ಬಾಗೇಪಲ್ಲಿ: ಪಟ್ಟಣದ ಸರ್ಕಾರಿ ಬಾಲಕಿಯರ ಶಾಲಾ ಆವರಣದಲ್ಲಿ ಆ.15ರಂದು ನಡೆಯಲಿರುವ 78ನೇ ಸ್ವ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರ್ರಮದಲ್ಲಿ ಯಾವುದೇ ಲೋಪದೋಷ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಅದ್ದೂರಿಯಾಗಿ ಆಚರಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಾರ್ಯಕ್ರಮದ ಹಿಂದಿನ ದಿನದಿಂದಲ್ಲೇ ಪಟ್ಟಣದ ಮುಖ್ಯ ರಸ್ತೆ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳ, ಖಾಸಗಿ ಕಟ್ಟಡಗಳ ಮೇಲೆ ವಿದ್ಯುತ್ ಅಲಂಕಾರ ಮಾಡುವ ಮೂಲಕ ಹಬ್ಬದ ವಾತಾವರಣ ನಿರ್ಮಿಸಬೇಕು.
ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು, ಕಾರ್ಯಕ್ರಮದಲ್ಲಿ ಭಾಗಿಯಾಗುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ನೆರಳು ಇತ್ಯಾಧಿಗಳನ್ನು ಒದಗಿಸಬೇಕು, ಯಾವುದೇ ಕಾರಣಕ್ಕೂ ಯಾವುದೇ ರೀತಿಯ ಸಮಸ್ಯೆ ಬಾರದಂತೆ ಎಚ್ಚರವಹಿಸಿ, ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಿ ತಮಗೆ ವಹಿಸಿರುವ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಿ ಅದ್ದೂರಿಯಾಗಿ ಆಚರಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಮನೀಷಾ.ಎನ್., ತಾ.ಪಂ ಇಒ ರಮೇಶ್, ಬಿಇಒ ವೆಂಕಟೇಶ್, ಇನ್ಸ್‍ಪೆಕ್ಟರ್ ಪ್ರಶಾಂತ್ ವರ್ಣಿ, ಕೃಷಿ ಇಲಾಖೆ ಅಧಿಕಾರಿ ಲಕ್ಷ್ಮೀ, ಬಿಸಿಎಂ ಇಲಾಖೆ ಅಧಿಕಾರಿ ಶಿವಪ್ಪ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.