Wednesday, July 9, 2025
HomeStateAnganawadi Food: ಅಂಗನವಾಡಿಯಿಂದ ಕೊಟ್ಟ ಪೌಷ್ಟಿಕ ಆಹಾರದಲ್ಲಿ ಸತ್ತ ಇಲಿ ಪತ್ತೆ ಆರೋಪ

Anganawadi Food: ಅಂಗನವಾಡಿಯಿಂದ ಕೊಟ್ಟ ಪೌಷ್ಟಿಕ ಆಹಾರದಲ್ಲಿ ಸತ್ತ ಇಲಿ ಪತ್ತೆ ಆರೋಪ

Anganawadi Food – ಚಿಕ್ಕಬಳ್ಳಾಪುರದ ಗುಡಿಬಂಡೆ  ತಾಲ್ಲೂಕಿನ ಹಂಪಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ವಿತರಿಸಲಾದ ಬೆಲ್ಲದ (Anganawadi Food) ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಗರ್ಭಿಣಿ ಸ್ತ್ರೀಯರು, ಬಾಣಂತಿಯರಿಗೆ ಅಂಗನವಾಡಿ ಕೇಂದ್ರದಲ್ಲಿ ವಿತರಿಸಲಾದ ಪೌಷ್ಟಿಕ (Anganawadi Food) ಆಹಾರ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾಗಿದೆ.

ಗರುಡಾಚಾರ್ಲಹಳ್ಳಿ ಗ್ರಾಮದ ನಿವಾಸಿ ರತ್ನಮ್ಮ ಎಂಬುವರಿಗೆ ನೀಡಿದ ಎರಡು (Anganawadi Food) ಆಹಾರ ಪೊಟ್ಟಣಗಳ ಪೈಕಿ ಒಂದರಲ್ಲಿ ಈ ಸತ್ತ ಇಲಿ ಕಂಡುಬಂದಿವೆ. ಕೂಡಲೇ ಅವರು ಬೆಲ್ಲದ ಪೊಟ್ಟಣಗಳನ್ನು ಅಂಗನವಾಡಿ ಕಾರ್ಯಕರ್ತೆ ಗಮನಕ್ಕೆ ತಂದಿದ್ದಾರೆ.  ಪೊಟ್ಟಣದಲ್ಲಿ ಇರುವ ಬೆಲ್ಲ ಹಾಲಿಗೆ ಬಳಸಲು, ಮಕ್ಕಳಿಗೆ ಕೊಡಲು ಭಯವಾಗುತ್ತದೆ ಎಂದು ರತ್ನಮ್ಮ ಆತಂಕ ವ್ಯಕ್ತಪಡಿಸಿದರು. ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುವ (Anganawadi Food) ಪೊಟ್ಟಣಗಳನ್ನು ನಾವು ಇಲ್ಲಿ ತಯಾರು ಮಾಡುವುದಿಲ್ಲ. ನಮಗೆ ಮೂಟೆಗಳಲ್ಲಿ ಬಾಗೇಪಲ್ಲಿ ತಾಲ್ಲೂಕಿನ ಯಲ್ಲಂಪಲ್ಲಿ ಎಂ.ಎಸ್.ಪಿ.ಸಿ ಯವರು ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಾರೆ. ನಾವು ಅವನ್ನು ವಿತರಿಸಿದ್ದೇವೆ ಅಷ್ಟೇ. (Anganawadi Food) ಪ್ಯಾಕೆಟ್ ಒಳಗೆ ಇಲಿ ಸತ್ತಿರುವುದಕ್ಕೂ ನಮಗೂ ಸಂಬಂಧವಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆ ಭಾಗ್ಯಮ್ಮ ಪ್ರತಿಕ್ರಿಯಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ (Anganawadi Food) ಅಂಗನವಾಡಿಗಳಿಗೆ ಪೂರೈಸುವ ಈ ಪೌಷ್ಟಿಕ ಆಹಾರ ಪೊಟ್ಟಣಗಳು ಬಾಗೇಪಲ್ಲಿ ತಾಲ್ಲೂಕು ಯಲ್ಲಂಪಲ್ಲಿ ಎಂ.ಎಸ್.ಪಿ‌.ಎಸ್ ಸಂಸ್ಥೆಯಲ್ಲಿ ತಯಾರಾಗುತ್ತಿವೆ. ತಯಾರಾದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆ ಆಗಿದೆ. ಕಳಪೆ ಗುಣಮಟ್ಟದ (Anganawadi Food) ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿರುವವರ ಮೇಲೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಲು ಗ್ರಾಮಸ್ಥರು ಮನವಿ ಮಾಡಿದ್ದಾರೆ.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular