೂ ಅವರಿಗೆ ಹತ್ತಿರವಾಗಿರುವ (Darshan Case) ಇತರರನ್ನು ಬೇರೆ ಕಡೆ ಶಿಫ್ಟ್ ಮಾಡಲು ಸೂಚನೆ ನೀಡಿದ್ದಾರೆ. ಜೊತೆಗೆ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚನೆ ನೀಡಿದ್ದಾರೆ. ರಾಜ್ಯ ಪೊಲೀಸ್ ಮಹಾ ಆಯುಕ್ತ ಡಾ.ಅಲೋಕ್ ಮೋಹನ್ ರವರಿಗೆ (Darshan Case) ಕಾರಗಾರಗೃಹಕ್ಕೆ ಭೇಟಿ ನೀಡಿ ಪ್ರಕರಣದ ಸಂಪೂರ್ಣ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ (Darshan Case) ರಾಜಾತಿಥ್ಯ ನೀಡುತ್ತಿರುವ ಪೊಟೋ ವೈರಲ್ ಆದ ಬೆನ್ನಲ್ಲೇ ಏಳು ಮಂದಿ ಅಧಿಕಾರಿಗಳನ್ನು ಸರ್ಕಾರ ಅಮಾನತ್ತು ಮಾಡಿದೆ. (Darshan Case) ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿದ್ದು, ಇದೆಲ್ಲಾ ಹೇಗಾಯ್ತು ಎಂಬ ಕುರಿತು ವರದಿ ಕೇಳಿದ್ದೇನೆ. ಜೈಲಿನಲ್ಲಿ ಈ ರೀತಿ ನಡೆಯಬಾರದು, ಎಲ್ಲಾ ಜೈಲುಗಳಲ್ಲಿ ಜಾಮರ್, ಕ್ಯಾಮೆರಾ ಹಾಕಿದರೂ ಹೀಗೆ ಆಗುವುದು ಸರಿಯಲ್ಲ. (Darshan Case) ಜೈಲರ್ಸ್ ಗಳಾದ ಶರಣ ಬಸವ ಅಮೀನ್‌ಗಡ್, ಪ್ರಭು ಎಸ್. ಖಂಡ್ರೆ, ಅಸಿಸ್ಟೆಂಟ್ ಜೈಲರ್ಸ್ ಎಲ್.ಎಸ್. ತಿಪ್ಪೇಸ್ವಾಮಿ, ಶ್ರೀಕಾಂತ್ ತಲವಾರ್, ಹೆಡ್ ವಾರ್ಡರ್ಸ್ ವೆಂಕಪ್ಪ ಕೊರ್ಟಿ, ಸಂಪತ್ ಕುಮಾರ್ ಕಡಪಟ್ಟಿ, ವಾರ್ಡರ್ ಬಸಪ್ಪ ತೇಲಿ ಅವರನ್ನು ಅಮಾತು ಮಾಡಿದ್ದೇವೆ (Darshan Case) ಎಂದು ಮಾಹಿತಿ ನೀಡಿದರು.