Dasara Sports – ಕ್ರೀಡೆಗಳಾಗಲೀ ಅಥವಾ ಸ್ಫರ್ದೆಗಳಾಗಲಿ ಪ್ರತಿಯೊಂದರಲ್ಲಿ ಭಾಗವಹಿಸುವುದು ಮುಖ್ಯವೇ ವಿನಃ ಸೋಲು ಗೆಲುವು ಮುಖ್ಯವಲ್ಲ, ಸೋಲು-ಗೆಲುವು ಎರಡನ್ನೂ ಸಮನಾಗಿ ಸ್ವೀಕರಿಸಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕೆಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗುಡಿಬಂಡೆ ತಾಲೂಕು ಅಧ್ಯಕ್ಷ ಬಾಲಾಜಿ ಸಲಹೆ ನೀಡಿದರು.

Dasara Sports – ಕ್ರೀಡೆಗಳಿಂದ ಮಾನಸಿಕ ಹಾಗೂ ದೈಹಿಕ ಸದೃಡತೆ ಸಾಧ್ಯ
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ತಾಲ್ಲೂಕು ಆಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಯುವಜನತೆ ತಮ್ಮ ದಿನ ನಿತ್ಯದ ಕೆಲಸ ಕಾರ್ಯಗಳ ಒತ್ತಡ ತಗ್ಗಿಸಿಕೊಳ್ಳಲು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು, ವಿದ್ಯಾರ್ಥಿಗಳು ಪಠ್ಯದ ಜತೆಗೆ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗುವುದರ ಜೊತೆಗೆ ವ್ಯಕ್ತಿತ್ವದಲ್ಲೂ ಬದಲಾಗುತ್ತದೆ. ಎಲ್ಲರೂ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ಸೋಲು-ಗೆಲುವು ಎರಡನ್ನೂ ಸಮನಾಗಿ ಸ್ವೀಕರಿಸಬೇಕು. ಗ್ರಾಮೀಣ ಪ್ರತಿಭೆಗಳನ್ನು ಅನಾವರಣಗೊಳಿಸಲು ಇಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
Dasara Sports – ಯುವಜನತೆ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಕರೆ
ಶಿಕ್ಷಣ ಇಲಾಖೆಯ ಟಿಪಿಒ ಅಂಜಿನಪ್ಪ ಮಾತನಾಡಿ, ದಸರಾ ಹಬ್ಬದ ಪ್ರಯುಕ್ತ ನಡೆಯುತ್ತಿರುವ ಈ ಕ್ರೀಡಾಕೂಟ ಗ್ರಾಮೀಣ ಪ್ರದೇಶದಲ್ಲಿರುವ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿದ್ದು, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಪ್ರೋತ್ಸಾಹ ನೀಡಿದಂತಾಗುತ್ತದೆ. ಇತ್ತೀಚಿಗೆ ಮೊಬೈಲ್, ಟಿವಿ, ಇಂಟರ್ ನೆಟ್ ಗಳ ಗುಂಗಿನಲ್ಲಿ ಕ್ರೀಡಾಕೂಟಗಳಲ್ಲಿ ಯುವಜನತೆ ಭಾಗವಹಿಸುವುದು ಕಡಿಮೆಯಾಗುತ್ತಿದೆ. ಕ್ರೀಡಾಕೂಟಗಳಿಂದ ಮಾನಸಿಕ ನೆಮ್ಮದಿ ಹಾಗೂ ದೈಹಿಕ ಸದೃಡತೆ ಹೆಚ್ಚಾಗುತ್ತದೆ. ಆದ್ದರಿಂದ ಯುವಜನತೆ ಹೆಚ್ಚಾಗಿ ಕ್ರೀಡಾಕೂಟಗಳಲ್ಲಿ ಭಾಗಿಯಾಗಬೇಕು ಎಂದರು. Read this also : ಮೈಸೂರು ದಸರಾ ಗೋಲ್ಡ್ ಕಾರ್ಡ್ ಮತ್ತು ಟಿಕೆಟ್‌ಗಳ ಆನ್‌ಲೈನ್ ಖರೀದಿ ಆರಂಭ ಇಲ್ಲಿದೆ ಸಂಪೂರ್ಣ ವಿವರ…!

Dasara Sports – ವಿವಿಧ ಕ್ರೀಡಾಕೂಟಗಳ ಆಯೋಜನೆ
ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್ ಪುರುಷ ಮತ್ತು ಮಹಿಳೆಯರಿಗೆ : 100 ಮೀಟರ್, 200 ಮೀಟರ್, 400 ಮೀಟರ್, 800 ಮೀಟರ್, 1500 ಮೀಟರ್, 5ಸಾವಿರ ಮೀಟರ್ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ ಕ್ರೀಡೆಗಳು ನಡೆದವು. ಗುಂಪು ಆಟಗಳು : ವಾಲಿಬಾಲ್, ಕೊಕ್ಕೊ ಕಬಡ್ಡಿ ಥ್ರೋಬಾಲ್ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗಿತ್ತು. ತಾಲ್ಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಮೊದಲ ಸ್ಥಾನ ಪಡೆದ ಕ್ರೀಡಾಪಟುಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ವಿಜೇತರಿಗೆ ಈ ಕಾರ್ಯಕ್ರಮದಲ್ಲಿ ಗಣ್ಯರು ಪ್ರಮಾಣ ಪತ್ರಗಳನ್ನು ವಿತರಿಸಿದರು.
ಈ ಸಂಧರ್ಭದಲ್ಲಿ ಪಪಂ ಅಧ್ಯಕ್ಷ ವಿಕಾಸ್, ಸದಸ್ಯರಾದ ಅಂಬರೀಶ್, ಆದಿನಾರಾಯಣಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶ್ರೀರಾಮಪ್ಪ, ದೈಹಿಕ ಶಿಕ್ಷಕರಾದ ಮುರಳಿ, ಮನೋಹರ್, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಕ್ರೀಡಾಪಟುಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
